ವಾಟ್ಸಪ್ ಗ್ರೂಪ್ ನಿಂದ ಹೊರಹಾಕಿದ್ದಕ್ಕೆ ಹೈಕೋರ್ಟ್ ಮೆಟ್ಟಿಲೇರಿದ ವ್ಯಕ್ತಿ
Team Udayavani, Jan 3, 2022, 10:30 PM IST
ಬೆಂಗಳೂರು: ವಾಟ್ಸಪ್ ಗ್ರೂಪ್ ನ ಅಡ್ಮಿನ್ ಮತ್ತು ಸದಸ್ಯ ಸ್ಥಾನದಿಂದ ತೆಗೆದುಹಾಕಿದ್ದಕ್ಕೆ ವ್ಯಕ್ತಿಯೊಬ್ಬರು ಖಾಸಗಿ ಟ್ರಸ್ಟ್ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಬಡ ಹಾಗೂ ನಿರ್ಗತಿಕರ ಸೇವೆಗೆ ಸ್ಥಾಪನೆ ಮಾಡಲಾಗಿದೆ ಎನ್ನಲಾದ “ದಿ ರಾಬಿನ್ ಹುಡ್ ಪ್ರಾಜೆಕ್ಟ್ ಟ್ರಸ್ಟ್’ಗೆ ಸಂಬಂಧಿಸಿದ 10 ವಾಟ್ಸಪ್ ಗ್ರೂಪ್‌ಗಳ ಅಡ್ಮಿನ್ ಹಾಗೂ ಸದಸ್ಯ ಸ್ಥಾನದಿಂದ ತಮ್ಮನ್ನು ತೆಗೆದುಹಾಕಿದ ಕ್ರಮ ಆಕ್ಷೇಪಿಸಿ ಬೆಂಗಳೂರಿನ ಗುರಪ್ಪನಪಾಳ್ಯದ ನಿವಾಸಿ ಮೊಹಮ್ಮದ್ ಶರೀಫ್ ಹೈಕೋರ್ಟ್‌ಗೆ ತಕರಾರು ಅರ್ಜಿ ಸಲ್ಲಿಸಿದ್ದಾರೆ.
ಟ್ರಸ್ಟ್‌ನ ಸೇವಾ ಕಾರ್ಯಗಳನ್ನು ಬಡ ಹಾಗೂ ನಿರ್ಗತಿಕರಿಗೆ ತಲುಪಿಸುವ ಕೆಲಸದಲ್ಲಿ ತೊಡಿಸಿಕೊಂಡಿದ್ದ ನನ್ನನ್ನು, ಸುಳ್ಳು ಆರೋಪ ಮೇಲೆ ವಾಟ್ಸಪ್ ಗ್ರೂಪನಿಂದ ಹೊರಹಾಕಲಾಗಿದೆ. ಹಾಗಾಗಿ, ಸುಳ್ಳು ಆರೋಪ ಹೊರಿಸಿ ಮಾನನಷ್ಟ ಉಂಟು ಮಾಡಿರುವುದಕ್ಕೆ ಪ್ರತಿಯಾಗಿ ನಷ್ಟ ಪರಿಹಾರ ನೀಡಲು ಹಾಗೂ ವಾಟ್ಸಪ್ ಗ್ರೂಪ್‌ಗೆ ಮತ್ತೆ ನನ್ನನ್ನು ಸೇರಿಸಲು ಟ್ರಸ್ಟ್‌ಗೆ ನಿರ್ದೇಶನ ನೀಡುವಂತೆ ಕೋರಿ ಶರೀಫ್ ಅರ್ಜಿಯಲ್ಲಿ ಕೋರಿದ್ದರು. ಟ್ರಸ್ಟ್ ಹಾಗೂ ಅದರ ಸಂಸ್ಥಾಪಕರು, ಟ್ರಸ್ಟಿಗಳು, ಮುಂಬೈ, ಬೆಂಗಳೂರು, ನವದೆಹಲಿಯ ತಂಡದ ಸ್ವಯಂ ಸೇವಕರನ್ನು ಪ್ರತಿವಾದಿ ಮಾಡಿದ್ದರು.
ಆದರೆ, ಶರೀಫ್ ಮನವಿಯನ್ನು ಪುರಸ್ಕರಿಸಲು ನಿರಾಕರಿಸಿದ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠ, ಅರ್ಜಿದಾರರು ಸಿವಿಲ್ ಅಥವಾ ಇತರೆ ನ್ಯಾಯಾಲಯದಲ್ಲಿ ತಮ್ಮ ಈ ಕುಂದುಕೊರತೆಗೆ ಪರಿಹಾರ ಕಂಡುಕೊಳ್ಳುಬಹುದು ಎಂದು ಸೂಚಿಸಿ ಅರ್ಜಿ ಇತ್ಯರ್ಥಪಡಿಸಿದೆ.
ಇದನ್ನೂ ಓದಿ : ಅವರಿಬ್ಬರು ಅವಳಿ-ಜವಳಿ; ಆದರೆ ಹುಟ್ಟಿದ್ದು ಬೇರೆ- ಬೇರೆ ವರ್ಷದಲ್ಲಿ!
ಪ್ರಕರಣವೇನು?
“ದಿ ರಾಬಿನ್ ಹುಡ್ ಪ್ರಾಜೆಕ್ಟ್ ಟ್ರಸ್ಟ್ ‘ ತನ್ನ ಸ್ವಯಂ ಸೇವಕರ ಸದಸ್ಯತ್ವ ಹೊಂದಿದ 10 ವಾಟ್ಸಪ್ ಗ್ರೂಪ್ ರಚನೆ ಮಾಡಿಕೊಂಡಿದೆ. ಗ್ರೂಪಿನಲ್ಲಿ ಅರ್ಜಿದಾರ 2018ರ ಫೆಬ್ರವರಿಯಿಂದ ಸದಸ್ಯರಾಗಿದ್ದರು. ಎರಡೂವರೆ ವರ್ಷಕ್ಕಿಂತ ಹೆಚ್ಚು ಕಾಲ ಅಡ್ಮಿನ್ ಆಗಿದ್ದರು. ಈ ಮಧ್ಯೆ ಟ್ರಸ್ಟ್‌ಗೆ ಸೇರಿದ ಯುನೈಟೆಡ್ ಕಿಂಗ್‌ಡಮ್ (ಯುಕೆ) ತಂಡವು ವಿಚಾರವೊಂದರ ಸಂಬಂಧ ಅನಿಸಿಕೆ ಹಂಚಿಕೊಂಡಿತ್ತು. ಅದರ ಬಗ್ಗೆ ಮಾತನಾಡಿದ ಕಾರಣಕ್ಕೆ ಅರ್ಜಿದಾರನನ್ನು ಗ್ರೂಪಿನ ಅಡ್ಮಿನ್ ಸ್ಥಾನದಿಂದ ತೆಗೆದು ಹಾಕಲಾಗಿತ್ತು. ಸ್ವಲ್ಪ ದಿನದ ನಂತರ ಟ್ರಸ್ಟ್‌ಗೆ ಸಂಬಂಧಿಸಿದ ಯೋಜನೆಯ ಮಾಹಿತಿಯನ್ನು ಸಾರ್ವಜನಿಕ ವೇದಿಕೆಯಲ್ಲಿ ಹಂಚಿಕೊಂಡ ಆರೋಪದ ಮೇಲೆ 10 ವಾಟ್ಸಪ್ ಗ್ರೂಪ್‌ನಿಂದಲೂ ಅರ್ಜಿದಾರರನ್ನು ತೆಗೆದು ಹಾಕಲಾಗಿತ್ತು.
ಅದನ್ನು ಆಕ್ಷೇಪಿಸಿ ಹೈಕೋರ್ಟ್‌ಗೆ ತಕರಾರು ಅರ್ಜಿ ಸಲ್ಲಿಸಿದ ಶರೀಫ್, ಟಸ್ಟ್ ಸಂಬಂಧಿಸಿದ ಯೋಜನೆ ಯಾವೊಂದು ಮಾಹಿತಿಯನ್ನು ತಾವು ಸಾರ್ವಜನಿಕ ವೇದಿಕೆಯಲ್ಲಿ ಹಂಚಿಕೊಂಡಿಲ್ಲ. ಸುಳ್ಳು ಆರೋಪ ಮಾಡಿ ವಾಟ್ಸಪ್ ಗ್ರೂಪಿನಿಂದ ನನ್ನನ್ನು ತೆಗೆದು ಹಾಕಲಾಗಿದೆ. ಆ ಮೂಲಕ ನನ್ನ ಮೂಲಭೂತ ಹಕ್ಕು ಅದರಲ್ಲೂ ವಾಕ್ ಸ್ವಾತಂತ್‌ರ್ಯವು ಹರಣ ಮಾಡಲಾಗಿದೆ. ಆದ್ದರಿಂದ ಮತ್ತೆ ವಾಟ್ಸ… ಗ್ರೂಪಿಗೆ ಸೇರಿಸಬೇಕು. ಸುಳ್ಳು ಆರೋಪ ಹೊರಿಸಿ ಮಾನನಷ್ಟ ಮಾಡಿರುವುದಕ್ಕೆ ನಷ್ಟ ಪರಿಹಾರ ತುಂಬಿಕೊಡಲು ಟ್ರಸ್ಟ್ ಮತ್ತದರ ಸಂಸ್ಥಾಪಕರು, ಟ್ರಸ್ಟಿಗಳಿಗೆ ನಿರ್ದೇಶಿಸಬೇಕು ಎಂದು ಕೋರಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
IPL Mega Auction: ಮೊದಲ ದಿನದ ಹರಾಜಿನ ಬಳಿಕ ಆರ್ ಸಿಬಿ ತಂಡ ಹೀಗಿದೆ ನೋಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.