ನಂಬರ್ ಪ್ಲೇಟ್: ಸಮಸ್ಯೆಗೆ ಸಿಲುಕಿಕೊಂಡ ನಟ ವಿಕ್ಕಿ ಕೌಶಲ್


Team Udayavani, Jan 2, 2022, 3:23 PM IST

1-sfsdff

ಇಂದೋರ್‌: ಇತ್ತೀಚೆಗೆ ಖ್ಯಾತ ನಟಿ ಕತ್ರಿನಾ ಕೈಫ್ ಅವರೊಂದಿಗೆ ಹೊಸ ಬಾಳಿಗೆ ಕಾಲಿರಿಸಿರುವ ನಟ ವಿಕ್ಕಿ ಕೌಶಲ್ ಸಮಸ್ಯೆಗೆ ಸಿಲುಕಿಕೊಂಡಿದ್ದಾರೆ.

ಇಂದೋರ್‌ ನ ನಿವಾಸಿಯೊಬ್ಬರು ಅನುಮತಿಯನ್ನು ಪಡೆಯದೆ ಚಿತ್ರದಲ್ಲಿ ತನ್ನ ಬೈಕ್ ನ ನಂಬರ್ ಪ್ಲೇಟ್ ಬಳಸಿದ್ದಕ್ಕಾಗಿ ನಟ ವಿಕ್ಕಿ ಕೌಶಲ್ ವಿರುದ್ಧ ದೂರು ದಾಖಲಿಸಿದ್ದಾರೆ.

ಎಎನ್‌ಐ ಪ್ರಕಾರ, ಇಂದೋರ್ ನಿವಾಸಿಯೊಬ್ಬರು ಚಲನಚಿತ್ರದಲ್ಲಿ ಮೋಟರ್‌ ಸೈಕಲ್‌ನ ನಂಬರ್ ಪ್ಲೇಟನ್ನು ಅಕ್ರಮವಾಗಿ ಬಳಸಿದ್ದಾರೆ ಎಂದು ಆರೋಪಿಸಿ, ಇದು ತನ್ನ ವಾಹನ ಎಂದು ಹೇಳುವ ಮೂಲಕ ಪೊಲೀಸ್ ದೂರು ದಾಖಲಿಸಿದ್ದಾರೆ. ಚಿತ್ರದಲ್ಲಿ, ನಟ ವಿಕ್ಕಿ ಕೌಶಲ್ ಅವರ ಹಿಂದೆ ನಟಿ ಸಾರಾ ಅಲಿ ಖಾನ್ ಅವರೊಂದಿಗೆ ಮೋಟಾರ್‌ಸೈಕಲ್ ಸವಾರಿ ಮಾಡುತ್ತಿರುವುದು ಕಂಡುಬಂದಿದೆ.

ಇಂದೋರ್ ನಿವಾಸಿ ಮತ್ತು ದೂರುದಾರ ಜೈ ಸಿಂಗ್ ಯಾದವ್ ಎಎನ್‌ಐ ಜೊತೆ ಮಾತನಾಡುತ್ತಾ, “ಸಿನಿಮಾದಲ್ಲಿ ಬಳಸಲಾದ ವಾಹನದ ಸಂಖ್ಯೆ ನನ್ನದಾಗಿದೆ, ಇದು ಚಲನಚಿತ್ರ ಘಟಕಕ್ಕೆ ತಿಳಿದಿದೆಯೋ ಎಂದು ನನಗೆ ಗೊತ್ತಿಲ್ಲ ಆದರೆ ಇದು ಕಾನೂನುಬಾಹಿರವಾಗಿದೆ. ಅವರು ನನ್ನ ಸಂಖ್ಯೆಯನ್ನು ಬಳಸಲು ಸಾಧ್ಯವಿಲ್ಲ. ಅನುಮತಿ ಇಲ್ಲದೇ ನಂಬರ್ ಪ್ಲೇಟ್ ಬಳಸಿದ್ದಾರೆ. ಠಾಣೆಯಲ್ಲಿ ದೂರು ನೀಡಿದ್ದು, ಈ ಸಂಬಂಧ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ.

ದೂರಿನ ಕುರಿತು ಪ್ರತಿಕ್ರಿಯಿಸಿದ ಇಂದೋರ್‌ನ ಬಂಗಂಗಾ ಪ್ರದೇಶದ ಸಬ್ ಇನ್ಸ್‌ಪೆಕ್ಟರ್ ರಾಜೇಂದ್ರ ಸೋನಿ, ” ನಮಗೆ ದೂರು ಬಂದಿದೆ. ನಂಬರ್ ಪ್ಲೇಟನ್ನು ಕಾನೂನು ಬಾಹಿರವಾಗಿ ಬಳಸಲಾಗಿದೆಯೇ ಎಂದು ನೋಡಿ, ಮೋಟಾರು ವಾಹನ ಕಾಯ್ದೆಯ ನಿಬಂಧನೆಗಳ ಪ್ರಕಾರ ಕ್ರಮ ತೆಗೆದುಕೊಳ್ಳಲಾಗುವುದು. ಚಿತ್ರ ಘಟಕ ಇಂದೋರ್‌ನಲ್ಲಿದ್ದರೆ, ನಾವು ಅವರನ್ನು ತನಿಖೆ ಮಾಡಲು ಪ್ರಯತ್ನಿಸುತ್ತೇವೆ” ಎಂದಿದ್ದಾರೆ.

ವಿಕ್ಕಿ ಅವರು ಶನಿವಾರ, ತನ್ನ ಪತ್ನಿ ಕತ್ರಿನಾ ಅವರೊಂದಿಗೆ ಹೊಸ ವರ್ಷವನ್ನು ಆಚರಿಸಿದ ನಂತರ, ಅವರು ಮುಂಬೈ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದರು. ಕತ್ರಿನಾ ಅವರು ಪತಿಯನ್ನು ಚುಂಬಿಸಿ ತಬ್ಬಿಕೊಳ್ಳುತ್ತಿರುವ ದೃಶ್ಯ ಕಂಡು ಬಂದಿತ್ತು.

ಈ ವರ್ಷ, ವಿಕ್ಕಿ ಭೂಮಿ ಪೆಡ್ನೇಕರ್ ಮತ್ತು ಕಿಯಾರಾ ಅಡ್ವಾಣಿ ಅವರೊಂದಿಗೆ ‘ಗೋವಿಂದಾ ಮೇರಾ ನಾಮ್’ ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ, ಚಿತ್ರವು ಜೂನ್ 10 ರಂದು ಬಿಡುಗಡೆಯಾಗಲಿದೆ.

ಟಾಪ್ ನ್ಯೂಸ್

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.