ನಕಲಿ ಬಿಲ್ ಪಾವತಿ ಪತ್ತೆ: ಸಚಿವ ಗೋವಿಂದ ಕಾರಜೋಳ
Team Udayavani, Jan 5, 2022, 5:20 AM IST
ಬೆಂಗಳೂರು: ನೀರಾವರಿ ನಿಗಮದ ಅಥಣಿ ವಿಭಾಗದಲ್ಲಿ 28 ಕೋಟಿ ರೂ. ಮೊತ್ತದ ನಕಲಿ ಬಿಲ್ ಪಾವತಿ ಮಾಡಿರುವುದು ಬೆಳಕಿಗೆ ಬಂದಿದ್ದು, ಪ್ರಕರಣಕ್ಕೆ ಸಂಬಂಧಿಸಿ 20 ಅಧಿಕಾರಿಗಳನ್ನು ಅಮಾನತಿನಲ್ಲಿಡುವುದರ ಜತೆಗೆ ಅವರ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗಿದೆ ಎಂದು ಸಚಿವ ಗೋವಿಂದ ಕಾರಜೋಳ ತಿಳಿಸಿದರು.
ಮಂಗಳವಾರ ಕರ್ನಾಟಕ ನೀರಾವರಿ ನಿಗಮದ ಯೋಜನಾ ವಾರು ಪ್ರಗತಿ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಎಲ್ಲ ಅಧಿಕಾರಿಗಳ ಆಸ್ತಿ ಪರಭಾರೆ ಆಗದಂತೆ ನಿಯಮಾನುಸಾರ ಋಣಭಾರ ಸೃಷ್ಟಿಸಲು ಜಿಲ್ಲಾಧಿಕಾರಿಗಳನ್ನು ಮತ್ತು ಉಪ ನೋಂದ ಣಾಧಿಕಾರಿಗಳನ್ನು ಕೋರಲಾಗಿದೆ. ಇಂತಹ ಪ್ರಕರಣಗಳನ್ನು ಜಾಗೃತ ದಳದ ತನಿಖೆಗೆ ಒಪ್ಪಿಸಲಾಗಿದೆ. ಬೇರೆ ಯಾವುದಾದರೂ ಪ್ರಕರಣ ಗಳು ಗಮನಕ್ಕೆ ಬಂದರೆ, ಅಂಥವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರಗಿಸ ಲಾಗುವುದು ಎಂದೂ ಹೇಳಿದರು.
ಇದನ್ನೂ ಓದಿ:ಮಸ್ಕ್ ಕಂಪನಿಯಿಂದ ಗ್ರಾಹಕರಿಗೆ ಮೊತ್ತ ವಾಪಸ್ !
ಪ್ರಸಕ್ತ ವರ್ಷ 45,337 ಹೆಕ್ಟೇರ್ ನೀರಾವರಿ
ರಾಜ್ಯಾದ್ಯಂತ 18 ಸಾವಿರ ಕೋಟಿ ವೆಚ್ಚದ ನೀರಾವರಿ ಕಾಮಗಾರಿಗಳು ಕರ್ನಾಟಕ ನೀರಾವರಿ ನಿಗಮದಡಿ ನಡೆಯುತ್ತಿದ್ದು, ನಿಗಮದ ಒಟ್ಟಾರೆ ನೀರಾವರಿ ಸಾಮರ್ಥ್ಯದ ಗುರಿ 17,14,337 ಹೆಕ್ಟೇರ್ ಆಗಿದೆ. ಈ ಪೈಕಿ 2021ರ ನವೆಂಬರ್ ಅಂತ್ಯಕ್ಕೆ 14,66,251 ಹೆಕ್ಟೇರ್ ಅನ್ನು ನೀರಾವರಿ ವ್ಯಾಪ್ತಿಗೆ ತರಲಾಗಿದ್ದು, ಇನ್ನೂ 2,45,086 ಹೆಕ್ಟೇರ್ ಗುರಿ ಸಾಧಿಸಬೇಕಿದೆ. ಪ್ರಸಕ್ತ ಸಾಲಿನಲ್ಲಿ 45,337 ಹೆಕ್ಟೇರ್ ಜಮೀನನ್ನು ನೀರಾವರಿ ವ್ಯಾಪ್ತಿಗೆ ಒಳಪಡಿಸಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
BBK11: ಧರ್ಮ ಬಿಗ್ ಬಾಸ್ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್ ಹೀರೋʼ ಎಡವಿದ್ದೆಲ್ಲಿ?
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.