ಐತಿಹಾಸಿಕ ಸ್ಥಳಗಳ ಮಹತ್ವ ಸಾರುವ ಗ್ರಂಥ ಸರಣಿ
ಕೃಷಿ ವಿವಿ ಸ್ಥಾಪನೆಗೆ ಜಮೀನು ನೀಡಿದ ಕೊಡುಗೆಯೂ ಅಮೂಲ್ಯ
Team Udayavani, Jan 3, 2022, 5:58 PM IST
ಧಾರವಾಡ: ಕನ್ನಡ ನಾಡು-ನುಡಿ ಸೇರಿದಂತೆ ಚಾರಿತ್ರಿಕವಾಗಿ, ಸಾಂಸ್ಕೃತಿಕವಾಗಿ ಮಹತ್ವ ಪಡೆದಿರುವ ಧಾರವಾಡ ಸೇರಿ ರಾಜ್ಯದ ಪ್ರಮುಖ ಸ್ಥಳಗಳ ಕುರಿತು ಗ್ರಂಥಗಳ ಸರಣಿ ಪ್ರಕಟಿಸುವ ಯೋಜನೆಯನ್ನು ರೂಪಿಸಿ ಮುಂಬರುವ ಆಯವ್ಯಯದಲ್ಲಿ ಹಣ ಮೀಸಲಿಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಕವಿಸಂನಲ್ಲಿ ರವಿವಾರ ಚನ್ನವೀರಗೌಡ ಅಣ್ಣಾ ಪಾಟೀಲ ಸಂಸ್ಮರಣಾ ದತ್ತಿ ಹಾಗೂ ಟ್ರಸ್ಟ್ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು. ಇತಿಹಾಸ ಅರಿಯದವರು ಇತಿಹಾಸ ಸೃಷ್ಟಿಸಲಾರರು. ಅಷ್ಟೇ ಅಲ್ಲ ಇತಿಹಾಸ ತಿರುಚುವ ಕೆಲಸ ನಡೆದು ಹೋಗಿದೆ. ಹೀಗಾಗಿ ಸರ್ಕಾರದ ವತಿಯಿಂದಲೇ ಧಾರವಾಡ ಸೇರಿದಂತೆ ನಾಡಿನ ಐತಿಹಾಸಿಕ ಸ್ಥಳಗಳ ವಿಚಾರ ತಿಳಿಸುವ ಗ್ರಂಥಗಳನ್ನು ಪ್ರಕಟಿಸುವ ಕಾರ್ಯಕ್ರಮವನ್ನು ಆಯವ್ಯಯದಲ್ಲಿ ಹಾಕಿಕೊಳ್ಳಲಾಗುವುದು. ಇತಿಹಾಸವನ್ನು ತಿರುಚುವ ಪ್ರವೃತ್ತಿ ಇತ್ತೀಚೆಗೆ ಹೆಚ್ಚಾಗುತ್ತಿದೆ ಇದು ಸರಿಯಲ್ಲ. ಸತ್ಯವನ್ನು ವಸ್ತುನಿಷ್ಠವಾಗಿ ದಾಖಲಿಸಬೇಕು ಎಂದರು.
ಧಾರವಾಡದ ಚರಿತ್ರೆ ದಾಖಲಿಸುವ ಕಾರ್ಯದ ಜವಾಬ್ದಾರಿಯನ್ನು ಕರ್ನಾಟಕ ವಿದ್ಯಾವರ್ಧಕ ಸಂಘಕ್ಕೆ ವಹಿಸಲಾಗುವುದು. ಕನ್ನಡ ಸಾಹಿತ್ಯ ಪರಿಷತ್ತು ಸೇರಿದಂತೆ ಕನ್ನಡದ ಹಲವು ಸಂಸ್ಥೆಗಳ ಸ್ಥಾಪನೆ, ಕರ್ನಾಟಕ ರಾಜ್ಯ ರಚನೆಗೆ ಕಾರಣವಾದ ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘಕ್ಕೆ ಮಹತ್ವದ ಸ್ಥಾನವಿದೆ. ವಿಶಿಷ್ಟ ಅಂತರ್ಗತ ಶಕ್ತಿ ಇದೆ.
ಸಂಘಕ್ಕೆ ಅಗತ್ಯವಿರುವ ಅನುದಾನ, ನಿವೇಶನ ಮತ್ತಿತರ ಬೇಡಿಕೆಗಳಿಗೆ ಸರ್ಕಾರ ಸಕಾರಾತ್ಮವಾಗಿ ಬೆಂಬಲಿಸಲಿದೆ. ನಾಡೋಜ ಪಾಟೀಲ ಪುಟ್ಟಪ್ಪನವರು ಸುಮಾರು 52 ವರ್ಷಗಳ ಕಾಲ ಸುದೀರ್ಘ ಅವಧಿಗೆ ಅಧ್ಯಕ್ಷರಾಗಿ ಹೋರಾಟ ಮಾಡಿದ್ದಾರೆ. ಅವರ ಸಾಧನೆ ಗೌರವಿಸಲು ಸರ್ಕಾರ ರಾಣೆಬೆನ್ನೂರು ತಾಲೂಕಿನ ಹಲಗೇರಿಯಲ್ಲಿ ಸ್ಮಾರಕ ನಿರ್ಮಿಸಲಿದೆ ಎಂದು ಹೇಳಿದರು.
“ಕನ್ನಡ ದಿನಗಳು’ ಗ್ರಂಥ ಬಿಡುಗಡೆ ಮಾಡಿದ ಕೈಮಗ್ಗ, ಜವಳಿ, ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಮಾತನಾಡಿ, ಸರಳವಾಗಿ ಎಲ್ಲರೊಂದಿಗೆ ಬೆರೆಯುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಾಡಿಗೆ ಮಾದರಿಯಾಗುವ ನಡೆ ಅನುಸರಿಸುತ್ತಿದ್ದಾರೆ. ಅವರ ತೀರ್ಮಾನಗಳು ಜನಮಾನಸದಲ್ಲಿ ಉಳಿಯುವ ರೀತಿಯಲ್ಲಿವೆ. ಧಾರವಾಡ ಬೈಪಾಸ್‌ನಿಂದ ಗಬ್ಬೂರ ರಸ್ತೆ ಅಗಲೀಕರಣಕ್ಕೆ ಮುಖ್ಯಮಂತ್ರಿಯವರು
ಅನುಮೋದನೆ ನೀಡಿದ್ದಾರೆ ಎಂದರು.
ಗ್ರಂಥ ಪರಿಚಯಿಸಿದ ಶಶಿಧರ ತೋಡಕರ್ ಅವರು, ಧಾರವಾಡದ ಚಾರಿತ್ರಿಕ ವ್ಯಕ್ತಿ ಚನ್ನವೀರಗೌಡ ಅಣ್ಣಾ ಪಾಟೀಲರು ಸರ್ಕಾರಿ ಎಂಜಿನಿಯರ್ ವೃತ್ತಿಯ ಜೊತೆಗೆ ಸಮಾಜಕ್ಕಾಗಿ ಮಹತ್ವದ ಕಾರ್ಯಗಳನ್ನು ಮಾಡಿದ್ದಾರೆ. ಪಿಬಿ ರಸ್ತೆ ನಿರ್ಮಾಣ, ಕೆಸಿಸಿ ಬ್ಯಾಂಕ್, ಎಲ್‌ಇಎ ಸ್ಥಾಪನೆಯಲ್ಲಿ ಅವರು ಮಹತ್ವದ ಪಾತ್ರ ವಹಿಸಿದ್ದರು. ಕೃಷಿ ವಿವಿ ಸ್ಥಾಪನೆಗೆ ಜಮೀನು ನೀಡಿದ ಕೊಡುಗೆಯೂ ಅಮೂಲ್ಯ ಎಂದು ಹೇಳಿದರು.ದತ್ತಿದಾನಿಗಳ ಪರವಾಗಿ ಮಹಾನಗರಪಾಲಿಕೆ
ಮಾಜಿ ಸದಸ್ಯ ಸಿ.ಎಸ್. ಪಾಟೀಲ ಮಾತನಾಡಿದರು.
ದೇವರಹುಬ್ಬಳ್ಳಿ ಸಿದ್ಧಾರೂಢ ಮಠದ ಶಿವಸಿದ್ಧಶಿವಯೋಗಿಗಳು ಸಾನ್ನಿಧ್ಯ ವಹಿಸಿದ್ದರು. ಕವಿಸಂ ಅಧ್ಯಕ್ಷ ಚಂದ್ರಕಾಂತ ಬೆಲ್ಲದ, ಮಾಜಿ ಸಚಿವ ಶಶಿಕಾಂತ ನಾಯ್ಕ, ಮಾಜಿ ಶಾಸಕ ಎ.ಬಿ. ದೇಸಾಯಿ, ಗ್ರಂಥಕರ್ತೃ ಮಲ್ಲಿಕಾರ್ಜುನ ಪಾಟೀಲ, ಶಶಿಧರ ತೋಡಕರ್, ರೇಖಾ ಶೆಟ್ಟರ, ಬಿ.ವೈ. ಬಂಡಿವಡ್ಡರ, ಚಂದ್ರಗೌಡ ಎಸ್.ಪಾಟೀಲ, ಡಾ| ಅರವಿಂದ ಯಾಳಗಿ, ರಾಜು ಪಾಟೀಲ ಮತ್ತಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕವಿಸಂ ಪ್ರಧಾನ ಕಾರ್ಯದರ್ಶಿ ಶಂಕರ ಹಲಗತ್ತಿ ಸ್ವಾಗತಿಸಿದರು. ಕಾರ್ಯಾಧ್ಯಕ್ಷ ಬಸವಪ್ರಭು ಹೊಸಕೇರಿ ಪ್ರಾಸ್ತಾವಿಕ ಮಾತನಾಡಿದರು. ಕೋಶಾಧ್ಯಕ್ಷ ಶಿವಾನಂದ ಭಾವಿಕಟ್ಟಿ ಆಶಯ ನುಡಿಗಳನ್ನಾಡಿದರು. ಸಹ ಕಾರ್ಯದರ್ಶಿ ಶಂಕರ ಕುಂಬಿ ನಿರೂಪಿಸಿದರು.
ಚನ್ನವೀರಗೌಡರ ಕೊಡುಗೆ ದೊಡ್ಡದು
ಹಿರಿಯರನ್ನು ಸ್ಮರಿಸುವುದು ಸ್ಫೂರ್ತಿದಾಯಕವಾಗಿರುತ್ತದೆ. ಬ್ರಿಟಿಷರ ಆಳ್ವಿಕೆ ಕಾಲದಲ್ಲಿ ಸಿವಿಲ್ ಎಂಜಿನಿಯರ್ ಆಗಿದ್ದ ಚನ್ನವೀರಗೌಡ ಅಣ್ಣಾ ಪಾಟೀಲ ಅವರು ಧಾರವಾಡಕ್ಕೆ ಅನೇಕ ಕೊಡುಗೆಗಳನ್ನು ನೀಡಿದ್ದಾರೆ. ಲಿಂಗಾಯತ ಟೌನ್‌ಹಾಲ್, ವೀರಶೈವ ಮಹಾಸಭೆ, ಕೆಸಿಸಿ ಬ್ಯಾಂಕ್ ಸ್ಥಾಪನೆ, ಎನ್‌ಎಚ್ 4 ನಿರ್ಮಾಣ ಸೇರಿದಂತೆ ಹಲವು ಮಹತ್ವದ ಚಾರಿತ್ರಿಕ ಕಾರ್ಯಗಳನ್ನು ಅವರು ನಿರ್ವಹಿಸಿದ್ದಾರೆ ಎಂದು ಬೊಮ್ಮಾಯಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಧಾರವಾಡ: ಅವಸಾನದತ್ತ ಶತಮಾನದ ಕೆಲಗೇರಿ ಕೆರೆ
MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ
BJP ಡಬಲ್ ಗೇಮ್; ವಕ್ಫ್ ಆಸ್ತಿ ರಕ್ಷಣೆ ಬಗ್ಗೆ ಬಿಜೆಪಿ ಪ್ರಣಾಳಿಕೆಯಲ್ಲಿ ಉಲ್ಲೇಖ: ಸಿದ್ದು
Hubli: ಅಪ್ರಾಪ್ತೆಯೊಂದಿಗೆ ಅನುಚಿತ ವರ್ತನೆ: ಮುಖ್ಯ ಪೇದೆ ವಿರುದ್ದ ಪೋಕ್ಸೋ ಕೇಸ್
Hubli: ಹಣಕಾಸು ಆಯೋಗದ ಅನ್ಯಾಯದ ಬಗ್ಗೆ ಬಿಜೆಪಿಯರಿಂದ ಮೌನ: ಸಿದ್ದರಾಮಯ್ಯ ಕಿಡಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.