ಕಾಂಗ್ರೆಸ್ ಪಾದಯಾತ್ರೆ; ಯಾರ ಅಪ್ಪಣೆಯೂ ಬೇಕಿಲ್ಲ: ಡಿಕೆಶಿ
Team Udayavani, Jan 2, 2022, 6:10 AM IST
ಬೆಂಗಳೂರು: ಮೇಕೆದಾಟು ಯೋಜನೆಯ ತ್ವರಿತ ಜಾರಿಗೆ ಒತ್ತಾಯಿಸಿ ಪಾದಯಾತ್ರೆ ಕೈಗೊಳ್ಳಲು ಯಾರ ಅಪ್ಪಣೆಯೂ ಬೇಕಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, ಗೃಹ ಸಚಿವರು ರಾಜಕೀಯವಾಗಿ ಎಳಸು. ವಯಸ್ಸಿನಲ್ಲಿ ಹಿರಿಯರಿದ್ದರೂ ಅವರಿಗೆ ತಿಳಿವಳಿಕೆ ಕಡಿಮೆ. ಪಾದಯಾತ್ರೆಗೆ ಅವಕಾಶ ಕೊಡುವ ವಿಚಾರದಲ್ಲಿ ಏನೇನೋ ಮಾತನಾಡಿದ್ದಾರೆ ಎಂದು ಟೀಕಿಸಿದರು.
ಗೃಹ ಸಚಿವರಿಗೆ ಅನುಭವ ಇಲ್ಲ. ರಸ್ತೆಯಲ್ಲಿ ನಡೆಯೋದಕ್ಕೆ ಇವರ ಅನುಮತಿ ಪಡೆಯಬೇಕಾ? ಹೋರಾಟ ಮಾಡೋದಕ್ಕೆ ಇವರ ಅನುಮತಿ ಯಾಕೆ ಬೇಕು ಎಂದು ಪ್ರಶ್ನಿಸಿದರು.
ಸಚಿವ ಅಶೋಕ್ ಅವರು ಮೇಕೆ ಮಾಂಸಕ್ಕಾಗಿ ಹೋರಾಟ ಎಂದು ಹೇಳಿದ್ದಾರೆ. ಪಾಪ, ಅಶೋಕಣ್ಣನಿಗೆ ಎಲ್ಲ ಮಾಂಸ ರುಚಿ ಗೊತ್ತಿದೆ. ಅವರಿಗೆ ಬೆಂಗಳೂರಿನ ಬಗ್ಗೆ ಕಾಳಜಿ ಇದೆಯಾ? ಅಧಿಕಾರಿಗಳನ್ನು ಕೂರಿಸಿಕೊಂಡು ವಾಸ್ತವಾಂಶ ತಿಳಿದುಕೊಳ್ಳಲಿ ಎಂದು ತಿರುಗೇಟು ನೀಡಿದರು.
ಇದನ್ನೂ ಓದಿ:ಬಾಂಗ್ಲಾದೇಶ ವಿರುದ್ಧದ ಪ್ರಥಮ ಟೆಸ್ಟ್: ಕಾನ್ವೆ ಶತಕ; ಚೇತರಿಸಿದ ಕಿವೀಸ್
ಕ್ಲಿಯರೆನ್ಸ್ ಬೇಕು
ಕಾಂಗ್ರೆಸ್ ಅಧಿಕಾರದಲ್ಲಿ ದ್ದಾಗ ಏನೂ ಮಾಡಲಿಲ್ಲ ಎಂದು ಮಾತನಾಡುತ್ತಾರೆ. ಸಿದ್ದರಾಮಯ್ಯ ಮುಖ್ಯ ಮಂತ್ರಿಯಾಗಿದ್ದಾಗಲೇ ಡಿಪಿಆರ್ ಮಾಡಿ ಕಳುಹಿಸಿದ್ದು, ಕೇಂದ್ರ ಪರಿಸರ ಇಲಾಖೆ ಕ್ರಿಯರೆನ್ಸ್ ಕೊಡಬೇಕಾಗಿದೆ. ಅದನ್ನು ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಕೊಡಲು ಆಗುವುದಿಲ್ಲ ಎಂದರು.
ಹೋರಾಟ ರಕ್ತಗತ
ಹೋರಾಟ ನನ್ನ ರಕ್ತದಲ್ಲೇ ಇದೆ. ಅದೇ ಕಾರಣದಿಂದ ಅಂದು ದೇವೇಗೌಡರ ಎದುರು ಚುನಾವಣೆಗೆ ನಿಲ್ಲಿಸಿದರು. ಚುನಾವಣೆಯಲ್ಲಿ ಸೋತಿರಬಹುದು, ಆದರೆ ನನ್ನ ಹೋರಾಟದಿಂದ ತಾನೇ ನಿಲ್ಲಿಸಿದ್ದು ಎಂದು ಪ್ರಶ್ನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
VAO ಹುದ್ದೆ: ಅಂತಿಮ ಕೀ ಉತ್ತರ ಪ್ರಕಟ
ವಾಲ್ಮೀಕಿ ನಿಗಮ ಅಕ್ರಮ ತನಿಖಾ ವರದಿ ಸಲ್ಲಿಸಲು ಸಿಬಿಐಗೆ ಹೈಕೋರ್ಟ್ ಸೂಚನೆ
Violation of the Code of Conduct; ಕೋಟ, ಗುರ್ಮೆ ವಿರುದ್ಧದ ಪ್ರಕರಣ ರದ್ದು
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
MUST WATCH
ಹೊಸ ಸೇರ್ಪಡೆ
Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್ ಕ್ಷಮೆಗೆ ವೈದ್ಯರ ಪಟ್ಟು
Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್ ವಿರುದ್ಧ ತಾಬ್ಡೆ 100 ಕೋಟಿ ದಾವೆ!
Adani: ಲಂಚ ಕೇಸ್; ಜಗನ್ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ
ನಮ್ಮಲ್ಲಿಗೆ ಬಂದರೆ ಇಸ್ರೇಲ್ ಪ್ರಧಾನಿ ಬಂಧನ: ಬ್ರಿಟನ್!
Supreme Court: ದಿಲ್ಲಿಯ 113 ಚೆಕ್ಪೋಸ್ಟ್ನಲ್ಲಿ ಪೊಲೀಸರನ್ನು ನೇಮಿಸಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.