ಹೊಸ ಪ್ಲಾನ್ ಲಾಂಚ್ ಮಾಡಿದ ಜಿಯೋ: ಡಿಸ್ನಿ + ಹಾಟ್‌ಸ್ಟಾರ್ ಒಂದು ವರ್ಷ ಉಚಿತ
Team Udayavani, Jan 6, 2022, 2:58 PM IST
ಬೆಂಗಳೂರು: ಮೊಬೈಲ್ ನೆಟ್ ವರ್ಕ್ ಕಂಪೆನಿ ಜಿಯೋ ತನ್ನ ಬಳಕೆದಾರರಿಗೆ ಹೊಸದೊಂದು ರೀಚಾರ್ಜ್ ಪ್ಲಾನ್ ಅನ್ನು ಲಾಂಚ್ ಮಾಡಿದ್ದು, ಇದರಲ್ಲಿ ಗ್ರಾಹಕರಿಗೆ ಒಂದು ವರ್ಷದ ಡಿಸ್ನಿ+ಹಾಟ್ ಸ್ಟಾರ್ ಚಂದಾದಾರಿಕೆ ಉಚಿತವಾಗಿ ದೊರಕಲಿದೆ.
ಜಿಯೋ ಲಾಂಚ್ ಮಾಡಿರುವ ಹೊಸ ರೂ. Rs 499 ತಿಂಗಳ ರೀಚಾರ್ಜ್ ಪ್ಲಾನ್ ಗ್ರಾಹಕರಿಗೆ ಉತ್ತಮ ಆಫರ್ ಅನ್ನು ನೀಡಲಿದೆ. ಒಂದು ತಿಂಗಳ ಪ್ಲಾನ್‍ನೊಂದಿಗೆ ಡಿಸ್ನಿ + ಹಾಟ್‌ಸ್ಟಾರ್ ಮೊಬೈಲ್ ವಾರ್ಷಿಕ ಚಂದಾದಾರಿಕೆ ಉಚಿತವಾಗಿ ಸಿಗಲಿದೆ.
ಈ ಪ್ಲಾನ್ ನಲ್ಲಿ ಜಿಯೋ ಗ್ರಾಹಕರಿಗೆ ಪ್ರತಿ ನಿತ್ಯ ಅತೀ ವೇಗದ 2 ಜಿಬಿ ಡೇಟಾ ದೊರೆಯಲಿದ್ದು, ಅನಿಮಿಯತವಾಗಿ ವಾಯ್ಸ್ ಕರೆಗಳನ್ನು ಮಾಡಬಹುದಾಗಿದೆ. ಇದಲ್ಲದೆ ಪ್ರತಿ ನಿತ್ಯ 100 ಉಚಿತ ಮೇಸೆಜ್ ಗಳನ್ನು ಕಳುಹಿಸಬಹುದಾಗಿದೆ. ಡಿಸ್ನಿ + ಹಾಟ್‌ಸ್ಟಾರ್ ಮೊಬೈಲ್ ವಾರ್ಷಿಕ ಚಂದದಾರಿಕೆ (ಜೊತೆಯಲ್ಲಿ ಎಲ್ಲಾ ಜಿಯೋ ಆಪ್ ಗಳನ್ನು ಉಚಿತವಾಗಿ ಬಳಸಬಹುದು. ಇದಲ್ಲದೆ ಹೊಸದಾಗಿ ಜಿಯೋ ಸಿಮ್ ಖರೀದಿಸುವವರು ಈ ಪ್ಲಾನ್ ಅನ್ನು ರೀಚಾರ್ಜ್ ಮಾಡಿಸಿಕೊಂಡಲ್ಲಿ ಜಿಯೋ ಪ್ರೈಮ್ ಗಾಗಿ ನೀಡಬೇಕಾಗಿದ್ದ 99 ರೂಗಳನ್ನು ಪಾವತಿಸುವ ಅಗತ್ಯವಿಲ್ಲ. ಈ ರೀಚಾರ್ಜ್ ನೊಂದಿಗೆ ಹೊಸ ಬಳಕೆದಾರರಿಗೆ ಜಿಯೋ ಪ್ರೈಮ್ ಸದಸ್ಯತ್ವ ಉಚಿತವಾಗಿ ದೊರೆಯಲಿದೆ. ಈ ಪ್ಲಾನ್ 28 ದಿನಗಳ ವ್ಯಾಲಿಡಿಟಿಯನ್ನು ಹೊಂದಿದೆ.
ಇದನ್ನೂ ಓದಿ:ಭಾರೀ ಮೊತ್ತಕ್ಕೆ ಅಮೇಜಾನ್ ಪ್ರೈಮ್ ಗೆ ಮಾರಾಟವಾದ ಅಲ್ಲು ಅರ್ಜುನ್ ನಟನೆಯ ‘ಪುಷ್ಪ’
ಡಿಸ್ನಿ+ ಹಾಟ್ ಸ್ಟಾರ್ ಉತ್ತಮ ಓಟಿಟಿ ಆಗಿದ್ದು ಕನ್ನಡ, ಮಲಯಾಳಂ, ಹಿಂದಿ ಸೇರಿದಂತೆ ಹಲವು ಭಾಷೆಗಳ ಉತ್ತಮ ಚಲನಚಿತ್ರಗಳು ಲಭ್ಯವಿದೆ. ಅದರಲ್ಲೂ ಕನ್ನಡದ ಹಲವು ಹಳೆಯ ಚಲನಚಿತ್ರಗಳು, ಮಲಯಾಳಂ ನ ಅತ್ಯುತ್ತಮ ಚಿತ್ರಗಳ ಸಂಗ್ರಹ ಈ ಓಟಿಟಿ ಯಲ್ಲಿ ಲಭ್ಯವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
WhatsApp Pay: ಭಾರತದಲ್ಲಿ ವಾಟ್ಸ್‌ಆ್ಯಪ್ ಪೇ ಇನ್ನು ಎಲ್ಲರಿಗೂ ಲಭ್ಯ
Airtel Outage:ದೇಶದ ಹಲವೆಡೆ ಏರ್ ಟೆಲ್ Network ಸಮಸ್ಯೆ; ಏರ್ ಟೆಲ್ ಗ್ರಾಹಕರಿಂದ ದೂರು
Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!
YearEnd Offers:ಭಾರತದಲ್ಲಿ Skoda Superb ಖರೀದಿಸುವವರಿಗೆ 18 ಲಕ್ಷ ರೂ.ವರೆಗೆ ಡಿಸ್ಕೌಂಟ್!
ISRO: ಬಾಹ್ಯಾಕಾಶ ಯೋಜನೆಯ ಪ್ರತಿ 1.ರೂ.ಗೂ ಭಾರತಕ್ಕೆ2.52 ರೂ. ಲಾಭ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ
Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.