3ರಿಂದ ಮಕ್ಕಳಿಗೆ ಕೋವಿಡ್ ಲಸಿಕೆ: ಡಾ| ಪಾಟೀಲ್
Team Udayavani, Jan 1, 2022, 3:16 PM IST
ಲಿಂಗಸುಗೂರು: ತಾಲೂಕಿನಲ್ಲಿ ಎಲ್ಲ ಕಾಲೇಜಿನ 15ರಿಂದ 18 ವರ್ಷದ ಮಕ್ಕಳಿಗೆ ಜ.3ರಿಂದ ಕೋವಿಡ್ ಲಸಿಕೆ ಹಾಕಲಾಗುತ್ತಿದೆ. ಇದಕ್ಕೆ ಪ್ರತಿಯೊಬ್ಬರು ಸಹಕಾರ ನೀಡಬೇಕು ಎಂದು ತಾಲೂಕು ಆರೋಗ್ಯಾಧಿಕಾರಿ ಡಾ| ಅಮರೇಶ ಪಾಟೀಲ್ ಹೇಳಿದರು.
ಪಟ್ಟಣದ ಮಿನಿ ವಿಧಾನಸೌಧದಲ್ಲಿ ಶುಕ್ರವಾರ ಕೋವಿಡ್ ಲಸಿಕೆ ಕಾರ್ಯದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ತಾಲೂಕಿನ ಎಲ್ಲ ಶಾಲಾ ಕಾಲೇಜಿನ 15 ವರ್ಷದಿಂದ 18 ವರ್ಷದ ಮಕ್ಕಳಿಗೆ ಕೋವಿಡ್ ಹಾಕಲಾಗುತ್ತಿದೆ. 20 ಸಾವಿರ ಮಕ್ಕಳಿಗೆ ಕೋವಿಡ್ ಲಸಿಕೆ ಹಾಕಲಾಗುವುದು. ಶಾಲೆಯಿಂದ ಹೊರಗುಳಿದ ಮಕ್ಕಳಿಗೂ ಲಸಿಕೆ ಹಾಕಲಾಗುವುದು. ಎರಡನೇ ಡೋಸ್ ಹಾಕಿಸಿಕೊಳ್ಳದವರು ಸಾರ್ವಜನಿಕ ಆಸ್ಪತ್ರೆಗೆ ಬಂದು ಎರಡನೇ ಡೋಸ್ ಲಸಿಕೆ ಹಾಕಿಸಿಕೊಳ್ಳಬೇಕು ಎಂದರು.
ತಹಶೀಲ್ದಾರ್ ಬಲರಾಮ್ ಕಟ್ಟಿಮನಿ ಅಧ್ಯಕ್ಷತೆ ವಹಿಸಿ, 15-18 ವರ್ಷದ ಮಕ್ಕಳಿಗೆ ಲಸಿಕೆ ಹಾಕುವ ಕಾರ್ಯಕ್ಕೆ ಮುಂದಾಗಿದೆ. ಇದಕ್ಕೆ ಸಾರ್ವಜನಿಕರು ಸಹಕಾರ ನೀಡಬೇಕೆಂದರು.
ಸಾರ್ವಜನಿಕ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ| ರುದ್ರಗೌಡ ಪಾಟೀಲ್, ಕ್ಷೇತ್ರ ಶಿಕ್ಷಣಾಧಿಕಾರಿ ಹುಂಬಣ್ಣ ರಾಠೊಡ್, ಸಿಡಿಪಿಒ ಶರಣಮ್ಮ ಕಾರನೂರು, ಉಪನ್ಯಾಸಕರಾದ ಸೋಮಶೇಖರ ಬಳಗಾನೂರ್ ಹಾಗೂ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Manipal KMC Hospital: ಮಲ್ಪೆ ಬೀಚ್‌ನಲ್ಲಿ ಮಧುಮೇಹ ಜಾಗೃತಿ
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
Kollegala: ಎತ್ತಿನಗಾಡಿಗೆ ಸಾಮ್ರಾಟ್ ಟರ್ಬೇ ವಾಹನ ಡಿಕ್ಕಿ; ಎತ್ತು ಸಾವು
Udupi: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್; ಉಡುಪಿ ಮಹಿಳಾ ವಿಭಾಗ ಆರಂಭ
ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.