ಪುನೀತ್‌ ಪ್ರೇರಣೆಯಿಂದ ಚುರುಕಾಯ್ತು ನೇತ್ರದಾನ

Team Udayavani, Jan 4, 2022, 9:07 AM IST

puneeth rajkumar

ಪುನೀತ್‌ ರಾಜ್‌ಕುಮಾರ್‌ ಮಾಡಿರುವ ಕಾರ್ಯಗಳು ಅನೇಕರಿಗೆ ಪ್ರೇರಣೆ. ಅವರು ಮಾಡಿರುವ ಸಾಮಾಜಿಕ ಕಾರ್ಯಗಳು ಅವರ ನಿಧನದ ನಂತರ ಒಂದೊಂದಾಗಿಯೇ ಬೆಳಕಿಗೆ ಬರುತ್ತಿದೆ. ಈ ಮೂಲಕ ಅವರ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸಾಮಾಜಿಕ ಕಾರ್ಯದಲ್ಲಿ ತೊಡಗುತ್ತಿದ್ದಾರೆ. ಅದರಲ್ಲಿ ನೇತ್ರದಾನವೂ ಒಂದು. ಪುನೀತ್‌ ತಮ್ಮ ಕಣ್ಣುಗಳನ್ನು ದಾನ ಮಾಡುವ ಮೂಲಕ ಬೇರೆಯವರ ಬಾಳಿಗೆ ಬೆಳಕಾಗಿದ್ದಾರೆ. ಈ ಮೂಲಕ ನೇತ್ರದಾನ ಮಾಡುವವರ ಸಂಖ್ಯೆಯಲ್ಲಿ ಗಣನೀಯ ಏರಿಕೆಯಾಗಿದೆ.

ಈ ಕುರಿತು ಮಾತನಾಡುವ “ನಾರಾಯಣ ನೇತ್ರಾಲಯ’ ಮುಖ್ಯಸ್ಥ ಡಾ. ಭುಜಂಗ ಶೆಟ್ಟಿ, “ಪವರ್‌ಸ್ಟಾರ್‌ ಪುನೀತ್‌ ರಾಜಕುಮಾರ್‌ ನಿಧನದ ಬಳಿಕ ನೇತ್ರದಾನ ಮಾಡುತ್ತಿರುವವರ ಸಂಖ್ಯೆಯಲ್ಲಿ ಗಣನೀಯ ಹೆಚ್ಚಳವಾಗಿದೆ. “ನಾರಾಯಣ ನೇತ್ರಾಲಯ’ದಲ್ಲಿರುವ “ಡಾ. ರಾಜಕುಮಾರ್‌ ಕಣ್ಣಿನ ಬ್ಯಾಂಕ್‌’ನಲ್ಲಿ ಈಗಾಗಲೇ 12 ಸಾವಿರಕ್ಕೂ ಅಧಿಕ ಮಂದಿ ನೇತ್ರದಾನಕ್ಕೆ ಸ್ವಯಂಪ್ರೇರಿತರಾಗಿ ನೇರವಾಗಿ ನೋಂದಣಿ ಮಾಡಿಸಿಕೊಂಡಿದ್ದಾರೆ. ವಾರದ ಹಿಂದಷ್ಟೇ ನೇತ್ರದಾನಕ್ಕೆ ಆನ್‌ಲೈನ್‌ನಲ್ಲೂ ನೋಂದಣಿ ಶುರುವಾಗಿದ್ದು, ಕೇವಲ ನಾಲ್ಕು ದಿನಗಳಲ್ಲಿ ಆನ್‌ಲೈನ್‌ ಮೂಲಕವೇ ಸುಮಾರು 30 ಸಾವಿರಕ್ಕೂ ಅಧಿಕ ಮಂದಿ ನೇತ್ರದಾನಕ್ಕೆ ನೋಂದಣಿ ಮಾಡಿಸಿಕೊಂಡಿದ್ದಾರೆ’ ಎಂದರು.

ಹೊಸ ಚಿತ್ರ “ನೇತ್ರದಾನ’ದ ಶೀರ್ಷಿಕೆ ಬಿಡುಗಡೆಗೊಳಿಸಿ ಮಾತನಾಡಿದ ಡಾ. ಭುಜಂಗ ಶೆಟ್ಟಿ, “ಪುನೀತ್‌ ರಾಜಕುಮಾರ್‌ ಅವರ ನಿಧನದ ನಂತರ ಅವರ ಕಣ್ಣುಗಳಿಂದ 4 ಜನರಿಗೆ ಶಸ್ತ್ರ ಚಿಕಿತ್ಸೆ ಮೂಲಕ ದೃಷ್ಟಿ ನೀಡಲಾಗಿದೆ. ಕೊರೊನಾ ಕಾರಣದಿಂದ ಕಳೆದ ಒಂದೂವರೆ ವರ್ಷದಿಂದ ನೇತ್ರದಾನ ಮಾಡುವವರ ಸಂಖ್ಯೆಯೂ ಕಡಿಮೆಯಾಗಿತ್ತು. ಆದರೆ, ಪುನೀತ್‌ ರಾಜಕುಮಾರ್‌ ನಿಧನದ ಬಳಿಕ ಸ್ವಯಂ ಪ್ರೇರಿತರಾಗಿ ನೇತ್ರದಾನ ಮಾಡುವವರ ಸಂಖ್ಯೆ ಗಣನೀಯವಾಗಿ ಹೆಚ್ಚಾಗುತ್ತಿದ್ದು, 2 ತಿಂಗಳಲ್ಲಿ ಸುಮಾರು 470ಕ್ಕೂ ಹೆಚ್ಚು ಮಂದಿಯ ಕಣ್ಣುಗಳನ್ನು ಶಸ್ತ್ರ ಚಿಕಿತ್ಸೆ ಮೂಲಕ ದೃಷ್ಟಿ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಅಳವಡಿಸಿ ದೃಷ್ಟಿ ನೀಡಲಾಗಿದೆ. ಪುನೀತ್‌ ರಾಜಕುಮಾರ್‌ ತಮ್ಮ ಕಣ್ಣುಗಳನ್ನು ನೀಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಪುನೀತ್‌ ಪ್ರೇರಣೆಯಿಂದ, ಮುಂದಿನ ದಿನಗಳಲ್ಲಿ ನೇತ್ರದಾನ ಮಾಡುವವರೆ ಸಂಖ್ಯೆ ಇನ್ನಷ್ಟು ಏರಿಕೆಯಾಗುವ ಸಾಧ್ಯತೆ ಇದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇದನ್ನೂ ಓದಿ:ವಿದ್ಯುತ್‌ ಗುಣಮಟ್ಟ ಹೆಚ್ಚಳಕ್ಕೆ ಕೇಂದ್ರದಿಂದ 8,500 ಕೋ.ರೂ.

ಇನ್ನು “ನಾರಾಯಣ ನೇತ್ರಾಲಯ’ದಲ್ಲಿರುವ “ಡಾ. ರಾಜಕುಮಾರ್‌ ಕಣ್ಣಿನ ಬ್ಯಾಂಕ್‌’ನಲ್ಲಿ ನೇತ್ರದಾನ ಮಾಡುವವರ ನೋಂದಣಿಗೆ ಆನ್‌ಲೈನ್‌ನಲ್ಲೂ ಅವಕಾಶವಿದ್ದು, ನೇತ್ರದಾನ ಮಾಡಲು ಆಸಕ್ತಿ ಇರುವವರು 8884018800 ಸಂಖ್ಯೆಗೆ ಮಿಸ್ಡ್ ಕಾಲ್‌ ನೀಡಿದರೆ ಆನ್‌ಲೈನ್‌ನಲ್ಲಿಯೇ ಅರ್ಜಿಯ ಲಿಂಕ್‌ ಮೊಬೈಲ್‌ ನಂಬರ್‌ಗೆ ಕಳುಹಿಸಲಾಗುತ್ತದೆ. ಅದರಲ್ಲಿ ಕೆಲವು ಸರಳವಾದ ಮಾಹಿತಿಯನ್ನು ಭರ್ತಿ ಮಾಡಿದರೆ, ಕೆಲ ನಿಮಿಷಗಳಲ್ಲಿ ಆನ್‌ ಲೈನ್‌ನಲ್ಲಿಯೇ ನೇತ್ರದಾನ ನೋಂದಣಿಯಾಗುವುದರ ಜೊತೆಗೆ ನೋಂದಣಿ ಪ್ರಮಾಣಪತ್ರ ಕೂಡ ಮೊಬೈಲ್‌ಗೆ ಬರುತ್ತದೆ.

“ಎಲ್ಲರೂ ಆನ್‌ಲೈನ್‌ನಲ್ಲಿ ಇದರ ಸದುಪಯೋಗ ಪಡಿಸಿಕೊಳ್ಳಬೇಕು. ದೃಷ್ಟಿ ಸಮಸ್ಯೆಯಿಂದ ಬಳಲುತ್ತಿರುವವರು ಮತ್ತು ನೇತ್ರದಾನ ಮಾಡುವವರ ನಡುವಿನ ಸಂಖ್ಯೆಯಲ್ಲಿ ಸಾಕಷ್ಟು ಅಂತರವಿದೆ. ಹೀಗಾಗಿ ಸ್ವಯಂ ಪ್ರೇರಿತರಾಗಿ ಎಲ್ಲರೂ ನೇತ್ರದಾನಕ್ಕೆ ಮುಂದಾಗಬೇಕು. ನಮ್ಮ ಕೈಲಾದ ಮಟ್ಟಿಗೆ ನೇತ್ರದಾನದ ಬಗ್ಗೆ ಅರಿವು ಮೂಡಿಸಬೇಕು’ ಎಂದು ಡಾ. ಭುಜಂಗ ಶೆಟ್ಟಿ ಕರೆ ನೀಡಿದರು.

ಟಾಪ್ ನ್ಯೂಸ್

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

ip

‌IPL Auction: ಕೇನ್‌, ಮಯಾಂಕ್‌, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ

Andaman: ಮೀನುಗಾರಿಕಾ ದೋಣಿಯಲ್ಲಿದ್ದ 5 ಟನ್ ಮಾದಕ ವಸ್ತು ವಶಕ್ಕೆ ಪಡೆದ ಕೋಸ್ಟ್ ಗಾರ್ಡ್

Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

BBK11: ಧರ್ಮ ಬಿಗ್‌ ಬಾಸ್‌ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್‌ ಹೀರೋʼ ಎಡವಿದ್ದೆಲ್ಲಿ?

BBK11: ಧರ್ಮ ಬಿಗ್‌ ಬಾಸ್‌ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್‌ ಹೀರೋʼ ಎಡವಿದ್ದೆಲ್ಲಿ?

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

Ajit Pawar supports Devendra Fadnavis; CM tussle continues in Maharashtra

Politics: ಫಡ್ನವೀಸ್‌ ಗೆ ಬೆಂಬಲ ನೀಡಿದ ಅಜಿತ್;‌ ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kiran raj’s Megha movie

‌Megha Movie: ನಾನು ಎಂಟು ಸಾರಿ ಕೇಳಿದ ಕಥೆಯಿದು…: ಕಿರಣ್‌ ರಾಜ್

Sudeep: ‘Max’ release date fixed: Production company wakes up to Kichchan’s anger

Sudeep: ʼಮ್ಯಾಕ್ಸ್‌ʼ ರಿಲೀಸ್‌ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

Vijay Raghavendra is in Rudrabhishekam Movie

Kannada Cinema: ‘ರುದ್ರಾಭಿಷೇಕಂ’ನಲ್ಲಿ ವಿಜಯ್‌ ರಾಘವೇಂದ್ರ

Shivaraj-Kumar

Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್‌

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

kiran raj’s Megha movie

‌Megha Movie: ನಾನು ಎಂಟು ಸಾರಿ ಕೇಳಿದ ಕಥೆಯಿದು…: ಕಿರಣ್‌ ರಾಜ್

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

ip

‌IPL Auction: ಕೇನ್‌, ಮಯಾಂಕ್‌, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ

Andaman: ಮೀನುಗಾರಿಕಾ ದೋಣಿಯಲ್ಲಿದ್ದ 5 ಟನ್ ಮಾದಕ ವಸ್ತು ವಶಕ್ಕೆ ಪಡೆದ ಕೋಸ್ಟ್ ಗಾರ್ಡ್

Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ

Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್‌ಗಳು-ಕಡಲಾಮೆಗೆ ಅಪಾಯ!

Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್‌ಗಳು-ಕಡಲಾಮೆಗೆ ಅಪಾಯ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.