ಗ್ರಂಥಾಲಯ ಕಾಮಗಾರಿ ವೀಕ್ಷಣೆ
Team Udayavani, Jan 4, 2022, 12:37 PM IST
ಜಮಖಂಡಿ: ಸಾರ್ವಜನಿಕ ಗ್ರಂಥಾಲಯ ಕಟ್ಟಡ ಶಿಥಿಲಾವ್ಯಸ್ಥೆ ತಲುಪಿದ್ದು, ತೆರವು ಕಾರ್ಯಾಚರಣೆ ನಡೆದಿದೆ ಎಂದು ಶಾಸಕ ಆನಂದ ಸಿದ್ದು ನ್ಯಾಮಗೌಡ ಹೇಳಿದರು.
ನಗರದಲ್ಲಿ ಸೋಮವಾರ ಗ್ರಂಥಾಲಯ ಕಾಮಗಾರಿ ವೀಕ್ಷಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾರ್ವಜನಿಕ ಗ್ರಂಥಾಲಯಗಳ ಇಲಾಖೆ ಅಧೀನದಲ್ಲಿರುವ ನಗರದ ಗ್ರಂಥಾಲಯ 1.30 ಕೋಟಿ ವೆಚ್ಚದಲ್ಲಿ ಹೊಸ ತಂತ್ರಜ್ಞಾನ ಬಳಕೆಯೊಂದಿಗೆ ನಿರ್ಮಾಣದ ಕೆಲಸ ಭರದಿಂದ ನಡೆದಿದೆ ಎಂದರು.
ಐತಿಹಾಸಿಕ ಹಿನ್ನೆಲೆ ಹೊಂದಿರುವ ಈ ಕಟ್ಟಡದ ಮೂಲ ಸ್ವರೂಪ ಧಕ್ಕೆ ತರದೇ, ತೆರವುಗೊಳಿಸದೇ ಹೊಸ ತಂತ್ರಜ್ಞಾನ ಬಳಕೆಯೊಂದಿಗೆ ಹೊಸ ರೂಪ ನೀಡುವ ಮೂಲಕ ಸಾರ್ವಜನಿಕರಿಗೆ, ಓದುಗರಿಗೆ ಅರ್ಪಿಸಲಾಗುತ್ತಿದೆ. ಇ-ಗ್ರಂಥಾಲಯ ಸಹಿತ 500 ವಿದ್ಯಾರ್ಥಿಗಳು ಕುಳಿತುಕೊಳ್ಳುವ ನಿಟ್ಟಿನಲ್ಲಿ ಗುಣಮಟ್ಟದ ಸಭಾಭವನ ನಿರ್ಮಿಸುವ ಮೂಲಕ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ನೀಡುವ ಯೋಜನೆಯಿದೆ. ಇ-ಗ್ರಂಥಾಲಯವನ್ನು ವಿದ್ಯಾರ್ಥಿಗಳ ಮಾಹಿತಿ ಕೇಂದ್ರವಾಗಿಸುವ ನಿಟ್ಟಿನಲ್ಲಿ ಸೌಲಭ್ಯ ಅಳವಡಿಸಲಾಗುತ್ತಿದೆ ಎಂದರು.
ಹಿಂದಿನ ಶಾಸಕ ದಿ. ಸಿದ್ದು ನ್ಯಾಮಗೌಡ ತಮ್ಮ ಅವಧಿಯಲ್ಲಿ ಅನುದಾನ ಮೀಸಲಿಟ್ಟಿದ್ದಾರೆ. ಅದರಂತೆ ವಿಧಾನ ಪರಿಷತ್ ಸದಸ್ಯರಾದ ಎಸ್.ಆರ್.ಪಾಟೀಲ, ಸುನೀಲಗೌಡ ಪಾಟೀಲ ಅನುದಾನ ನೀಡಿದ್ದಾರೆ. ಕೇಂದ್ರ-ರಾಜ್ಯ ಸರಕಾರ ಅನುದಾನ ಮತ್ತು ಶಾಸಕರ, ಸಚಿವರ, ವಿಧಾನ ಪರಿಷತ್ ಸದಸ್ಯ ಮತ್ತು ರಾಜ್ಯಸಭಾ ಸದಸ್ಯರ ಅನುದಾನದಲ್ಲಿ ಇ-ಗ್ರಂಥಾಲಯ ಪೂರ್ಣಗೊಳ್ಳಲಿದೆ ಎಂದರು. ಬಸವರಾಜ ಹರಕಂಗಿ, ಕುಮಾರ ಆಲಗೂರ, ಅಬುಬಕರ ಕುಡಚಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್
Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Ranchi: ಪ್ರೇಯಸಿಯನ್ನು ಕೊಂದು 40ರಿಂದ 50 ತುಂಡು ಮಾಡಿದ ಕಟುಕ!
Hunsur: ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು
ICC ಚಾಂಪಿಯನ್ಸ್ ಟ್ರೋಫಿ ಪಾಕಿಸ್ತಾನದಿಂದ ಸಂಪೂರ್ಣ ಸ್ಥಳಾಂತರ?: ಐಸಿಸಿ ಸಭೆಯಲ್ಲಿ ನಿರ್ಧಾರ
Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ
ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ವಿದ್ಯಾರ್ಥಿಗಳ ಬಸ್ ಪಲ್ಟಿ,ನಾಲ್ವರು ವಿದ್ಯಾರ್ಥಿಗಳಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.