ಐದು ವರ್ಷಗಳಲ್ಲಿ 400 ಶತಕೋಟಿ ಡಾಲರ್‌ ಡಿಜಿಟಲ್‌ ಆರ್ಥಿಕತೆ ಗುರಿ

ಬೆಳಗಾವಿಯಲ್ಲಿ ಸಿಇಒಗಳ ಜತೆ ಸಚಿವ ಅಶ್ವತ್ಥ ನಾರಾಯಣ ಶೃಂಗಸಭೆ

Team Udayavani, Jan 6, 2022, 6:20 AM IST

ಐದು ವರ್ಷಗಳಲ್ಲಿ 400 ಶತಕೋಟಿ ಡಾಲರ್‌ ಡಿಜಿಟಲ್‌ ಆರ್ಥಿಕತೆ ಗುರಿ

ಬೆಳಗಾವಿ: ಮುಂದಿನ ಐದು ವರ್ಷಗಳಲ್ಲಿ 400 ಶತಕೋಟಿ ಡಾಲರ್‌ ಮೌಲ್ಯದ ಡಿಜಿಟಲ್‌ ಆರ್ಥಿಕತೆ ಬೆಳೆಸುವ ಗುರಿ ಸರಕಾರಕ್ಕಿದೆ. ರಾಜ್ಯದ ಎಲ್ಲ ಭಾಗಗಳಲ್ಲೂ ಸಮಾನವಾಗಿ ಉದ್ಯಮಗಳನ್ನು ಬೆಳೆಸುವ ಉದ್ದೇಶ ಇದೆ ಎಂದು ಐಟಿ, ಬಿಟಿ ಮತ್ತು ಕೌಶಲಾಭಿವೃದ್ಧಿ ಸಚಿವ ಡಾ| ಸಿ.ಎನ್‌. ಅಶ್ವತ್ಥನಾರಾಯಣ ಹೇಳಿದರು.

“ಕರ್ನಾಟಕ ಡಿಜಿಟಲ್‌ ಎಕಾನಮಿ ಮಿಷನ್‌ (ಕೆ-ಡಿಇಎಂ) ಬಿಯಾಂಡ್‌ ಬೆಂಗಳೂರು’ ಉಪಕ್ರಮದ ನಿಮಿತ್ತ ಮಂಗಳವಾರ ನಗರದಲ್ಲಿ ಏರ್ಪ ಡಿಸಿದ್ದ ಸಿಇಒಗಳ ದುಂಡು ಮೇಜಿನ ಶೃಂಗ ಸಭೆಯಲ್ಲಿ ಮಾತನಾಡಿದ ಅವರು, ಬೆಳಗಾವಿಯು ಉದ್ಯಮಶೀಲತೆ, ಶೈಕ್ಷಣಿಕ ಸಂಸ್ಕೃತಿ ಮತ್ತು ಹಿತಕರ ಹವಾ ಮಾನ ಮೂರಕ್ಕೂ ಹೆಸರಾಗಿದೆ. ಇಲ್ಲಿ ಉದ್ದಿಮೆಗಳನ್ನು ಸಮೃದ್ಧವಾಗಿ ಪೂರ್ಣ ಪ್ರಮಾಣದಲ್ಲಿ ಬೆಳೆಸಲಾಗುವುದು. ಪ್ರಧಾನಿ ಮೋದಿ ದೂರದೃಷ್ಟಿಯಿಂದ ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಘೋಷಿಸಿದ್ದು, ರಾಜ್ಯದಲ್ಲಿ ಇದು ಪೂರ್ವ ಪ್ರಾಥಮಿಕ ಶಿಕ್ಷಣದ ಹಂತದಿಂದಲೇ ಜಾರಿಗೆ ಬರುತ್ತಿದೆ. ಎಂಜಿನಿಯರಿಂಗ್‌, ಡಿಪ್ಲೊಮಾ, ಐಟಿಐ ಮತ್ತು ಪದವಿ ಹಂತಗಳಲ್ಲಿ ಜಾಗತಿಕ ಗುಣಮಟ್ಟದ ಬೋಧನೆ ಅಳವಡಿಸಿಕೊಂಡಿದೆ ಎಂದರು.

ಬೆಳಗಾವಿಯಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕೇಂದ್ರ ಕಚೇರಿ ಇದೆ. ಈ ವಿಶ್ವವಿದ್ಯಾಲಯವನ್ನು ಐಐಎಸ್ಸಿ ಮತ್ತು ಐಐಟಿಗಳ ಮಟ್ಟಕ್ಕೆ ಬೆಳೆಸಿ, ಉತ್ಕೃಷ್ಟ ಸಂಸ್ಥೆಯನ್ನಾಗಿ ಮಾಡಲಾಗುವುದು. ಇದಕ್ಕಾಗಿ ಈಗಾಗಲೇ ಕ್ರಿಯಾ ಯೋಜನೆ ರೂಪಿಸಲಾಗಿದೆ. ರಾಜ್ಯದ ಎಲ್ಲ ಭಾಗಗಳೂ ಸಮಾನವಾಗಿ ಬೆಳವಣಿಗೆ ಸಾಧಿ ಸಬೇಕೆನ್ನುವ ಮಹತ್ವಾಕಾಂಕ್ಷೆ ಯಿಂದಲೇ “ಬಿಯಾಂಡ್‌ ಬೆಂಗಳೂರು’ ಉಪಕ್ರಮವನ್ನು ಅನು ಷ್ಠಾನಕ್ಕೆ ತರಲಾಗುತ್ತಿದೆ. ಉದ್ದಿಮೆಗಳು ಬೆಂಗಳೂರಿನಲ್ಲಿ ಮಾತ್ರವೇ ನೆಲೆಗೊಳ್ಳಬಾರದು ಎನ್ನುವುದು ಇದರ ಉದ್ದೇಶ. ಇದಕ್ಕಾಗಿ ಹುಬ್ಬಳ್ಳಿ, ಮೈಸೂರು ಮತ್ತು ಮಂಗಳೂರು ಕ್ಲಸ್ಟರ್‌ಗಳನ್ನು ಮಾಡಲಾಗಿದ್ದು, ಬೆಳಗಾವಿಯಲ್ಲಿ ಕೂಡ ಉದ್ಯಮಗಳ ಸ್ಥಾಪನೆಗೆ ಎಲ್ಲ ನೆರವನ್ನೂ ಸರಕಾರ ನೀಡಲಿದೆ ಎಂದರು.

ಇದನ್ನೂ ಓದಿ:ಹುಬ್ಬಳ್ಳಿಯಲ್ಲಿ ಪೈಲಟ್‌ ತರಬೇತಿ ಕೇಂದ್ರ: ಪ್ರಹ್ಲಾದ್ ಜೋಷಿ

“ಸೂಪರ್‌-30′
ರಾಜ್ಯದಲ್ಲಿ ಸರಕಾರಿ ಎಂಜಿನಿ ಯರಿಂಗ್‌ ಮತ್ತು ಇವು ಇಲ್ಲದ ಕಡೆಗಳಲ್ಲಿ ಖಾಸಗಿ ಕಾಲೇಜುಗಳನ್ನು ವಿಶ್ವಮಟ್ಟಕ್ಕೆ ಸುಧಾರಿಸುವ “ಸೂಪರ್‌-30′ ಯೋಜನೆಯನ್ನು ರೂಪಿಸಲಾಗಿದೆ. ಇದರ ಜತೆಗೆ ಎಂಜಿನಿಯರಿಂಗ್‌ ಕಾಲೇಜುಗಳು ವಿಶ್ವದ ಯಾವುದೇ ಅತ್ಯುತ್ತಮ ಶಿಕ್ಷಣ ಸಂಸ್ಥೆ ಮತ್ತು ಉದ್ದಿಮೆಗಳೊಂದಿಗೆ ಒಡಂಬಡಿಕೆ ಮಾಡಿಕೊಳ್ಳುವುದನ್ನು ಉತ್ತೇಜಿಸಲಾಗುತ್ತಿದೆ. ಇದು ಸಮಾಜದಲ್ಲಿ ಪರಿವರ್ತನೆ ತರಲಿದ್ದು, ಜಾಗತಿಕ ಮಟ್ಟದ ನಾಯಕತ್ವವನ್ನು ಸೃಷ್ಟಿಸಲಿದೆ ಎಂದರು.

ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ, ವಿದ್ಯುನ್ಮಾನ ಮತ್ತು ಐಟಿ-ಬಿಟಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಇ.ವಿ. ರಮಣ ರೆಡ್ಡಿ, ಐಟಿ ನಿರ್ದೇಶಕಿ ಮೀನಾ ನಾಗರಾಜ ಮೊದಲಾದ ಪ್ರಮುಖರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

5-video

ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

Amazon Employee: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

3-yellapur

Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

Three Nation Trip: ಮೂರು ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

vij

Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ

Belagavi: Let there be a full discussion of issues in the plenary session: Dr. Prabhakar Kore

Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್‌ ಕೋರೆ

Belagavi: ಗೆಳೆಯ ಜೊತೆ ಪಾರ್ಟಿಗೆಂದು ಹೋದ ವ್ಯಕ್ತಿ ಅನುಮಾನಾಸ್ಪದವಾಗಿ ಸಾ*ವು

Belagavi: ಗೆಳೆಯರ ಜೊತೆ ಪಾರ್ಟಿಗೆಂದು ಹೋದ ವ್ಯಕ್ತಿ ಅನುಮಾನಾಸ್ಪದವಾಗಿ ಸಾ*ವು

Belagavi: ಬಾಲಕಿ ಮೇಲೆ ಅತ್ಯಾಚಾರ… ಆರೋಪಿಗೆ 20 ವರ್ಷ ಜೈಲು ಶಿಕ್ಷೆ

Belagavi: ಬಾಲಕಿ ಮೇಲೆ ಅತ್ಯಾಚಾರ… ಆರೋಪಿಗೆ 20 ವರ್ಷ ಜೈಲು ಶಿಕ್ಷೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

5-video

ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

4-siruguppa

Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್‌; ಎತ್ತು ಸಾವು

Amazon Employee: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.