ವಿದ್ಯಾರ್ಥಿಗಳಿಂದ ರಸ್ತೆ ಸಂಚಾರ ಜನ ಜಾಗೃತಿ
18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಯುವಕರಿಗೆ ವಾಹನ ಚಲಾಯಿಸಲು ಪಾಲಕರು ಕೊಡಬಾರದು
Team Udayavani, Jan 6, 2022, 11:40 AM IST
ರಬಕವಿ-ಬನಹಟ್ಟಿ: ವಾಹನ ಚಲಾಯಿಸುವಾಗ ಕಡ್ಡಾಯವಾಗಿ ರಸ್ತೆ ನಿಯಮ ಪಾಲಿಸಬೇಕು. ವಾಹನ ಚಾಲಕರು ಕಡ್ಡಾಯವಾಗಿ ಪರವಾನಗಿ ಪಡೆದುಕೊಳ್ಳಬೇಕು. ಜೊತೆಗೆ ವಾಹನಕ್ಕೆ ಸಂಬಂಧಪಟ್ಟ ಕಾಗದ ಪತ್ರಗಳನ್ನು ಹೊಂದಿರಬೇಕು ಎಂದು ರಬಕವಿ ಹೊಸೂರಿನ ಪದ್ಮಾವತಿ ಅಂತಾರಾಷ್ಟ್ರೀಯ ಶಾಲೆ ಮಕ್ಕಳು ಸಾರ್ವಜನಿಕರಿಗೆ ತಿಳಿ ಹೇಳಿದರು.
ಮಕ್ಕಳು ಬುಧವಾರ ಸ್ಥಳೀಯ ಬಸ್ ನಿಲ್ದಾಣ, ಪೊಲೀಸ್ ಠಾಣೆ ಹಾಗೂ ನೂಲಿನ ಗಿರಣಿಯ ಮುಂಭಾಗದಲ್ಲಿ ಬನಹಟ್ಟಿ ಪೊಲೀಸರ ಸಹಕಾರದೊಂದಿಗೆ ರಸ್ತೆ ಸಂಚಾರ ನಿಯಮ ಜನರಿಗೆ ತಿಳಿ ಹೇಳಿದರು. ಮದ್ಯಪಾನ ಮಾಡಿ ವಾಹನ ಚಲಾಯಿಸಬೇಡಿ. ಮೊಬೈಲ್‌ನಲ್ಲಿ ಮಾತನಾಡುತ್ತ ವಾಹನ ಚಲಾಯಿಸಬೇಡಿ. ದ್ವಿಚಕ್ರ ವಾಹನದ ಮೇಲೆ ಕೇವಲ ಇಬ್ಬರು ಮಾತ್ರ ವಾಹನ ಸವಾರರು ಸಂಚರಿಸಬೇಕು. 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಯುವಕರಿಗೆ ವಾಹನ ಚಲಾಯಿಸಲು ಪಾಲಕರು ಕೊಡಬಾರದು ಎಂದು ವಿದ್ಯಾರ್ಥಿಗಳು ವಾಹನ ಸವಾರರಿಗೆ ತಿಳಿ ಹೇಳಿದರು.
ಈ ಸಂದರ್ಭದಲ್ಲಿ ಸ್ಥಳೀಯ ಪಿಎಸ್‌ಐ ಸುರೇಶ ಮಂಟೂರ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಆರಂಭದಿಂದಲೇ ರಸ್ತೆ ಸಂಚಾರ ಕುರಿತು ಜಾಗೃತಿ ಮೂಡಿಸುವುದರಿಂದ ಅವರು ಮುಂದಿನ ದಿನಗಳಲ್ಲಿ ರಸ್ತೆ ನಿಯಮ ಪಾಲಿಸುತ್ತಾರೆ. ವಿದ್ಯಾರ್ಥಿಗಳು ವಾಹನ ಸವಾರರಿಗೆ ಪ್ರತಿಯೊಂದು ರಸ್ತೆ ನಿಯಮಗಳನ್ನು ತಿಳಿ ಹೇಳಿದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಭಿತ್ತಿ ಪತ್ರಗಳನ್ನು ಪ್ರದರ್ಶನ ಮಾಡಿದರು.
ಸಾರ್ವಜನಿಕರು ವಿದ್ಯಾರ್ಥಿಗಳು ಹೇಳಿದ ರಸ್ತೆ ನಿಯಮಗಳನ್ನು ಪಾಲಿಸುವುದರಿಂದ ಎಲ್ಲರಿಗೂ ಅನುಕೂಲವಾಗಲಿದೆ ಎಂದು ಪಿಎಸ್‌ಐ ಮಂಟೂರ ತಿಳಿಸಿದರು. ಪ್ರಾಚಾರ್ಯ ಬಸವರಾಜ ಕಲಾದಗಿ, ಎಎಸ್‌ಐ ಎಸ್.ಎಸ್. ಬಾಬಾನಗರ, ಧರೆಪ್ಪ ಕುಂಬಾರ ಸ್ಥಳೀಯ ಪೊಲೀಸ್ ಇಲಾಖೆ ಸಿಬ್ಬಂದಿ, ಶಾಲೆ ಶಿಕ್ಷಕರು, ವಿದ್ಯಾರ್ಥಿಗಳ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
Mudhol: ಟ್ರ್ಯಾಕ್ಟರ್ ಹಾಗೂ ಬೊಲೆರೋ ಮುಖಾಮುಖಿ ಡಿಕ್ಕಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.