ಇಂದಿನಿಂದ ಮಕ್ಕಳಿಗೆ ಲಸಿಕೆ; 28 ದಿನಗಳ ಬಳಿಕ ಮತ್ತೊಂದು ಡೋಸ್ ನೀಡಿಕೆ
ಶಿಕ್ಷಣ, ಆರೋಗ್ಯ ಇಲಾಖೆಯಿಂದ ಸಿದ್ಧತೆ ಪೂರ್ಣ
Team Udayavani, Jan 3, 2022, 7:03 AM IST
ಬೆಂಗಳೂರು/ಹೊಸದಿಲ್ಲಿ: ದೇಶಾದ್ಯಂತ 15-18 ವರ್ಷದ ಮಕ್ಕಳಿಗೆ ಲಸಿಕೆ ವಿತರಿಸುವ ಕಾರ್ಯ ಸೋಮವಾರ ಆರಂಭವಾಗಲಿದೆ.
ಮೊದಲ ದಿನ 15 ವರ್ಷ ಮೇಲ್ಪಟ್ಟ 6 ಲಕ್ಷ ವಿದ್ಯಾರ್ಥಿ ಗಳಿಗೆ ಕೊವ್ಯಾಕ್ಸಿನ್ ನೀಡಲಾಗುತ್ತದೆ. ಇತರ ಲಸಿಕೆ ಪಡೆದಿದ್ದರೆ ಅಂಥವರಿಗೆ 15 ದಿನಗಳ ಬಳಿಕ ಕೊವ್ಯಾಕ್ಸಿನ್ ನೀಡಲಾಗುತ್ತದೆ. ಯಾವುದೇ ಅಡ್ಡಪರಿಣಾಮಗಳ ನಿರ್ವಹಣೆಗಾಗಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಶಿಕ್ಷಣ ಇಲಾಖೆ ಸಿದ್ಧತೆ
ಆಯಾ ಶಾಲಾ ಮಟ್ಟದಲ್ಲಿ ಸಂಪುರ್ಣವಾಗಿ ಸಿದ್ಧತೆ ಮಾಡಿಕೊಳ್ಳಲಾಗಿದೆ. ಉಸ್ತುವಾರಿ ಸಚಿವರು ಹಾಗೂ ವಿಧಾನ ಸಭೆ ಕ್ಷೇತ್ರದಲ್ಲಿ ಶಾಸಕರು ಚಾಲನೆ ನೀಡಲಿದ್ದಾರೆ. ಮೊದಲ ಡೋಸ್ ಪಡೆದ 28 ದಿನಗಳ ಬಳಿಕ ಎರಡನೇ ಡೋಸ್ ನೀಡಲಾಗುತ್ತದೆ. ರಾಜ್ಯದಲ್ಲಿ 16 ಲಕ್ಷ ಡೋಸ್ ಕೊವ್ಯಾಕ್ಸಿನ್ ಲಭ್ಯವಿದೆ. ಜ. 3ರಂದು ಪ್ರೌಢಶಾಲೆ ಹಾಗೂ ಪಿಯು ಕಾಲೇಜುಗಳಲ್ಲಿ ಲಸಿಕೆ ನೀಡಲಾಗುತ್ತಿದೆ. ಈಗಾಗಲೇ ಪಾಲಕ/ಪೋಷಕರ ಸಭೆ ಕರೆದು ಲಸಿಕೆ ನೀಡುವ ಕುರಿತು ಮಾಹಿತಿ ನೀಡಲಾಗಿದೆ. ಲಸಿಕೆಯನ್ನು ಯಾಕಾಗಿ ನೀಡಲಾಗುತ್ತಿದೆ ಎಂಬ ಜಾಗೃತಿ ಮೂಡಿಸಲಾಗುತ್ತಿದೆ. ಲಸಿಕೆ ನೀಡುವ ದಿನ ಪ್ರಾಂಶುಪಾಲರು/ವಿದ್ಯಾರ್ಥಿಗಳು ಅಥವಾ ಪೋಷಕರ ಮೊಬೈಲ್ ಸಂಖ್ಯೆಯನ್ನು ದಾಖಲಿಸಿ ಲಸಿಕೆ ಕೊಡಿಸಲಾಗುತ್ತದೆ ಎಂದು ಶಾಲಾ-ಕಾಲೇಜು ಆಡಳಿತ ಮಂಡಳಿಗಳು ತಿಳಿಸಿವೆ.
ಇದನ್ನೂ ಓದಿ:ಕಾರು ಮಾರಾಟದಲ್ಲಿ ಹುಂಡೈಯನ್ನು ಮೀರಿಸಿದ ಟಾಟಾ
ಲಸಿಕೆ ವಿತರಣೆ ಕಾರ್ಯಕ್ರಮವನ್ನು ಯೋಜನಾಬದ್ಧವಾಗಿ, ಶಿಸ್ತಿನಿಂದ ಕಾರ್ಯಗತ ಗೊಳಿಸಲು ಸೂಚನೆ ನೀಡಲಾಗಿದೆ. ಮಕ್ಕಳನ್ನು ಸುರಕ್ಷಾ ಚಕ್ರದೊಳಗೆ ತರುವ ಪ್ರಧಾನಿಯವರ ಆಶಯದ ಈ ಕಾರ್ಯಕ್ರಮ ಸೋಮವಾರದಿಂದ ಪ್ರಾರಂಭವಾಗಲಿದೆ.ಜ. 10ರಿಂದ 60 ವರ್ಷ ಮೇಲ್ಪಟ್ಟವರಿಗೆ ಬೂಸ್ಟರ್ ಡೋಸ್ ನೀಡಲಾಗುವುದು.
– ಬಸವರಾಜ ಬೊಮ್ಮಾಯಿ, ಮುಖ್ಯಮಂತ್ರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ
Liquor: ಮದ್ಯ ಬಂದ್ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ
Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ
Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
BBK11: ಬಿಗ್ ಬಾಸ್ ಮನೆಗೆ ವೈಲ್ಡ್ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ
Thekkatte: ಕುಂಭಾಶಿಯಲ್ಲಿ ಸಿದ್ಧವಾಗಿದೆ ನಂದಿ ದೇಗುಲದ ಬ್ರಹ್ಮರಥ
Lupus Nephritis: ಲೂಪಸ್ ನೆಫ್ರೈಟಿಸ್ ರೋಗಿಗಳಿಗೆ ಒಂದು ಮಾರ್ಗದರ್ಶಿ
Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ
Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.