ಎಲ್ಲ ಭಾಷೆಗಳನ್ನು ಗೌರವಿಸಿ: ರಾಜೇಂದ್ರ ಸ್ವಾಮೀಜಿ

Team Udayavani, Dec 31, 2021, 12:18 PM IST

12languages

ಗುರುಮಠಕಲ್‌: ಪರಸ್ಪರ ವಿಶ್ವಾಸ ಬೆಳೆದು ಭಾರತ ಮಾತೆಯ ಸಹೋದರತ್ವದ ಭಾವನೆ ಬೆಳೆಯಲು ಎಲ್ಲ ಭಾಷೆಗಳನ್ನು ಗೌರವಿಸಬೇಕು ಎಂದು ಖಾಸಾಮಠದ ಪೂಜ್ಯ ಶ್ರೀ ಶಾಂತವೀರ ಗುರುಮುರುಘ ರಾಜೇಂದ್ರ ಸ್ವಾಮಿಗಳು ಹೇಳಿದರು.

ಪಟ್ಟಣದ ಖಾಸಾಮಠ ಆವರಣದಲ್ಲಿ ಖಾಸಾಮಠ ಹಾಗೂ ಕಲಬುರ್ಗಿಯ ಹಜರತ್‌ ಸೂಫಿ ಸರ್‌ಮಸ್ತ್ ಇಸ್ಲಾಮಿಕ್‌ ಸ್ಟಡಿ ಸರ್ಕಲ್‌ ಆಶ್ರಯದಲ್ಲಿ ಆಯೋಜಿಸಿದ್ದ ಬಹುಭಾಷೆಯ ಕವಿಗಳ ಸಂಗಮ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಗಡಿನಾಡು ಆಗಿರುವ ಬೆಳಗಾವಿಯಲ್ಲಿ ಕೆಲ ಕಿಡಿಗೇಡಿಗಳು ನಾಡಧ್ವಜ ಸುಟ್ಟುಹಾಕಿದ್ದು, ಕನ್ನಡಿಗರ ಮಹಾನ್‌ ವ್ಯಕ್ತಿಗಳ ಪ್ರತಿಮೆಗಳಿಗೆ ಮಸಿ ಬಳಸಿ ಅಂಧ ಭಾಷಾಭಿಮಾನ ಮೆರೆದು ಅಶಾಂತಿ ಉಂಟುಮಾಡುತ್ತಿದ್ದಾರೆ. ನಾವು ಭಾರತೀಯರು ಎಂಬುದನ್ನು ಮರೆಯುತ್ತಿದ್ದಾರೆ ಎಂದು ವಿಷಾದ ವ್ಯಕ್ತಪಡಿಸಿದರು.

ಎಲ್ಲರೂ ಎಲ್ಲ ಭಾಷೆಗಳನ್ನು ಗೌರವಿಸಿ ಮಾನವೀಯತೆ ಮೆರೆಯಬೇಕಾಗಿದೆ. ರಾಜ್ಯ ಗಡಿಯಲ್ಲಿ ಭಾಷೆಗಳ ನಡುವೆ ಕಂದಕ ಉಂಟುಮಾಡದೇ ಎಲ್ಲರೂ ಸಹೋದರರು ಎಂಬ ತತ್ವದಿಂದ ಬಾಳಬೇಕಾಗಿದೆ. ಇದರ ಗೊಜಲನ್ನು ಹೋಗಲಾಡಿಸಲು ಬಹುಭಾಷೆ ಕವಿಗೋಷ್ಠಿ ಆಯೋಜಿಸಲಾಗಿದೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ವಿಶ್ವನಾಥ ಗೊಂದಡಗಿ, ಲಿಂಗನಂದಗೋಗಿ, ಶಾಂತಪ್ಪ ಯಾಳಗಿ, ರಮೇಶ ಜಾಧವ್‌, ಸುಶಾಂತ ಡಗೆ, ಅಮೃತ್ತಮ್ಮ, ಶಾಂತ ಸೇರಿದಂತೆ 33 ಜನ ಕವಿಗಳು ತಮ್ಮ ಸ್ವರಚಿತ ಕವನ ವಾಚಿಸಿದರು. ಪುರಸಭೆ ಅಧ್ಯಕ್ಷ ಪಾಪಣ್ಣ ಮನ್ನೆ ಕಾರ್ಯಕ್ರಮ ಉದ್ಘಾಟಿಸಿದರು. ಹಿರಿಯ ಉಪನ್ಯಾಸಕ ಅಖಂಡೇಶ್ವರ ಹಿರೇಮಠ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಲಬುರ್ಗಿಯ ಹಜ್ರತ್‌ ಸೂಫಿ ಸರ್‌ಮಸ್ತ ಇಸ್ಲಾಮಿಕ್‌ ಸ್ಟಡಿ ಸರ್ಕಲ್‌ ಸಂಸ್ಥೆ ಅಧ್ಯಕ್ಷ ಅಜೀಜ್‌ ಉಲ್ಲ ಸರ್‌ಮಸ್ತ್, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಇಂಧೂದರ್‌ ಸಿನ್ನೂರ, ತಾಲೂಕು ನೌಕರರ ಸಂಘದ ಅಧ್ಯಕ್ಷ ಸಂತೋಷಕುಮಾರ ನಿರೇಟಿ, ನರಸರೆಡ್ಡಿ ಗಡ್ಡೆಸುಗೂರ, ತಾಲೂಕು ಸರಕಾರಿ ನೌಕರರ ಪ್ರಾಥಮಿಕ ಶಾಲೆ ಸಂಘದ ಅಧ್ಯಕ್ಷ ನಾರಾಯಣರೆಡ್ಡಿ ಪೊಲೀಸ್‌ ಪಾಟೀಲ ಸೇರಿದಂತೆ ಇತರರು ಇದ್ದರು.

ಟಾಪ್ ನ್ಯೂಸ್

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

5-video

ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

Amazon Employee: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

3-yellapur

Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

Three Nation Trip: ಮೂರು ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yadgir: ಅಪ್ರಾಪ್ತೆ ಮೇಲೆ ಅತ್ಯಾಚಾರ… ಪ್ರಕರಣ ದಾಖಲು

Yadgir: ಅಪ್ರಾಪ್ತೆ ಮೇಲೆ ಅತ್ಯಾಚಾರ… ಪ್ರಕರಣ ದಾಖಲು

Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರು ಪಾಲು

Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರುಪಾಲು

Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ

Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ

ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ

Yadagiri: ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ

ಕಳ್ಳರ ಮಾಹಿತಿ ನೀಡಿದ್ದೇ ಮುಳುವಾಯ್ತು… ಜೈಲಿನಿಂದ ಬರುತ್ತಿದ್ದಂತೆ ವ್ಯಕ್ತಿಯ ಹತ್ಯೆ

ಕಳ್ಳರ ಮಾಹಿತಿ ನೀಡಿದ್ದೇ ಮುಳುವಾಯ್ತು… ಜೈಲಿನಿಂದ ಬರುತ್ತಿದ್ದಂತೆ ವ್ಯಕ್ತಿಯ ಹತ್ಯೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

5-video

ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

4-siruguppa

Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್‌; ಎತ್ತು ಸಾವು

Amazon Employee: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.