![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Jan 1, 2022, 9:31 PM IST
ಚಿತ್ರದುರ್ಗ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರ ಮೇಲೆ ನಡೆದ ದೌರ್ಜನ್ಯ ಪ್ರಕರಣಗಳಿಗೆ ಸರಿಯಾದ ಸಾಕ್ಷಾÂಧಾರ ಸಂಗ್ರಹಿಸಿ ನ್ಯಾಯಾಲಯದಲ್ಲಿ ಖುಲಾಸೆಯಾಗದಂತೆ ನೋಡಿಕೊಳ್ಳಬೇಕು. ಆರೋಪಿಗಳು ಶಿಕ್ಷೆಯಿಂದ ಮುಕ್ತರಾಗಬಾರದು ಎಂದು ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿಸಭಾಂಗಣದಲ್ಲಿನಡೆದ ತ್ತೈಮಾಸಿಕ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರ ಮೇಲೆ ನಡೆದ ದೌರ್ಜನ್ಯ ಪ್ರಕರಣಗಳನ್ನು ವಿಳಂಬ ಮಾಡದೇ ñರಿತ್ವ ಗತಿಯಲ್ಲಿ ಇತ್ಯರ್ಥಪಡಿಸಬೇಕು. ಸಂತ್ರಸ್ಥರಿಗೆ ಸಕಾಲದಲ್ಲಿ ಪರಿಹಾರ, ಪುನರ್ವಸತಿ ಸೇರಿದಂತೆ ಸರ್ಕಾರದ ಸೌಲಭ್ಯ ತಲುಪಿಸಬೇಕು ಎಂದು ತಾಕೀತು ಮಾಡಿದರು. 16.75 ಲಕ್ಷ ರೂ. ಪರಿಹಾರ: 2021ನೇ ಸಾಲಿನಲ್ಲಿ ದೌರ್ಜನ್ಯ ನಿಯಂತ್ರಣ ಕಾಯ್ದೆ 1989ರ ಅಡಿಯಲ್ಲಿ 2021ರ ಆಗಸ್ಟ್ 1ರಿಂದ ನವೆಂಬರ್ 30ರವರೆಗೆ ಒಟ್ಟು 26 ದೌರ್ಜನ್ಯ ಪ್ರಕರಣಗಳು ದಾಖಲಾಗಿವೆ. ದೌರ್ಜನ್ಯ ಪ್ರಕರಣಗಳಿಗೆ ಸಂಬಂಧಪಟ್ಟಂತೆ ಒಟ್ಟು 16.75 ಲಕ್ಷ ರೂ. ಪರಿಹಾರ ನೀಡಲಾಗಿದೆ ಎಂದು ಸಮಾಜಕಲ್ಯಾಣ ಇಲಾಖೆ ಉಪನಿರ್ದೇಶಕಿ ಮಮತಾ ಸಭೆಗೆ ಮಾಹಿತಿ ನೀಡಿದರು.
ವಿಶೇಷ ಜಿಲ್ಲಾ ಸತ್ರ ನ್ಯಾಯಾಲಯ ಹಾಗೂ ವಿಶೇಷ ಸರ್ಕಾರಿ ಅಭಿಯೋಜಕರ ಕಚೇರಿಯಲ್ಲಿ 2021ರ ಜನವರಿ 1ರಿಂದ ನವೆಂಬರ್ 30ರವರೆಗೆ 72 ಪ್ರಕರಣಗಳು ಬಾಕಿ ಇವೆ. ನವೆಂಬರ್ ಮಾಹೆಯಲ್ಲಿ4 ಪ್ರಕರಣಗಳನ್ನು ಸ್ವೀಕರಿಸಲಾಗಿದ್ದು, 5 ಪ್ರಕರಣಗಳನ್ನು ವಿಲೇವಾರಿ ಮಾಡಲಾಗಿದೆ ಎಂದು ತಿಳಿಸಿದರು. ಸಭೆಯಲ್ಲಿ ಜಿಪಂ ಸಿಇಒ ಡಾ| ಕೆ. ನಂದಿನಿದೇವಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ. ರಾಧಿಕಾ, ಡಿವೈಎಸ್‌ಪಿ ಪಾಂಡುರಂಗ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ನಾಗೇಂದ್ರ ನಾಯ್ಕ, ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯರಾದ ಅರುಣ್ ಕುಮಾರ್, ರಾಜಪ್ಪ, ಭಕ್ತ ಪ್ರಹ್ಲಾದ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Chitradurga: ಪರೀಕ್ಷಾ ಭಯದಿಂದ ಎಸೆಸೆಲ್ಸಿ ವಿದ್ಯಾರ್ಥಿ ಆತ್ಮಹ*ತ್ಯೆ
Chitradurga: ನಿಧಿಯ ಆಸೆಗೆ ಜ್ಯೋತಿಷಿ ಮಾತು ಕೇಳಿ ನರಬಲಿ: ಅಮಾಯಕನ ಕೊಲೆ!
Stampede: ಮಹಾಕುಂಭ ಮೇಳದ ಕಾಲ್ತುಳಿತದಲ್ಲಿ ಕರ್ನಾಟಕ ಮೂಲದ ನಾಗಾಸಾಧು ಮೃತ್ಯು!
BJP ಸರ್ಕಾರದಲ್ಲೇ ಮುಡಾ ಬದಲಿ ನಿವೇಶನ ಹಂಚಿಕೆ: ಸಚಿವ ವೆಂಕಟೇಶ್
You seem to have an Ad Blocker on.
To continue reading, please turn it off or whitelist Udayavani.