ದೈಹಿಕ-ಮಾನಸಿಕ ಸದೃಢತೆಗೆ ಕ್ರೀಡೆ ಸಹಕಾರಿ: ಡಾ| ಸತೀಶ ತಿವಾರಿ

Team Udayavani, Jan 3, 2022, 2:56 PM IST

22sports

ಮುದ್ದೇಬಿಹಾಳ: ನಿತ್ಯವೂ ಒತ್ತಡದಲ್ಲಿ ಜನರ ಸೇವೆ ಸಲ್ಲಿಸುವ ಆರೋಗ್ಯ ಇಲಾಖೆ ಸಿಬ್ಬಂದಿ ದೈಹಿಕವಾಗಿ, ಮಾನಸಿಕವಾಗಿ ಸದೃಢರಾಗಲು ಕ್ರೀಡೆ ಅವಶ್ಯವಾಗಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ| ಸತೀಶ ತಿವಾರಿ ಹೇಳಿದರು.

ಇಲ್ಲಿನ ವಿಬಿಸಿ ಪ್ರೌಢಶಾಲೆ ಮೈದಾನದಲ್ಲಿ ತಾಲೂಕು ಆರೋಗ್ಯಾಧಿಕಾರಿಗಳ ಕಾರ್ಯಾಲಯ, ತಾಲೂಕು ಸಾರ್ವಜನಿಕ ಆಸ್ಪತ್ರೆ ಮತ್ತು ತಾಲೂಕಿನ ಸಮುದಾಯ ಆರೋಗ್ಯ ಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರಗಳ ಸಂಯುಕ್ತಾಶ್ರಯದಲ್ಲಿ ಜ. 26ರ ಗಣರಾಜ್ಯೋತ್ಸವ ಅಂಗವಾಗಿ ಆರಂಭಗೊಂಡ ಹೆಲ್ತ್‌ ಪ್ರೀಮಿಯರ್‌ ಲೀಗ್‌ (ಎಚ್‌ ಪಿಎಲ್‌) ಮುದ್ದೇಬಿಹಾಳ ಕ್ರಿಕೆಟ್‌ ಸೀಜನ್‌-3 ಪಂದ್ಯಾವಳಿಗೆ ರವಿವಾರ ಚಾಲನೆ ನೀಡಿ ಅವರು ಮಾತನಾಡಿದರು.

ಆರೋಗ್ಯ ಇಲಾಖೆ ನೌಕರರು ಹಲವಾರು ಕೆಲಸಗಳ ಮಧ್ಯೆ, ಅದರಲ್ಲೂ ಇತ್ತೀಚಿನ ಕೋವಿಡ್‌ನ‌ಂಥ ಕಠಿಣ ಕೆಲಸದ ಒತ್ತಡದಲ್ಲಿ ದಿನದ 24 ತಾಸು ಕಾರ್ಯನಿರ್ವಹಿಸುತ್ತಿದ್ದಾರೆ. ಇವರಿಗೆ ಕ್ರೀಡೆ ಪುನಶ್ಚೇತನ ನೀಡುವಂಥದ್ದಾಗಿದೆ. ಇಲಾಖೆ ನೌಕರರೆಲ್ಲರೂ ಸೇರಿಕೊಂಡು ಏರ್ಪಡಿಸಿರುವ ಈ ಪಂದ್ಯಾವಳಿಯನ್ನು ರಜಾ ದಿನಗಳಲ್ಲಿ ಮಾತ್ರ ನಡೆಸಲು ನಿರ್ಧರಿಸಿರುವುದು ಒಳ್ಳೆ ವಿಚಾರವಾಗಿದೆ. ನೌಕರರು ಪರಸ್ಪರ ಪ್ರೀತಿ-ವಿಶ್ವಾಸದಿಂದ ಮತ್ತು ಮನರಂಜನೆಗಾಗಿ ಪಾಲ್ಗೊಳ್ಳಬೇಕು ಎಂದರು.

ಕರ್ನಾಟಕ ರಾಜ್ಯ ಆರೋಗ್ಯ ನಿರೀಕ್ಷಣಾಧಿಕಾರಿಗಳ ಕೇಂದ್ರ ಸಂಘದ ರಾಜ್ಯಾಧ್ಯಕ್ಷ ಡಾ| ಬಾಬಾಸಾಹೇಬ ವಿಜಯದಾರ, ತಾಲೂಕು ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ| ಅನಿಲಕುಮಾರ ಶೇಗುಣಸಿ, ಕೊಣ್ಣೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾ ಧಿಕಾರಿ ಡಾ| ಶ್ರೀಶೈಲ್‌ ಹುಕ್ಕೇರಿ, ವಿಜಯಪುರದ ಜೆಒಸಿಸಿ ಬ್ಯಾಂಕ್‌ನ ಉಪಾಧ್ಯಕ್ಷ ಆನಂದಗೌಡ ಬಿರಾದಾರ, ಸರ್ಕಾರಿ ನೌಕರರ ಸಂಘದ ನಿರ್ದೇಶಕ ಬಿ.ಬಿ. ದೇಸಾಯಿ ಮುಖ್ಯ ಅತಿಥಿಗಳಾಗಿದ್ದರು.

ಬಸವರಾಜ ಕೋರಡ್ಡಿ ಮೊದಲಿಗರಾಗಿ ಬ್ಯಾಟ್‌ ಬೀಸಿ ಪ್ರಥಮ ಪಂದ್ಯಕ್ಕೆ ಚಾಲನೆ ನೀಡಿದರು. ವಿಜಯಪುರ, ಸಿಂದಗಿ, ತಾಳಿಕೋಟೆ, ಹುನಗುಂದ ಮತ್ತು ಮುದ್ದೇಬಿಹಾಳ ಸೇರಿ ಒಟ್ಟು 13 ತಂಡಗಳು ಪಂದ್ಯಾವಳಿಯಲ್ಲಿ ಪಾಲ್ಗೊಂಡಿವೆ. ವಿಜೇತ ತಂಡಕ್ಕೆ ಜ. 26 ರ ಗಣರಾಜ್ಯೋತ್ಸವ ದಿನದಂದು ಬಹುಮಾನ ವಿತರಿಸಿ ಪುರಸ್ಕರಿಸಲಾಗುತ್ತದೆ. ಪಂದ್ಯಾವಳಿಯ ಆಯೋಜಕರಾದ ಆರೋಗ್ಯ ಇಲಾಖೆಯ ಡಾ| ಎಂ.ಎಸ್‌. ಪಾಟೀಲ, ಡಾ| ಪ್ರವೀಣ ಸುಣಕಲ್ಲ, ಯಲ್ಲಪ್ಪ ಚಲವಾದಿ, ಎಂ.ಎಸ್‌. ಗೌಡರ, ಬಸವರಾಜ, ಸತೀಶ ಕುಲಕರ್ಣಿ, ವೀರೇಶ ಎಸ್‌ .ಬಿ., ಸುನೀಲ ನಿಂಬಾಳ, ಸಚಿನ ರಾಠೊಡ, ಹಮೀದ ಹಾಲ್ಯಾಳ, ಕೃಷ್ಣಾ ಚವ್ಹಾಣ, ಸಿದ್ದು ಬಿದಗೊಂಡ, ಎಸ್‌.ಸಿ. ರುದ್ರವಾಡಿ ಮತ್ತಿತರರು ಭಾಗವಹಿಸಿದ್ದರು.

ಟಾಪ್ ನ್ಯೂಸ್

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

1-pk

Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು

vij

Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ

Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

1-eweweq

Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು

18-muddebihal

Muddebihal: ಕಬ್ಬು ತುಂಬಿದ್ದ ಟ್ರ್ಯಾಕ್ಟರ್ – ಟ್ರ್ಯಾಲಿ ಉರುಳಿ ಬೈಕ್ ಸವಾರ ಮೃತ್ಯು

6-muddebihala

Muddebihal: ಆಟೋ ಪಲ್ಟಿ: ಕೂಲಿ ಕಾರ್ಮಿಕ ಮಹಿಳೆ ಮೃತ್ಯು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.