ಹೋಟೆಲ್ ಸಿಬ್ಬಂದಿ ಜೊತೆ ಡ್ಯಾನ್ಸ್ ಮಾಡಿದ ವಿರಾಟ್, ದ್ರಾವಿಡ್: ವಿಡಿಯೋ ವೈರಲ್
Team Udayavani, Dec 31, 2021, 3:37 PM IST
ಸೆಂಚೂರಿಯನ್: ದಕ್ಷಿಣ ಆಫ್ರಿಕಾ ಪ್ರವಾಸವನ್ನು ಜಯದೊಂದಿಗೆ ಶುಭಾರಂಭ ಮಾಡಿದ ಭಾರತ ತಂಡದ ಆಟಗಾರರು ಪಂದ್ಯದ ಬಳಿಕ ಕುಣಿದು ಕುಪ್ಪಳಿಸಿದ್ದಾರೆ. ಸೆಂಚೂರಿಯನ್ ನ ಸೂಪರ್ ಸ್ಪೋರ್ಟ್ಸ್ ಪಾರ್ಕ್ ನಲ್ಲಿ ನಡೆದ ಮೊದಲ ಪಂದ್ಯವನ್ನು ಸುಲಭದಲ್ಲಿ ಗೆದ್ದ ವಿರಾಟ್ ಪಡೆ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ಈ ಮೂಲಕ ಹರಿಣಗಳ ನಾಡಿನಲ್ಲಿ ಇದೇ ಮೊದಲ ಬಾರಿಗೆ ಟೆಸ್ಟ್ ಸರಣಿ ಜಯಿಸುವ ಭರವಸೆ ಮೂಡಿಸಿದೆ.
ಪಂದ್ಯ ಜಯಿಸಿದ ಖುಷಿಯಲ್ಲಿ ಆಟಗಾರರು ಹೋಟೆಲ್ ಸಿಬ್ಬಂದಿಯ ಜೊತೆಗೆ ಡ್ಯಾನ್ಸ್ ಮಾಡಿದ್ದಾರೆ. ಸ್ಥಳೀಯ ಸಂಗೀತಕ್ಕೆ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ, ಕೋಚ್ ರಾಹುಲ್ ದ್ರಾವಿಡ್ ಸೇರಿದಂತೆ ಆಟಗಾರರು ಕುಣಿದಿದ್ದಾರೆ.
ಇದನ್ನೂ ಓದಿ:ಟೆಸ್ಟ್ ಕ್ರಿಕೆಟ್ ಗೆ ದಿಢೀರ್ ವಿದಾಯ ಘೋಷಿಸಿದ ಕ್ವಿಂಟನ್ ಡಿ ಕಾಕ್
ಮೊದಲ ಪಂದ್ಯವನ್ನು ಭಾರತ ತಂಡ 113 ರನ್ ಅಂತರದಿಂದ ಗೆದ್ದುಕೊಂಡಿದೆ. ಬ್ಯಾಟಿಂಗ್ ನಲ್ಲಿ ಕೆ ಎಲ್ ರಾಹುಲ್, ಬೌಲಿಂಗ್ ನಲ್ಲಿ ಮೊಹಮ್ಮದ್ ಶಮಿ ಉತ್ತಮ ಪ್ರದರ್ಶನ ತೋರಿದರು. ಮುಂದಿನ ಪಂದ್ಯ ಜ.3ರಿಂದ ಜೋಹಾನ್ಸ್ ಬರ್ಗ್ ನಲ್ಲಿ ಆರಂಭವಾಗಲಿದೆ.
Virat? pic.twitter.com/RP3ZeYpYEJ
— sria (@2004sria) December 30, 2021
“ಪಂದ್ಯದ ಬಳಿಕದ ಸಾಂಪ್ರದಾಯಿಕ ಫೋಟೊಗಳು ನೀರಸವಾಗಿದ್ದವು, ಆದ್ದರಿಂದ ಚೇತೇಶ್ವರ ಪೂಜಾರ ಮತ್ತು ಮೊಹಮ್ಮದ್ ಸಿರಾಜ್ ಮೊದಲ ಬಾರಿಗೆ ಡ್ಯಾನ್ಸ್ ಮಾಡುವ ಮೂಲಕ ಅದನ್ನು ಸ್ಮರಣೀಯವಾಗಿಸಲು ನಿರ್ಧರಿಸಿದರು. ಎಂತಹ ಅದ್ಭುತ ಗೆಲುವು” ಎಂದು ರವಿ ಅಶ್ವಿನ್ ಪೋಸ್ಟ್ ಮಾಡಿದ್ದಾರೆ.
View this post on Instagram
ಕೊಹ್ಲಿ ಶ್ರೇಷ್ಠ ನಾಯಕ: ಭಾರತದ ಟೆಸ್ಟ್ ಜಯವನ್ನು ಮಾಜಿ ಆಟಗಾರ ವಿನೋದ್ ಕಾಂಬ್ಳಿ ಕೊಂಡಾಡಿದ್ದಾರೆ. ಸೆಂಚೂರಿಯನ್ ನಲ್ಲಿ ಮೊದಲ ಬಾರಿಗೆ ಟೆಸ್ಟ್ ಪಂದ್ಯ ಗೆದ್ದ ನಾಯಕ ವಿರಾಟ್ ಕೊಹ್ಲಿಯನ್ನು ವಿನೋದ್ ಕಾಂಬ್ಳಿ “ವಿಶ್ವ ಶ್ರೇಷ್ಠ ನಾಯಕ” ಎಂದು ಹೊಗಳಿದ್ದಾರೆ.
“ನಾಯಕತ್ವದಲ್ಲಿ ಬದಲಾವಣೆಯ ಮಾತುಗಳು ಕೇಳಿಬರುತ್ತಿವೆ, ಹವಾಮಾನವೂ ನಮಗೆ ವಿರುದ್ಧವಾಗಿದೆ! ಆದರೆ ನಾವು ಏನು ಮಾಡಿದ್ದೇವೆ ಎಂಬುದನ್ನು ನೋಡಿ, ನಾವು ಅದ್ಭುತಗಳನ್ನು ಮಾಡಿದ್ದೇವೆ. ಕೊಹ್ಲಿ ಅವರು ವಿಶ್ವದ ಅತ್ಯುತ್ತಮ ನಾಯಕ ಏಕೆ ಎಂಬುದನ್ನು ಸಾಬೀತುಪಡಿಸಿದ್ದಾರೆ. ಈ ಬಾರಿ ಸರಣಿಯ ಜೊತೆ ಬ್ಯಾಟಿಂಗ್ ನಲ್ಲೂ ಹಳೆಯ ಕೊಹ್ಲಿ ಹಿಂತಿರುಗಿದ್ದಾರೆ,” ಎಂದು ಕಾಂಬ್ಳಿ ‘ಕೂ’ ಸಾಮಾಜಿಕ ಜಾಲತಾಣದಲ್ಲಿ ಬರೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Australia: ಪರ್ತ್‌ಗೆ ಆಗಮಿಸಿದ ರೋಹಿತ್ ಶರ್ಮ
Pro Kabaddi League: ಬೆಂಗಾಲ್ ವಾರಿಯರ್ ಮೇಲೆ ಪುಣೇರಿ ಪಲ್ಟಾನ್ ಸವಾರಿ
RCB ತಂಡಕ್ಕೆ ಸೇರಿದ ಫಿಲ್ ಸಾಲ್ಟ್, ಜಿತೇಶ್ ಶರ್ಮ, ಹ್ಯಾಜಲ್‌ವುಡ್
IPL Auction 2025: ಸೇಲ್ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..
IPL Mega Auction: ಮೂರನೇ ಸೆಟ್ ನ ಆಟಗಾರರ ಹರಾಜು ಮಾಹಿತಿ ಇಲ್ಲಿದೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.