ಜನ ಕಲ್ಯಾಣವೇ ಸಹಕಾರಿ ಮಂತ್ರ
Team Udayavani, Jan 2, 2022, 3:25 PM IST
ಬೀದರ: ಸಮಾಜದಲ್ಲಿನ ಆರ್ಥಿಕ ಹಿಂದುಳಿದವರ ಹಾಗೂ ಸೌಲಭ್ಯಗಳಿಂದ ವಂಚಿತರಾದವರ ಕಲ್ಯಾಣವೇ ಸೌಹಾರ್ದ ಸಹಕಾರಿಗಳ ಮೂಲ ಮಂತ್ರವಾಗಬೇಕು ಎಂದು ಸಂಯುಕ್ತ ಸಹಕಾರಿ ನಿರ್ದೇಶಕ ಗುರುನಾಥ ಜ್ಯಾಂತಿಕರ ಹೇಳಿದರು.
ನಗರದ ಜಿಲ್ಲಾ ಸೌಹಾರ್ದ ಸಹಕಾರಿಗಳ ಒಕ್ಕೂಟದ ಕಚೇರಿಯಲ್ಲಿ ಸೌಹಾರ್ದ ದಿನಚಾರಣೆ ನಿಮಿತ್ತ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಇಡೀ ವಿಶ್ವವು ಹೊಸ ವರ್ಷಾಚರಣೆ ಸಂಭ್ರಮದಲ್ಲಿ ಇದ್ದರೆ ಸೌಹಾರ್ದ ಸಹಕಾರಿಗಳು ಇಂದು ಕಾಯ್ದೆ ಜಾರಿಗೆ ಬಂದ ದಿನವನ್ನು ಸೌಹಾರ್ದ ದಿನ ಎಂದು ರಾಜ್ಯಾದ್ಯಂತ ಆಚರಿಸುತ್ತಾರೆ ಎಂದರು.
ಜಿಲ್ಲಾ ಒಕ್ಕೂಟದ ಉಪಾಧ್ಯಕ್ಷ ಸಂಜೀವಕುಮಾರ ಪಾಟೀಲ ಪ್ರಾಸ್ತಾವಿಕವಾಗಿ ಮಾತನಾಡಿದರು. ನಿರ್ದೇಶಕರಾದ ಸಂಜಯ ಕ್ಯಾಸಾ, ರಾಜಶೇಖರ ನಾಗಮುರ್ತಿ ವೇದಿಕೆಯಲ್ಲಿದ್ದರು. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ 2022ನೇ ಸಾಲಿನ ಕ್ಯಾಲೆಂಡರ್ ಬಿಡುಗಡೆ ಮಾಡಲಾಯಿತು.
ಜಿಲ್ಲೆಯ ಹಿರಿಯ ಸಹಕಾರಿಗಳಾದ ಮಹ್ಮದ್ ಸೈಫ್, ಶ್ರೀರಂಗ, ರಾಜಕುಮಾರ, ಕುಬೆರಪ್ಪ, ಶಿವರಾಜ ಹೂಗಾರ, ಅನಿಲಕುಮಾರ, ಸಂಜೀವ, ಶಿವಾನಂದ, ಶಿವರಾಜ ಇನ್ನಿತರರಿದ್ದರು. ಜಿಲ್ಲಾ ಸಂಯೋಜಕ ವೀರಶಟ್ಟಿ ಕಾಮಣ್ಣಾ ನಿರೂಪಿಸಿದರು. ಮುಖ್ಯ ಕಾರ್ಯನಿರ್ವಾಹಕ ಅಮೃತ ಹೊಸಮನಿ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್ ಖಂಡ್ರೆ
Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ
Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು
Lokayukta Raid: ಜಿಲ್ಲಾ ತರಬೇತಿ ಕೇಂದ್ರದ ಅಧಿಕಾರಿ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ
Waqf Issue: ಬೀದರ್ ರೈತ ಸಂಘ, ಬಿಜೆಪಿಯಿಂದ ಬೃಹತ್ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.