ಹತ ಉಗ್ರನ ಗುರುತು ಪತ್ತೆಗೆ ಡಿಎನ್ಎ ಮಾದರಿ ಪರೀಕ್ಷೆ
Team Udayavani, Jan 2, 2022, 7:00 AM IST
ಶ್ರೀನಗರ: 40 ಮಂದಿ ಯೋಧರನ್ನು ಬಲಿತೆಗೆದುಕೊಂಡ 2019ರ ಪುಲ್ವಾಮಾ ಉಗ್ರರ ದಾಳಿಯ ಸಂಚುಕೋರರ ಪೈಕಿ ಬದುಕುಳಿದಿದ್ದ ಕೊನೆಯ ಉಗ್ರ ಸಮೀರ್ ದರ್ನನ್ನು ಭದ್ರತಾ ಪಡೆಗಳು ಹೊಡೆದುರುಳಿಸಿವೆ.
ಡಿ.31ರ ರಾತ್ರಿ ಜಮ್ಮು ಮತ್ತು ಕಾಶ್ಮೀರದ ಅನಂತ್ನಾಗ್ ಜಿಲ್ಲೆಯಲ್ಲಿ ನಡೆದ ಎನ್ಕೌಂಟರ್ನಲ್ಲಿ ಸಮೀರ್ ದರ್ನನ್ನು ಹತ್ಯೆಗೈಯ್ಯಲಾಗಿರುವ ಶಂಕೆಯಿದೆ ಎಂದು ಐಜಿಪಿ ವಿಜಯ್ ಕುಮಾರ್ ತಿಳಿಸಿದ್ದಾರೆ.
ಎನ್ಕೌಂಟರ್ನಲ್ಲಿ ಹತನಾದ ಉಗ್ರನ ಫೋಟೋ ನೋಡಿದರೆ, ಜೆಇಎಂ ಟಾಪ್ ಕಮಾಂಡರ್ ಸಮೀರ್ ದರ್ನನ್ನು ಹೋಲುತ್ತದೆ. ಸಮೀರ್ ಪುಲ್ವಾಮಾ ದಾಳಿಕೋರನಾಗಿದ್ದು, ಡಿಎನ್ಎ ಮಾದರಿಯನ್ನು ಹೋಲಿಕೆ ಮಾಡುವ ಮೂಲಕ ಆತನ ಗುರುತು ಖಚಿತಪಡಿಸಿಕೊಳ್ಳಲು ನಿರ್ಧರಿಸಿದ್ದೇವೆ ಎಂದೂ ವಿಜಯ್ಕುಮಾರ್ ಹೇಳಿದ್ದಾರೆ.
ಕಳೆದ ಬುಧವಾರ ಅನಂತ್ನಾಗ್ ಜಿಲ್ಲೆಯಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಉಗ್ರರನ್ನು ಹತ್ಯೆಗೈಯ್ಯಲಾಗಿತ್ತು. 2019ರ ಫೆ.14ರಂದು ಪುಲ್ವಾಮಾದಲ್ಲಿ ನಡೆದಿದ್ದ ಭೀಕರ ಆತ್ಮಾಹುತಿ ದಾಳಿಯಲ್ಲಿ 40 ಸಿಆರ್ಪಿಎಫ್ ಯೋಧರು ಹುತಾತ್ಮರಾಗಿದ್ದರು.
ಇದನ್ನೂ ಓದಿ:ಬಾಂಗ್ಲಾದೇಶ ವಿರುದ್ಧದ ಪ್ರಥಮ ಟೆಸ್ಟ್: ಕಾನ್ವೆ ಶತಕ; ಚೇತರಿಸಿದ ಕಿವೀಸ್
ಉಗ್ರನ ಹತ್ಯೆ; ಅಡಗುತಾಣ ಪತ್ತೆ
ಜಮ್ಮು-ಕಾಶ್ಮೀರದ ಕುಪ್ವಾರಾ ಜಿಲ್ಲೆಯ ಜುಮಾಗುಂದ್ ಪ್ರದೇಶದಲ್ಲಿ ಶನಿವಾರ ಭದ್ರತಾ ಪಡೆ ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದೆ. ಅದರಲ್ಲಿ ಓರ್ವ ಉಗ್ರನನ್ನು ಹತ್ಯೆಗೈಯಲಾಗಿದೆ. ಇನ್ನೊಂದೆಡೆ ಕಿಶಾ¤$Ìರ್ ಜಿಲ್ಲೆಯಲ್ಲಿ ಉಗ್ರರ ಅಡಗುತಾಣವನ್ನು ಭದ್ರತಾ ಪಡೆಯ ಯೋಧರು ಪತ್ತೆಹಚ್ಚಿದ್ದಾರೆ. ತಾಣದಲ್ಲಿದ್ದ ಶಸ್ತ್ರಾಸ್ತ್ರಗಳು ಹಾಗೂ ಸಿಡಿಮದ್ದುಗಳನ್ನು ವಶಪಡಿಸಿಕೊಳ್ಳಲಾಗಿದೆ. ಎರಡು ದಿನಗಳಲ್ಲಿ ಜಮ್ಮು-ಕಾಶ್ಮೀರದಲ್ಲಿ ಪತ್ತೆ ಹಚ್ಚಲಾದ ನಾಲ್ಕನೇ ಉಗ್ರ ಅಡಗುತಾಣ ಇದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Folk singer; ಪದ್ಮಭೂಷಣ ಪುರಸ್ಕೃತೆ ಶಾರದಾ ಸಿನ್ಹಾ ವಿಧಿವಶ
Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!
Super App: ರೈಲು ಬುಕಿಂಗ್, ಟ್ರ್ಯಾಕ್ಗೆ ‘’ಸೂಪರ್ಆ್ಯಪ್’: ಮುಂದಿನ ತಿಂಗಳು ಬಿಡುಗಡೆ
Jharkhand; ಇಂಡಿಯಾ ಒಕ್ಕೂಟದ “ಸಪ್ತ ಗ್ಯಾರಂಟಿ’!: ಮಹಿಳೆಯರಿಗೆ ಮಾಸಿಕ 2,500 ರೂ.
T-Shirt: ಫ್ಲಿಪ್ಕಾರ್ಟ್, ಮೀಶೋದಲ್ಲಿ ಲಾರೆನ್ಸ್ ಬಿಷ್ಣೋಯ್ ಟೀಶರ್ಟ್ ಮಾರಾಟ: ಆಕ್ರೋಶ
MUST WATCH
ಹೊಸ ಸೇರ್ಪಡೆ
Gadag; ಮೂವರು ಮಕ್ಕಳನ್ನು ನದಿಗೆ ಎಸೆದು ತಾನೂ ಹಾರಿದ ವ್ಯಕ್ತಿ
Folk singer; ಪದ್ಮಭೂಷಣ ಪುರಸ್ಕೃತೆ ಶಾರದಾ ಸಿನ್ಹಾ ವಿಧಿವಶ
Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!
By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್.ಡಿ.ದೇವೇಗೌಡ ಗುಡುಗು
Super App: ರೈಲು ಬುಕಿಂಗ್, ಟ್ರ್ಯಾಕ್ಗೆ ‘’ಸೂಪರ್ಆ್ಯಪ್’: ಮುಂದಿನ ತಿಂಗಳು ಬಿಡುಗಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.