ಕೋವಿಡ್ ನಿಯಂತ್ರಣಕ್ಕೆ ಮಾರ್ಗಸೂಚಿ ಜಾರಿ,19 ರವರೆಗೆ ವಾರಾಂತ್ಯ ಕರ್ಫ್ಯೂ ಅನುಷ್ಠಾನ,
ತುರ್ತುಸೇವೆ ಹೊರತುಪಡಿಸಿ ಉಳಿದ ಎಲ್ಲದಕ್ಕೂ ನಿರ್ಬಂಧ
Team Udayavani, Jan 6, 2022, 3:14 PM IST
ದಾವಣಗೆರೆ: ಕೊರೊನಾ ಪ್ರಕರಣ ನಿಯಂತ್ರಣದ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ಮಾರ್ಗಸೂಚಿ, ನಿಯಮಗಳು ಜಿಲ್ಲೆಯಲ್ಲಿ ಜ. 19ರಂದು ಬೆಳಗ್ಗೆ 5 ಗಂಟೆಯವರೆಗೆ ಜಾರಿಯಲ್ಲಿರುತ್ತವೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದರು.
ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊರೊನಾ ನಿಯಂತ್ರಣಕ್ಕೆ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಲ್ಲಿಯೂ ವಾರಾಂತ್ಯ ಕರ್ಫ್ಯೂ, ಚಿತ್ರಮಂದಿರ, ಹೋಟೆಲ್, ರೆಸ್ಟೋರೆಂಟ್, ಜಿಮ್ ಮುಂತಾದೆಡೆ ಶೇ. 50 ಜನರಿಗೆ ಅನುಮತಿ ಮತ್ತಿತರ ಕ್ರಮಗಳು ಜಾರಿಯಲ್ಲಿರುತ್ತವೆ ಎಂದರು. ಜ. 19ರವರೆಗೆ ರಾತ್ರಿ 10ರಿಂದ ಬೆಳಗ್ಗೆ 5ರವರೆಗೆ ರಾತ್ರಿ ಕಫೂÂì ಜಾರಿಯಲ್ಲಿರುತ್ತದೆ. ಕರ್ಫ್ಯೂ ಅವಧಿಯಲ್ಲಿ ರೋಗಿಗಳಿಗೆ ಆಸ್ಪತ್ರೆಗೆ ದಾಖಲಿಸುವುದು, ತುರ್ತುಸೇವೆ ಹೊರತುಪಡಿಸಿ ಉಳಿದಂತೆ ಎಲ್ಲ ಬಗೆಯ ಸಾರ್ವಜನಿಕರ ಸಂಚಾರ ನಿಷೇಧಿಸಲಾಗಿದೆ. ವಾರಾಂತ್ಯದ ಕರ್ಫ್ಯೂ ಶುಕ್ರವಾರ ರಾತ್ರಿ 8ರಿಂದ ಸೋಮವಾರ ಬೆಳಗ್ಗೆ 5ರವರೆಗೆ ಇರುತ್ತದೆ. ವಾರಾಂತ್ಯ ಕರ್ಫ್ಯೂ ಸಂದರ್ಭದಲ್ಲಿ ರಾಜ್ಯ, ಕೇಂದ್ರ ಸರ್ಕಾರಿ ಕಚೇರಿಗಳಲ್ಲಿ ಹಾಗೂ ಕೋವಿಡ್-19 ನಿಯಂತ್ರಣ ಮತ್ತು ನಿರ್ವಹಣೆಗೆ, ತುರ್ತುಸೇವೆಗೆ ಸಂಬಂಧಿಸಿದ ಅಧಿಕಾರಿ, ಸಿಬ್ಬಂದಿ ಓಡಾಟಕ್ಕೆ ನಿರ್ಬಂಧ ಇರುವುದಿಲ್ಲ. ಆಹಾರ ಧಾನ್ಯ, ಹಣ್ಣು, ತರಕಾರಿ, ಮಾಂಸ, ಮೀನು, ಹಾಲು ಮತ್ತು ಇತರೆ ಡೈರಿ ಪದಾರ್ಥಗಳು, ಪಶು ಆಹಾರಕ್ಕೆ ಸಂಬಂಧಿಸಿದ ಅಂಗಡಿಗಳನ್ನು ತೆರೆಯಲು ಅವಕಾಶವಿದೆ. ತಳ್ಳುಗಾಡಿಯಲ್ಲಿ ತರಕಾರಿ, ಹಣ್ಣುಗಳ ವ್ಯಾಪಾರಕ್ಕೆ ಅನುಮತಿ ಇದೆ. ಹೋಟೆಲ್, ರೆಸ್ಟೋರೆಂಟ್‌ಗಳಲ್ಲಿ ಪಾರ್ಸಲ್, ಹೋಂ ಡೆಲಿವರಿ ವ್ಯವಸ್ಥೆಗಳಿಗೆ ಅವಕಾಶ ಕಲ್ಪಿಸಲಾಗಿದೆ. ಆದರೆ ಬಟ್ಟೆ, ಪಾತ್ರೆ, ಬೆಳ್ಳಿ-ಬಂಗಾರ, ಇತರೆ ಅಂಗಡಿ, ವಾಣಿಜ್ಯ ಚಟುವಟಿಕೆಗಳಿಗೆ ಅವಕಾಶ ಇರುವುದಿಲ್ಲ. ಸಾರ್ವಜನಿಕ ಉದ್ಯಾನವನಗಳನ್ನು ಬಂದ್ ಮಾಡಲಾಗುತ್ತದೆ. ಎಲ್ಲ ಕಚೇರಿಗಳು ಸೋಮವಾರದಿಂದ ಶುಕ್ರವಾರದವರೆಗೆ ವಾರದ 5 ದಿನ ಮಾತ್ರ ಕಾರ್ಯ ನಿರ್ವಹಿಸಲಿವೆ. ಶನಿವಾರ ಶಾಲಾ-ಕಾಲೇಜು ಇರುವುದಿಲ್ಲ ಎಂದು ಮಾಹಿತಿ ನೀಡಿದರು.
ಸಾರ್ವಜನಿಕ ಸಾರಿಗೆ ವ್ಯವಸ್ಥೆ ಕೋವಿಡ್ ನಿಯಂತ್ರಣ ಮಾರ್ಗಸೂಚಿಯಂತೆ ಜಾರಿಯಲ್ಲಿರುತ್ತದೆ. ಪಬ್, ಕ್ಲಬ್, ರೆಸ್ಟೋರೆಂಟ್, ಬಾರ್, ಹೋಟೆಲ್, ಚಿತ್ರಮಂದಿರ, ಮಲ್ಟಿಪ್ಲೆಕ್ಸ್, ರಂಗಮಂದಿರ, ಆಡಿಟೋರಿಯಂ, ಮಾಲ್, ಈಜುಕೊಳ, ಜಿಮ್, ಕ್ರೀಡಾ ಕಾಂಪ್ಲೆಕ್ಸ್ ಇತ್ಯಾದಿ ಸ್ಥಳಗಳಲ್ಲಿ ಶೇ. 50ರಷ್ಟು ಜನರಿಗೆ ಮಾತ್ರ ಅವಕಾಶ ಇರುತ್ತದೆ. ಎಲ್ಲರೂ ಕಡ್ಡಾಯವಾಗಿ ಎರಡು ಡೋಸ್ ಲಸಿಕೆ ಪಡೆದಿರಲೇಬೇಕು ಎಂದು ತಿಳಿಸಿದರು. ವಾರಾಂತ್ಯ ಕರ್ಫ್ಯೂ ಅವಧಿಯಲ್ಲಿ ಕೈಗಾರಿಕೆ, ಕಂಪನಿಗಳ ವ್ಯಕ್ತಿಗಳ ಅಗತ್ಯ ಚಟುವಟಿಕೆಗಳಿಗಾಗಿ ಸಂಚಾರಕ್ಕೆ ನಿರ್ಬಂಧ ಇರುವುದಿಲ್ಲ. ಅಂತಹವರು ಅಧಿಕೃತ ಗುರುತಿನಚೀಟಿ ಹೊಂದಿರಬೇಕು. ವೈದ್ಯಕೀಯ, ಔಷಧ, ಸರಕು ಸಾಗಾಣಿಕಾ ವಾಹನ, ಟ್ರಕ್, ಗೃಹ ಪೂರೈಕೆ ವಾಹನ, ಇ-ಕಾಮರ್ಸ್ ಚಟುವಟಿಕೆ, ಬಸ್, ರೈಲು, ಸಾರ್ವಜನಿಕ ಸಾಗಾಣಿಕೆ ವಾಹನ, ಟ್ಯಾಕ್ಸಿ ಇತ್ಯಾದಿ ವಾಹನಗಳ ಓಡಾಟಕ್ಕೆ ನಿರ್ಬಂಧ ಇರುವುದಿಲ್ಲ. ಸಾರ್ವಜನಿಕರು ಸಂಬಂಧಿಸಿದ ದಾಖಲೆ, ಟಿಕೆಟ್ ಹೊಂದಿರಬೇಕು ಎಂದರು. ಜಿಲ್ಲಾ ರಕ್ಷಣಾಧಿಕಾರಿ ಸಿ.ಬಿ. ರಿಷ್ಯಂತ್ ಮಾತನಾಡಿ, ಸರ್ಕಾರದ ಮಾರ್ಗಸೂಚಿಯಂತೆ ಜ. 19ರವರೆಗೆ ವಾರದ ದಿನಗಳಲ್ಲೂ ಜಿಲ್ಲೆಯಲ್ಲಿ ಯಾವುದೇ ಧರಣಿ, ಪ್ರತಿಭಟನೆ, ರ್ಯಾಲಿ, ಉತ್ಸವ, ಜಾತ್ರೆಗಳಿಗೆ ಅವಕಾಶ ಇರುವುದಿಲ್ಲ. ಹೊರಾಂಗಣದ ಮದುವೆಗಳಲ್ಲಿ ಗರಿಷ್ಠ 200, ಒಳಾಂಗಣದಲ್ಲಿ ಗರಿಷ್ಠ 100 ಜನ ಮಾತ್ರ ಭಾಗವಹಿಸಲು ಅವಕಾಶವಿದೆ. ದೇವಾಲಯಗಳಲ್ಲಿ ಕೇವಲ 50 ಜನರಿಗೆ ದರ್ಶನಕ್ಕೆ ಮಾತ್ರ ಅವಕಾಶವಿದೆ ಎಂದು ತಿಳಿಸಿದರು.
ಮೂರನೇ ಅಲೆ ತಡೆಗೆ ಸಿದ್ಧತೆ
ಕೊರೊನಾದ ಸಂಭಾವ್ಯ ಮೂರನೇ ಅಲೆ ನಿಭಾಯಿಸಲು ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ. 3 ಸಾವಿರ ಹಾಸಿಗೆಗಳನ್ನು ಸಿದ್ಧಪಡಿಸಿಕೊಳ್ಳಲಾಗಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಶೇ. 50, ವೈದ್ಯಕೀಯ ಕಾಲೇಜು, ಆಸ್ಪತ್ರೆಯಲ್ಲಿ ಶೇ. 75 ರಷ್ಟು ಹಾಸಿಗೆ ಮೀಸಲಿಡಲು ಪತ್ರ ಬರೆಯಲಾಗಿದೆ.ವೈ ದ್ಯಕೀಯ ಆಕ್ಸಿಜನ್ ಪೂರೈಕೆ, ಪ್ರಯೋಗಾಲಯ, ಐಸಿಯು ಬೆಡ್, ವೆಂಟಿಲೇಟರ್ ಮುಂತಾದ ಉಪಕರಣಗಳನ್ನು ಸಿದ್ಧಮಾಡಿಕೊಳ್ಳಲಾಗಿದೆ. ಜಿಲ್ಲೆಯಲ್ಲಿನ ಎಲ್ಲ ಆಕ್ಸಿಜನ್ ಪ್ಲಾಂಟ್ ನಿರ್ವಹಣೆಗಾಗಿ 11 ಜನ ತಂತ್ರಜ್ಞರ ನೇಮಕಾತಿ ಪ್ರಕ್ರಿಯೆ ಅಂತಿಮಗೊಂಡಿದೆ. ಎಲ್ಲ ಅಂಶಗಳ ಖಾತರಿ ಪಡಿಸಿಕೊಳ್ಳಲು ಜಿಲ್ಲಾ ಆರೋಗ್ಯಾಧಿಕಾರಿ ನೇತೃತ್ವದಲ್ಲಿ 5 ಅಧಿಕಾರಿಗಳ ತಂಡ ರಚಿಸಲಾಗಿದ್ದು, ಶನಿವಾರದ ಒಳಗೆ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ. ಹೊರ ಜಿಲ್ಲೆಗಳಿಂದ ಕೊರೊನಾ ಸೋಂಕಿತರು ಬಾರದಂತೆ ತಡೆಯುವ ನಿಟ್ಟಿನಲ್ಲಿ ಜಿಲ್ಲಾಡಳಿತ ಪ್ರಾಮಾಣಿಕ ಪ್ರಯತ್ನ ಮಾಡಲಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಪ್ರಶ್ನೆಯೊಂದಕ್ಕೆ ಉತ್ತರಿಸಿದರು
ಅಸಡ್ಡೆ-ನಿರ್ಲಕ್ಷ್ಯ ಬೇಡ
ದಾವಣಗೆರೆ ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಕಡಿಮೆ ಇರಬಹುದು, ಆದರೆ ಇದ್ದಕ್ಕಿದ್ದಂತೆ ಪ್ರಕರಣಗಳ ಸಂಖ್ಯೆ ದ್ವಿಗುಣ, ತ್ರಿಗುಣ ಆಗಬಹುದು. ಕೊರೊನಾ ಸಂಖ್ಯೆ ಕಡಿಮೆ ಇದೆ ಎಂದು ಸಾರ್ವಜನಿಕರು ಯಾವುದೇ ಕಾರಣಕ್ಕೂ ಅಸಡ್ಡೆ, ನಿರ್ಲಕ್ಷé ಮಾಡಬಾರದು. ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾರ್ಗಸೂಚಿ ಹಾಗೂ ನಿಯಮ ಪಾಲಿಸುವ ಮೂಲಕ ಕೊರೊನಾ ನಿಯಂತ್ರಣಕ್ಕೆ ಸಹಕಾರ ನೀಡಬೇಕು ಎಂದು ಜಿಲ್ಲಾಧಿಕಾರಿ ಮನವಿ ಮಾಡಿದರು.
ನಿಯಮ ಉಲ್ಲಂಘಿಸಿದ್ರೆ ದಂಡ, ಕೇಸ್ ಗ್ಯಾರಂಟಿ
ಸಾರ್ವಜನಿಕರು ತಪ್ಪದೇ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಕುರಿತು ಜಾಗೃತಿ ಮೂಡಿಸಲಾಗುವುದು. ಮಾಸ್ಕ್ ಧರಿಸದೇ ಇರುವುದು, ನಿಯಮಗಳ ಉಲ್ಲಂಘನೆ ಕಂಡುಬಂದರೆ ನಿಯಮಾನುಸಾರ ದಂಡ ವಿಧಿಸಲಾಗುವುದು. ಪ್ರಕರಣ ದಾಖಲಿಸಲಾಗುವುದು. ಸಾರ್ವಜನಿಕರು ಕಡ್ಡಾಯವಾಗಿ ಮಾರ್ಗಸೂಚಿಯನ್ನು ಪಾಲಿಸಬೇಕು. ಇಲ್ಲದಿದ್ದಲ್ಲಿ ತಕ್ಕ ಕಠಿಣ ಕ್ರಮ ಎದುರಿಸಬೇಕಾಗುತ್ತದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಸಿ.ಬಿ. ರಿಷ್ಯಂತ್ ಎಚ್ಚರಿಸಿದರು.
ಒಮಿಕ್ರಾನ್ ಇಲ್ಲ
ದಾವಣಗೆರೆ ಜಿಲ್ಲೆಯಲ್ಲಿ ಈವರೆಗೂ ಒಮಿಕ್ರಾನ್ ಪ್ರಕರಣ ವರದಿಯಾಗಿಲ್ಲ. ಹರಿಹರ ಮೂಲದವರೊಬ್ಬರಿಗೆ ಬೆಂಗಳೂರಲ್ಲಿ ಒಮಿಕ್ರಾನ್ ಪತ್ತೆಯಾಗಿತ್ತು. ಅವರು ಅಲ್ಲಿಯೇ ಚಿಕಿತ್ಸೆ ಪಡೆದು ಗುಣಮುಖರಾಗಿ ಡಿಸಾcರ್ಜ್ ಆಗಿದ್ದಾರೆ. ಒಮಿಕ್ರಾನ್ ಪತ್ತೆಗೆ ಹಾಸನಕ್ಕೆ ಗಂಟಲು ದ್ರವ ಮಾದರಿ ಕಳುಹಿಸುವ ವ್ಯವಸ್ಥೆ ಇದೆ. ದಾವಣಗೆರೆಯಲ್ಲಿಯೇ ಜಿನೋಮಿಕ್ ಸೀಕ್ವೆನ್ಸ್ ಪರೀಕ್ಷೆಗೆ ಅನುಕೂಲ ಆಗುವಂತೆ ವಿಶೇಷ ಕೇಂದ್ರೀಯ ಪ್ರಯೋಗಾಲಯಕ್ಕೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದರು.
10ರಿಂದ ಬೂಸ್ಟರ್ ಡೋಸ್
ಸರ್ಕಾರದ ಸೂಚನೆಯಂತೆ ಆರೋಗ್ಯ, ಪೊಲೀಸ್ ಇಲಾಖೆ ಒಳಗೊಂಡಂತೆ ಕೊರೊನಾ ನಿಯಂತ್ರಣದ ಮುಂಚೂಣಿ ಕಾರ್ಯಕರ್ತರಿಗೆ ಜ. 10ರಿಂದ ಬೂಸ್ಟರ್ ಡೋಸ್ ನೀಡಲಾಗುವುದು. ಜಿಲ್ಲೆಯಲ್ಲಿ ನಿತ್ಯ 2 ರಿಂದ 3 ಸಾವಿರ ಕೋವಿಡ್ ಟೆಸ್ಟ್ ಮಾಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಕೊರೊನಾ ಪರೀಕ್ಷಾ ಪ್ರಮಾಣ ಹೆಚ್ಚಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ
ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Govt Hospital: ಡಿ ಗ್ರೂಪ್ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್ ಗುಂಡೂರಾವ್
ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
Veerendra Heggade: ಡಾ.ಡಿ.ವೀರೇಂದ್ರ ಹೆಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
Kannappa Movie: ವಿಷ್ಣು ಮಂಚು ʼಕಣ್ಣಪ್ಪʼ ರಿಲೀಸ್‌ಗೆ ಡೇಟ್ ಫಿಕ್ಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.