ಕೋವಿಡ್ ಸಂಭಾವ್ಯ ಅಲೆ ಎದುರಿಸಲು ಸನ್ನದ್ಧ: ನಳಿನ್
ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಕ್ಕಳಿಗೆ ಲಸಿಕೆ ಆರಂಭ
Team Udayavani, Jan 4, 2022, 7:25 AM IST
ಮಂಗಳೂರು: ಸಂಭಾವ್ಯ ಕೋವಿಡ್ ಮೂರನೇ ಅಲೆ ಎದುರಿಸಲು ದಕ್ಷಿಣ ಕನ್ನಡ ಜಿಲ್ಲೆ ಸನ್ನದ್ಧವಾಗಿದ್ದು, ಆರೋಗ್ಯ ಕ್ಷೇತ್ರದಲ್ಲಿ ಸಾಕಷ್ಟು ಸುಧಾರಣೆ ತರಲಾಗಿದೆ ಎಂದು ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲು ಹೇಳಿದರು.
ಸೋಮವಾರ ನಗರದ ರಥಬೀದಿಯ ಸರಕಾರಿ ಪ.ಪೂ. ಕಾಲೇಜಿನಲ್ಲಿ ನಡೆದ 15ರಿಂದ 18 ವರ್ಷದ ಮಕ್ಕಳಿಗೆ ಲಸಿಕೆ ನೀಡುವ ಅಭಿಯಾನ ಉದ್ಘಾಟಿಸಿ ಅವರು ಮಾತನಾಡಿದರು.
ಕೊರೋನೋತ್ತರ ಸಮಯದಲ್ಲಿ ಜಿಲ್ಲೆಯಲ್ಲಿ ಕೇವಲ 11 ವೆಂಟಿಲೇಟರ್‌ಗಳಿದ್ದರೆ ಸದ್ಯ 103 ಇವೆ. ಉಪ್ಪಿನಂಗಡಿ, ವಿಟ್ಲ, ವಾಮದ ಪದವು ಸಹಿತ ಜಿಲ್ಲೆಯಲ್ಲಿ 16 ಆಕ್ಸಿಜನ್ ಘಟಕಗಳಿವೆ. ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಉನ್ನತೀಕರಿಸಲಾಗಿದೆ ಎಂದರು.
ಕೆಲವೊಂದು ತಪ್ಪು ಕಲ್ಪನೆಗಳ ಪರಿಣಾಮ ಕೋವಿಡ್ ಮೊದಲ ಅಲೆಯ ವೇಳೆ ಲಸಿಕಾಕರಣಕ್ಕೆ ತುಸು ಹಿನ್ನಡೆ ಯಾಗಿತ್ತು. ಬಳಿಕ ಸಾಂಘಿಕ ಪ್ರಯತ್ನದ ಫಲವಾಗಿ ಲಸಿಕೆ ಅಭಿಯಾನಕ್ಕೆ ವೇಗ ನೀಡಲಾಗಿದೆ. ಈಗಾಗಲೇ ಶೇ. 94ರಷ್ಟು ಮಂದಿ ಮೊದಲ ಡೋಸ್ ಪಡೆದುಕೊಂಡಿದ್ದಾರೆ ಎಂದರು.
ಆಕ್ಸಿಜನ್ ಘಟಕ: ದ.ಕ. ದ್ವಿತೀಯ
ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ಮಾತನಾಡಿ, ಬೆಂಗಳೂರು ಹೊರತುಪಡಿಸಿ ಅತೀ ಹೆಚ್ಚು ಆಕ್ಸಿಜನ್ ಘಟಕಗಳು ದ.ಕ. ದಲ್ಲಿವೆ. ವೆನ್ಲಾಕ್ ನಲ್ಲೇ 3 ಘಟಕಗಳಿವೆ. ಸದ್ಯ ಐಸಿಯುಗೆ ದ್ರವ ರೂಪದ ಆಕ್ಸಿಜನ್ ಮಾತ್ರ ಹೊರಗಡೆಯಿಂದ ತರಬೇಕು. ಉಳಿದಂತೆ ನಾವು ಸ್ವಾವಲಂಬಿಗಳಾಗಿದ್ದೇವೆ. ಸರಕಾರಿ ಮಟ್ಟದ ಗಂಟಲ ದ್ರವ ಮಾದರಿ ಪರೀಕ್ಷೆ ಪ್ರಯೋಗಾಲಯ ಸದ್ಯ ಮಂಗಳೂರಿನಲ್ಲಿ ಮಾತ್ರ ಇದ್ದು, ಸುಳ್ಯದಲ್ಲಿ ಸರಕಾರಿ ಪ್ರಯೋ ಗಾಲಯ ಸ್ಥಾಪನೆಗೆ ಯೋಜನೆ ರೂಪಿಸ ಲಾಗುತ್ತಿದೆ. ಬಳಿಕ ಮಂಗಳೂರಿನಲ್ಲಿ ಒತ್ತಡ ಕಡಿಮೆಯಾಗಲಿದೆ. ಪ್ರತೀ ದಿನ 15,000 ಕೋವಿಡ್ ಪರೀಕ್ಷೆ ನಡೆಸಲು ಜಿಲ್ಲಾಡಳಿತ ಸಿದ್ಧತೆ ಮಾಡಿಕೊಂಡಿದೆ. ಒಮಿಕ್ರಾನ್ ವೇಗವಾಗಿ ಹರಡುತ್ತಿದ್ದು, ಪ್ರತಿಯೊಬ್ಬರೂ ಕೋವಿಡ್ ಮಾರ್ಗಸೂಚಿ ಪಾಲನೆ ಮಾಡಬೇಕು ಎಂದು ತಿಳಿಸಿದರು.
ಅಧ್ಯಕ್ಷತೆ ವಹಿಸಿದ್ದ ಶಾಸಕ ಡಿ. ವೇದವ್ಯಾಸ ಕಾಮತ್, ಕೋವಿಡ್ ತಡೆಯುವ ನಿಟ್ಟಿನಲ್ಲಿ ಸಾರ್ವಜನಿಕರ ಸಹಕಾರ ಮುಖ್ಯ ಎಂದರು.
ಮೇಯರ್ ಪ್ರೇಮಾನಂದ ಶೆಟ್ಟಿ, ಡಿಎಚ್‌ಒ ಡಾ| ಕಿಶೋರ್, ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ| ರಾಜೇಶ್, ಪ.ಪೂ. ಶಿಕ್ಷಣ ಇಲಾಖೆ ಉಪನಿರ್ದೇಶಕ ಸಿ.ಡಿ. ಜಯಣ್ಣ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಸುಧಾಕರ್, ಮಂಗಳೂರು ಟಿಎಚ್‌ಒ ಡಾ| ಸುಜಯ್, ಪಾಲಿಕೆ ಕೋವಿಡ್ ನೋಡಲ್ ಅಧಿಕಾರಿ ಡಾ| ಅಣ್ಣಯ್ಯ ಕುಲಾಲ್, ಬಂದರು ಪ್ರಾ. ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ| ಚಂದ್ರಪ್ರಭಾ, ಮಾಜಿ ಮೇಯರ್ ದಿವಾಕರ ಪಾಂಡೇಶ್ವರ, ಮನಪಾ ಸದಸ್ಯರಾದ ಜೀನತ್, ಪೂರ್ಣಿಮಾ ಉಪಸ್ಥಿತರಿದ್ದರು.
ರಥಬೀದಿ ಸ.ಪ.ಪೂ. ಕಾಲೆಜು ಪ್ರಾಂಶುಪಾಲೆ ಭಾರತಿ ಬಾೖ ಕೆ. ಸ್ವಾಗತಿಸಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಜ್ಯೋತಿ
ಕೆ. ಉಳೆಪ್ಪಾಡಿ ವಂದಿಸಿದರು. ರಥಬೀದಿಸ.ಪ.ಪೂ. ಕಾಲೇಜು ಉಪನ್ಯಾಸಕಿ ಡಾ| ಸರೋಜಿನಿ ಆಚಾರಿ ನಿರೂಪಿಸಿದರು.
ಜ. 10ರಿಂದ ಬೂಸ್ಟರ್ ಡೋಸ್
ದ.ಕ.ದಲ್ಲಿ 60 ವರ್ಷ ಮೇಲ್ಪಟ್ಟವರಿಗೆ 3ನೇ ಡೋಸ್ ಲಸಿಕೆ ನೀಡುವ ಅಭಿಯಾನಕ್ಕೆ ಜ. 10ರಂದು ಚಾಲನೆ ನೀಡಲಾಗುವುದು. ಈವರೆಗೆ 16 ಲಕ್ಷ ಮಂದಿಗೆ ಮೊದಲ ಡೋಸ್ ಸಂಪೂರ್ಣವಾಗಿದ್ದು, ಶೇ. 94ರಷ್ಟು ಸಾಧನೆ ಮಾಡಲಾಗಿದೆ. ಶೇ. 80ರಷ್ಟು ಮಂದಿ 2ನೇ ಡೋಸ್ ಪಡೆದಿದ್ದಾರೆ. ಸುಮಾರು 1 ಲಕ್ಷ ಮಂದಿ ಲಸಿಕೆ ಪಡೆಯಲು ಬಾಕಿ ಇದ್ದಾರೆ ಎಂದು ದ.ಕ. ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ಹೇಳಿದರು.
ಮೊದಲ ದಿನ 21,026 ವಿದ್ಯಾರ್ಥಿಗಳಿಗೆ ಲಸಿಕೆ
ದ.ಕ.ದಲ್ಲಿ ಸೋಮವಾರ 21,016 ವಿದ್ಯಾರ್ಥಿಗಳಿಗೆ ಕೋವಿಡ್ ನಿರೋಧಕ ಲಸಿಕೆ ನೀಡಲಾಗಿದೆ. ಮಂಗಳೂರಿನಲ್ಲಿ ಅತೀ ಹೆಚ್ಚು 7063 ವಿದ್ಯಾರ್ಥಿಗಳು, ಬಂಟ್ವಾಳ ತಾಲೂಕಿನಲ್ಲಿ 3,438, ಬೆಳ್ತಂಗಡಿಯಲ್ಲಿ 4,583, ಪುತ್ತೂರಿನಲ್ಲಿ 2,580 ಮತ್ತು ಸುಳ್ಯ ತಾಲೂಕಿನಲ್ಲಿ 3,362 ಮಂದಿ ವಿದ್ಯಾರ್ಥಿಗಳಿಗೆ ಲಸಿಕೆ ನೀಡಲಾಗಿದೆ.
ಉಡುಪಿ: ಮೊದಲ ದಿನ 14,500 ಮಕ್ಕಳಿಗೆ ಲಸಿಕೆ
ಉಡುಪಿ: ನಿಟ್ಟೂರು ಪ್ರೌಢಶಾಲೆಯಲ್ಲಿ ಸೋಮವಾರ 15ರಿಂದ 18 ವರ್ಷಗೊಳಗಿನ ಮಕ್ಕಳಿಗೆ ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಶಾಸಕ ಕೆ. ರಘುಪತಿ ಭಟ್ ಚಾಲನೆ ನೀಡಿದರು. ಜಿಲ್ಲೆಯಲ್ಲಿ ಒಟ್ಟು 14,500ಕ್ಕೂ ಅಧಿಕ ಮಂದಿ ಮಕ್ಕಳು ಲಸಿಕೆ ಪಡೆದುಕೊಂಡರು.
ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ., ಜಿ.ಪಂ. ಸಿಇಒ ಡಾ| ನವೀನ್ ಭಟ್, ನಗರಸಭಾ ಸದಸ್ಯ ಗಿರಿಧರ ಆಚಾರ್ಯ, ಡಿಡಿಪಿಯು ಮಾರುತಿ, ಡಿಡಿಪಿಐ ಮಲ್ಲೇಸ್ವಾಮಿ, ಜಿಲ್ಲಾ ಸರಕಾರಿ ನೌಕರರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಶೇರಿಗಾರ್, ನಿಟ್ಟೂರು ಪ್ರೌಢಶಾಲೆಯ ಪ್ರಾಂಶುಪಾಲೆ ಅನುಸೂಯಾ, ಡಿಎಚ್‌ಒ ಡಾ| ನಾಗಭೂಷಣ ಉಡುಪ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್
Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.