ಉಡುಪಿ: 72 ; ದ.ಕ.: 75 ಮಂದಿಗೆ ಕೋವಿಡ್‌ ಸೋಂಕು; 1 ಸಾವು

ಉಡುಪಿ ಜಿಲ್ಲೆ: ಪಾಸಿಟಿವಿಟಿ ದರ ಶೇ. 3.34ಕ್ಕೇರಿದೆ; ದ.ಕ. : ಪಾಸಿಟಿವಿಟಿ ದರ ಶೇ. 1.13ಕ್ಕೆ ಜಿಗಿತ

Team Udayavani, Jan 5, 2022, 7:50 AM IST

ಉಡುಪಿ: 72 ; ದ.ಕ.: 75 ಮಂದಿಗೆ ಕೋವಿಡ್‌ ಸೋಂಕು; 1 ಸಾವು

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ.
ಸೋಮವಾರ 43 ಮಂದಿಗೆ ಸೋಂಕು ದೃಢಪಟ್ಟಿದ್ದರೆ ಮಂಗಳವಾರ 72 ಮಂದಿಗೆ ಸೋಂಕು ದೃಢಪಟ್ಟಿದೆ.

ಇದರಿಂದಾಗಿ ಜಿಲ್ಲೆಯಲ್ಲಿ ಪಾಸಿಟಿವಿಟಿ ದರ ಶೇ. 3.34ಕ್ಕೇರಿದೆ.2,128 ಮಂದಿಯನ್ನು ತಪಾಸಣೆಗೆ ಒಳಪಡಿಸಲಾಗಿದೆ. ಉಡುಪಿಯಲ್ಲಿ 66, ಕಾರ್ಕಳ-3, ಕುಂದಾಪುರ 2 ಮತ್ತು ಇತರ ಜಿಲ್ಲೆಯ ಒಬ್ಬರಿಗೆ ಸೋಂಕು ದೃಢಪಟ್ಟಿದೆ.

ಪತ್ತೆಯಾದ ಪ್ರಕರಣಗಳಲ್ಲಿ ತಲಾ 27 ಮಂದಿ ಪುರುಷರು ಮತ್ತು ಮಹಿಳೆಯರು ಲಕ್ಷಣಸಹಿತರಾಗಿದ್ದರೆ 11 ಪುರುಷರು ಮತ್ತು 7 ಮಂದಿ ಮಹಿಳೆಯರು ಲಕ್ಷಣ ರಹಿತರಾಗಿದ್ದಾರೆ. ಇವರಲ್ಲಿ ಐವರನ್ನು ಸಾಂಸ್ಥಿಕ ಐಸೊಲೇಶನ್‌ ಗೆ ಒಳಪಡಿಸಲಾಗಿದ್ದರೆ 67 ಮಂದಿ ಯನ್ನು ಹೋಮ್‌ ಐಸೊಲೇಶನ್‌ ಮಾಡಲಾಗಿದೆ. ಇದೇ ವೇಳೆ 10 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 282 ಪ್ರಕರಣಗಳು ಸಕ್ರಿಯವಾಗಿವೆ.

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ದೈನಂದಿನ ಪ್ರಕರಣ ದಿನದಿಂದ ದಿನಕ್ಕೆ ಏರಿಕೆ ಕಾಣು
ತ್ತಿದ್ದು, ಕಳೆದ ಕೆಲ ತಿಂಗಳ ಬಳಿಕ ಮಂಗಳವಾರ 75 ಮಂದಿಗೆ ಕೊರೊನಾ ದೃಢಪಟ್ಟು ಒಬ್ಬರು ಸಾವನ್ನಪ್ಪಿದ್ದಾರೆ. ಈ ನಡುವೆ ಜಿಲ್ಲೆಯ ಪಾಸಿಟಿವಿಟಿ ದರವೂ ಶೇ. 1.13ಕ್ಕೆ ಜಿಗಿತ ಕಂಡಿದೆ. 7 ಮಂದಿ ಗುಣ ಮುಖರಾಗಿದ್ದಾರೆ. ಸದ್ಯ 341 ಸಕ್ರಿಯ ಪ್ರಕರಣಗಳಿವೆ.

ದ.ಕ. ಜಿಲ್ಲೆಯಲ್ಲಿ ಒಂದು ವಾರದಿಂದ ಕೊರೊನಾ ಏರಿಕೆ ಕಾಣುತ್ತಿದೆ. ಜ. 1ರಂದು 48 ಪ್ರಕರಣವಿದ್ದರೆ ಜ. 2ರಂದು 53, 3ರಂದು 52 ಪ್ರಕರಣವಿತ್ತು. ಆದರೆ ಜ. 4ರಂದು ಇದು 75ಕ್ಕೇರಿತ್ತು.

ಒಂದೆಡೆ ವಾತಾವರಣ ಕೂಡ ಬದಲಾವಣೆಯಾಗಿದ್ದು, ಹಲ ವರಲ್ಲಿ ಶೀತ-ಜ್ವರ ಕಾಣಿಸಿ ಕೊಳ್ಳು  ತ್ತಿದೆ. ಈ ವೇಳೆ ತಪಾಸಣೆ ವೇಳೆ ಕೆಲ ವರಲ್ಲಿ ಕೊರೊನಾ ದೃಢಪಡುತ್ತಿದೆ ಎನ್ನು ತ್ತಾರೆ ಆರೋಗ್ಯ ಇಲಾಖೆ ಅಧಿಕಾರಿ ಗಳು. ಮತ್ತೊಂದೆಡೆ, ಕ್ಲಸ್ಟರ್‌ ಪ್ರದೇಶ ಸೇರಿದಂತೆ ಕೊರೊನಾ ವ್ಯಕ್ತಿಯ ಪ್ರಾಥಮಿಕ, ದ್ವಿತೀಯ ಸಂಪರ್ಕದವರನ್ನು ಪರೀಕ್ಷೆ ನಡೆಸಲಾಗುತ್ತಿದೆ. ಈ ವೇಳೆಯೂ ಕೊರೊನಾ ಪಾಸಿಟಿವ್‌ ದೃಢಪಡು ತ್ತಿದೆ. ಈ ನಡುವೆ ಜಿಲ್ಲೆಯಲ್ಲಿ ಕೊರೊನಾ ಟೆಸ್ಟಿಂಗ್‌ ಅನ್ನು 15,000ಕ್ಕೆ ಏರಿಕೆ ಮಾಡಲಾಗಿದೆ.

ಕೊಡಗು: ಇಬ್ಬರಿಗೆ ಸೋಂಕು
ಮಡಿಕೇರಿ: ಜಿಲ್ಲೆಯಲ್ಲಿ ಮಂಗಳ ವಾರ ಇಬ್ಬರಿಗೆ ಸೋಂಕು ದೃಢಪಟ್ಟಿದೆ. 3 ಮಂದಿ ಗುಣಮುಖರಾಗಿದ್ದಾರೆ. 175 ಸಕ್ರಿಯ ಪ್ರಕರಣಗಳಿವೆ. ಜಿಲ್ಲೆಯಲ್ಲಿ ಪಾಸಿಟಿವಿಟಿ ದರ ಶೇ. 0.08 ಆಗಿದೆ ಎಂದು ಜಿಲ್ಲಾಧಿಕಾರಿ ಡಾ| ಬಿ.ಸಿ. ಸತೀಶ ತಿಳಿಸಿದ್ದಾರೆ.

ಇದನ್ನೂ ಓದಿ:ಕೋವಿಡ್ ಹೆಚ್ಚಳ : ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ಜಾರಿ, ಬೆಂಗಳೂರಿನಲ್ಲಿ 2 ವಾರ ಶಾಲೆ ಬಂದ್

ಕಾಸರಗೋಡು: 49ಮಂದಿಗೆ ಸೋಂಕು
ಕಾಸರಗೋಡು: ಜಿಲ್ಲೆಯಲ್ಲಿ ಮಂಗಳವಾರ 49 ಮಂದಿಗೆ ಸೋಂಕು ದೃಢಪಟ್ಟಿದ್ದು 28 ಮಂದಿ ಗುಣಮುಖರಾಗಿದ್ದಾರೆ. ಪ್ರಸ್ತುತ 352 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕೇರಳದಲ್ಲಿ 3,640 ಪ್ರಕರಣ
ಕೇರಳದಲ್ಲಿ ಮಂಗಳವಾರ 3,640 ಮಂದಿಗೆ ಸೋಂಕು ದೃಢ ಪಟ್ಟಿದ್ದು 2,363 ಮಂದಿ ಗುಣ ಮುಖರಾಗಿದ್ದಾರೆ.
30 ಮಂದಿ ಮೃತಪಟ್ಟಿದ್ದು ಒಟ್ಟು ಸಾವಿನ ಸಂಖ್ಯೆ 48,637ಕ್ಕೇರಿದೆ. 20,180 ಮಂದಿ ಚಿಕಿತ್ಸೆ ಪಡೆ ಯುತ್ತಿದ್ದಾರೆ.

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆ 33,026 ಮಂದಿಗೆ ಲಸಿಕೆ
ಮಂಗಳೂರು/ಉಡುಪಿ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಮಂಗಳವಾರ 15ರಿಂದ 18 ವರ್ಷದ ಮಕ್ಕಳ ಸಹಿತ ಒಟ್ಟು 33,026 ಮಂದಿಗೆ ಲಸಿಕೆ ಹಾಕಲಾಗಿದೆ. ದ.ಕ. ಜಿಲ್ಲೆಯಲ್ಲಿ ಒಟ್ಟು 22,521 ಮಂದಿಗೆ ಲಸಿಕೆ ನೀಡಲಾಗಿದ್ದು 19,554 ಮಂದಿಗೆ ಮೊದಲ ಮತ್ತು 2,967 ಮಂದಿಗೆ ಎರಡನೇ ಡೋಸ್‌ ಲಸಿಕೆ ನೀಡಲಾಗಿದೆ. ಉಡುಪಿ ಜಿಲ್ಲೆಯಲ್ಲಿ 10,505 ಮಂದಿಗೆ ಲಸಿಕೆ ಹಾಕಲಾಗಿದ್ದು 9,419 ಮಂದಿ ಮೊದಲ ಹಾಗೂ 1,086 ಮಂದಿ ಎರಡನೇ ಬಾರಿಗೆ ಲಸಿಕೆ ಪಡೆದುಕೊಂಡರು.

18,942 ವಿದ್ಯಾರ್ಥಿಗಳಿಗೆ ಲಸಿಕೆ
ದ.ಕ. ಜಿಲ್ಲೆಯಲ್ಲಿ ಮಂಗಳವಾರ 18,942 ವಿದ್ಯಾರ್ಥಿಗಳಿಗೆ ಲಸಿಕೆ ನೀಡಲಾಗಿದೆ. ಮಂಗಳೂರಿನಲ್ಲಿ ಅತೀ ಹೆಚ್ಚು 8,450 ವಿದ್ಯಾರ್ಥಿಗಳು, ಬಂಟ್ವಾಳ ತಾಲೂಕಿನಲ್ಲಿ 4,777, ಬೆಳ್ತಂಗಡಿಯಲ್ಲಿ 2,197, ಪುತ್ತೂರಿನಲ್ಲಿ 2,517 ಮತ್ತು ಸುಳ್ಯ ತಾಲೂಕಿನಲ್ಲಿ 1,001 ಮಂದಿ ವಿದ್ಯಾರ್ಥಿಗಳಿಗೆ ಲಸಿಕೆ ನೀಡಲಾಗಿದೆ.

10 ಸಾವಿರಕ್ಕೂ ಅಧಿಕ ಮಂದಿ ಮಕ್ಕಳಿಗೆ ಲಸಿಕೆ
ಉಡುಪಿ ಜಿಲ್ಲೆಯಲ್ಲಿ ಸೋಮವಾರ 15ರಿಂದ 18 ವರ್ಷದೊಳಗಿನ ಮಕ್ಕಳಿಗೆ ಲಸಿಕೆ ನೀಡುವ ಪ್ರಕ್ರಿಯೆ ಆರಂಭ ಗೊಂಡಿದ್ದು, ಮಂಗಳವಾರ 10 ಸಾವಿರಕ್ಕೂ ಅಧಿಕ ಮಂದಿ ಮಕ್ಕಳು ಲಸಿಕೆ ಪಡೆದುಕೊಂಡರು. ಸೋಮವಾರ ಜಿಲ್ಲೆಯಲ್ಲಿ ಲಸಿಕೆ ಪಡೆದ ಮಕ್ಕಳ ಸಂಖ್ಯೆ 14,500.

ಉಡುಪಿ: ಇಂದು ಕೋವಿಡ್‌ ಜಾಗೃತಿ
ಉಡುಪಿ: ಎಲ್ಲ ನಗರಸಭೆ, ಪುರಸಭೆ, ಪ.ಪಂ., ಗ್ರಾ.ಪಂ.ವ್ಯಾಪ್ತಿಯಲ್ಲಿ ಜ. 5ರಂದು ಕೋವಿಡ್‌-19 ಕುರಿತು ಜಾಗೃತಿ ಮೂಡಿಸುವ ಅಭಿಯಾನ ಆಯೋಜಿಸುವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್‌ ಸೂಚಿಸಿದ್ದಾರೆ.

ಸರ್ವೇಕ್ಷಣಾಧಿಕಾರಿ ಕಚೇರಿಯಲ್ಲಿ ಮಂಗಳ ವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಅಬಕಾರಿ, ಕಂದಾಯ, ಪೊಲೀಸ್‌, ಮೀನುಗಾರಿಕೆ, ಪ್ರವಾಸೋದ್ಯಮ, ಸಾರಿಗೆ, ಪ.ಪೂ.ಶಿಕ್ಷಣ ಇಲಾಖೆ ಅಧಿಕಾರಿಗಳು ಕೋವಿಡ್‌-19 ಕುರಿತು ಜನ ಜಾಗೃತಿ ಮೂಡಿಸುವ ಚಟುವಟಿಕೆಗಳನ್ನು ಜ. 5ರಂದು ಸಂಜೆ 5ರಿಂದ 6ರ ವರೆಗೆ ಆಯೋಜಿಸಲು ಅಗತ್ಯ ಕ್ರಮಕೈಗೊಳ್ಳಲು ಸೂಚಿಸಿದರು.

ಮಾಸ್ಕ್ ಧರಿಸದೆ ಓಡಾಡುವವರು, ಸಾಮಾಜಿಕ ಅಂತರ ಕಾಪಾಡಿ ಕೊಳ್ಳದಿರು ವವರು, ರಸ್ತೆಯಲ್ಲಿ ಹಾಗೂ ಸಿಕ್ಕ ಸಿಕ್ಕ ಕಡೆ ಉಗುಳುವವರನ್ನು ಗುರುತಿಸಿ ಎಚ್ಚರಿಕೆ ನೀಡು ವುದು, ಮಾರ್ಗಸೂಚಿ ಉಲ್ಲಂ ಸಿ ರುವ ಸಾರ್ವಜನಿಕರಿಗೆ ದಂಡ ವಿಧಿಸಿ ಜನ ಜಾಗೃತಿ ಮೂಡಿಸುವಂತೆ ಸೂಚನೆ ನೀಡಿದರು.

ಜಿ.ಪಂ. ಸಿಇಒ ಡಾ| ನವೀನ್‌ ಭಟ್‌, ಕುಂದಾಪುರ ಉಪ ವಿಭಾಗಾಧಿಕಾರಿ ರಾಜು, ಡಿಎಚ್‌ಒ ಡಾ| ನಾಗಭೂಷಣ ಉಡುಪ, ಜಿ.ಪಂ. ಉಪ ಕಾರ್ಯದರ್ಶಿ ಕಿರಣ್‌ ಪೆಡೆ°ಕರ್‌, ಆರೋಗ್ಯ ಇಲಾಖೆ ಮತ್ತು ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

BJP-waqf-Protest

BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ

1-remo

Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ

ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್

IFFI 2024: ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್

IPL: Players from these countries are fully available for the next three seasons of IPL

IPL: ಇನ್ನು ಮೂರು ಸೀಸನ್‌ ಐಪಿಎಲ್‌ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ

1-a-raga-pg

Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Naxal encounter case: Jayant Gowda’s interrogation, villagers lay siege to the police station

Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ಮಿಕ್ಸಿಂಗ್ ವಾಹನ ಪಲ್ಟಿ… ತಪ್ಪಿದ ಅನಾಹುತ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ

8-udupi

Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್‌.ಆರ್‌.

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

BJP-waqf-Protest

BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ

1-remo

Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ

Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ

Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.