ಇಂದಿನಿಂದ ಬೆಂಬಲ ಬೆಲೆಯಡಿ ಭತ್ತ,ರಾಗಿ ಜೋಳ ಖರೀದಿ
ಕೇಂದ್ರ ರೈತರ ಅನುಕೂಲಕ್ಕೆ ಕಾರ್ಯ ನಿರ್ವಹಿಸಲಿ: ಉಮೇಶ್ ಕತ್ತಿ
Team Udayavani, Jan 1, 2022, 5:55 AM IST
ಬೆಂಗಳೂರು: ಇಂದಿನಿಂದ ಮಾರ್ಚ್ 31 ರ ವರೆಗೆ ಎಂ.ಎಸ್.ಪಿ ಖರಿದಿ ಕೇಂದ್ರ ಕಾರ್ಯ ನಿರ್ವಹಿಸಲಿದ್ದು, ಹಣ ನೇರವಾಗಿ ರೈತರ ಖಾತೆಗೆ ಜಮೆ ಆಗುವ ಒಳ್ಳೆಯ ಪ್ರಕ್ರಿಯೆ ಇದಾಗಿದೆ. ಆದಷ್ಟು ಹೆಚ್ಚಿನ ರೈತರಿಗೆ ಈ ಯೋಜನೆಯ ಲಾಭ ಸಿಗುವಂತೆ ಕಾರ್ಯೋನ್ಮುಖ ಆಗುವಂತೆ ಸಚಿವ ಉಮೇಶ್ ಕತ್ತಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ರಾಜ್ಯದ ರೈತರಿಗೆ ಅನಕೂಲ ಆಗುವ ದೃಷ್ಟಿಯಿಂದ ಎಂ.ಎಸ್ ಪಿ ಯೋಜನೆ ಅಡಿಯಲ್ಲಿ, ಜೋಳ, ರಾಗಿ ಹಾಗೂ ಭತ್ತ ಖರಿದಿ ಪ್ರಕ್ರಿಯೆ ರಾಜ್ಯಾದ್ಯಂತ ಜನವರಿ 1 ರಿಂದ ಆರಂಭಿಸಲಾಗುತ್ತಿರುವ ಹಿನ್ನೆಲೆ, ಸಚಿವ ಉಮೇಶ್ ಕತ್ತಿ ಆಹಾರ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆ ವಿಧಾನಸೌಧದಲ್ಲಿ ಪೂರ್ವ ಭಾವಿ ಸಭೆ ನಡೆಸಿದರು.
ಎಂ.ಎಸ್‌ಪಿ ಯೋಜನೆ ರಾಜ್ಯದ ರೈತರಿಗೆ ಅನಕೂಲ ಆಗುವ ದೃಷ್ಟಿಯಿಂದ ಆರಂಭಿಸಲಾದ ಯೋಜನೆ. ಈ ಯೋಜನೆಯ ಲಾಭ ರಾಜ್ಯದ ಪ್ರತಿಯೊಬ್ಬ ರೈತರಿಗೂ ಸಿಗುವಂತಾಗಬೇಕು, ವ್ಯಾಪಾರಸ್ಥರು ಹಾಗೂ ದಲ್ಲಾಳಿಗಳಿಂದ ಯಾವುದೆ ಕಾರಣಕ್ಕೂ ಖರೀದಿ ಮಾಡಕೂಡದು, ಒಂದು ವೇಳೆ ವ್ಯಾಪಾರಸ್ಥರಿಂದ ಖರೀದಿ ಮಾಡಿದರೆ, ಅಂತವರ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸಚಿವ ಉಮೇಶ್ ಕತ್ತಿ ಸೂಚಿಸಿದರು.
ಇದನ್ನೂ ಓದಿ:ಬಲವಂತದ ಮದುವೆ ಯತ್ನ:ಯುವತಿ ಅಪಹರಣ;ಮೂವರ ಸೆರೆ
ಪ್ರತಿ ಕ್ವಿಂಟಲ್ ಬಿಳಿ ಜೋಳ ಮಾಲ್ದಂಡಿಗೆ 2758 ರೂಪಾಯಿ, ಪ್ರತಿ ಕ್ವಿಂಟಲ್ ಬಿಳಿ ಜೋಳ ಹೈಬ್ರಿಡ್ ಗೆ 2738 ರೂಪಾಯಿ, ಪ್ರತಿ ಕ್ವಿಂಟಲ್ ಗ್ರೇಡ್ ಎ ಭತ್ತಕ್ಕೆ 1960 ರೂಪಾಯಿ, ಪ್ರತಿ ಕ್ವಿಂಟಲ್ ಸಾಮಾನ್ಯ ಗ್ರೇಡ್ ಭತ್ತಕ್ಕೆ 1940 ರೂಪಾಯಿ ಹಾಗೂ ಪ್ರತಿ ಕ್ವಿಂಟಲ್ ರಾಗಿಗೆ 3377 ರೂಪಾಯಿ ದರ ನಿಗದಿ ಮಾಡಲಾಗಿದ್ದೂ ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಖರಿದಿ ಕೇಂದ್ರಗಳನ್ನು ಆರಂಭಿಸಲಾಗಿದೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ
Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್ ಕುಮಾರ್
Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ
Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು
Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ
Kasaragod: ಬಟ್ಟಿಪದವು; ಪ್ಲೈವುಡ್ ಮಿಲ್ಲಿಗೆ ಬೆಂಕಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.