ಖಾಸಗಿ ಮಾರ್ಕೆಟ್‌ ವಿರುದ್ದ ಭುಗಿಲೆದ್ದ ಆಕ್ರೋಶ

ಎಪಿಎಂಸಿ ಅಧಿಕಾರಿಗಳು ಖಾಸಗಿ ತರಕಾರಿ ಮಾರುಕಟ್ಟೆಗೆ ಅನುಮತಿ ನೀಡಿದ್ದಾರೆ.

Team Udayavani, Jan 6, 2022, 5:46 PM IST

ಖಾಸಗಿ ಮಾರ್ಕೆಟ್‌ ವಿರುದ್ದ ಭುಗಿಲೆದ್ದ ಆಕ್ರೋಶ

ಬೆಳಗಾವಿ: ನಗರದಲ್ಲಿ ಈಗಾಗಲೇ ಸರಕಾರದ ಕೃಷಿ ಉತ್ಪನ್ನ ಮಾರುಕಟ್ಟೆ ಇರುವಾಗ ಖಾಸಗಿ ತರಕಾರಿ ಮಾರ್ಕೆಟ್‌ ಗೆ ಅನುಮತಿ ನೀಡಿದ ಎಪಿಎಂಸಿ ಅಧಿಕಾರಿಗಳ ನಡೆ ಪ್ರಶ್ನಿಸಿ ಎಪಿಎಂಸಿ ವ್ಯಾಪಾರಸ್ಥರು ಪ್ರತಿಭಟನೆ ನಡೆಸಿ ಅಧಿಕಾರಿಗಳಿಗೆ ಮುತ್ತಿಗೆ ಹಾಕಿದ ಪ್ರಸಂಗ ಬುಧವಾರ ನಡೆಯಿತು.

ನಗರದಲ್ಲಿ ಇತ್ತೀಚೆಗೆ ಖಾಸಗಿ ವ್ಯಾಪಾರಸ್ಥರು ಸಂಘ ರಚಿಸಿಕೊಂಡು ಜೈ ಕಿಸಾನ್‌ ಭಾಜಿ ಮಾರ್ಕೆಟ್‌ ಎಂಬ ಖಾಸಗಿ ತರಕಾರಿ ಮಾರುಕಟ್ಟೆಯನ್ನು ನಿರ್ಮಾಣ ಮಾಡಿ ಅಲ್ಲಿಯೇ ತರಕಾರಿ ವ್ಯಾಪಾರ-ವಹಿವಾಟು ನಡೆಸಲು ಮುಂದಾಗಿದ್ದಾರೆ. ಈ ಹೊಸ ತರಕಾರಿ ಮಾರುಕಟ್ಟೆ ಯಿಂದ ಸರಕಾರಿ ಸ್ವಾಮ್ಯದ ಎಪಿಎಂಸಿ ವ್ಯಾಪಾರಸ್ಥರಿಗೆ ತೊಂದರೆಯಾಗುತ್ತಿದೆ ಎಂದು ರೈತರು ದೂರಿದರು.

ಸರಕಾರಿ ಎಪಿಎಂಸಿ ಮಾರುಕಟ್ಟೆ ಇದ್ದಾಗಲೂ ಖಾಸಗಿ ಎಪಿಎಂಸಿಗೆ ಅನುಮತಿ ನೀಡಿರುವುದು ಎಷ್ಟು ಸರಿ ಎಂದು ಪ್ರಶ್ನಿಸಿದ ಎಪಿಎಂಸಿ ವ್ಯಾಪಾರಸ್ಥರು ಪಿಎಂಸಿ ಕಾರ್ಯದರ್ಶಿ ಡಾ| ಕೋಡಿಗೌಡ, ಕೃಷಿ ಮಾರಾಟ ಇಲಾಖೆ ಉಪ ನಿರ್ದೇಶಕ ಮಹಾಂತೇಶ ಪಾಟೀಲ ಹಾಗೂ ಅಧ್ಯಕ್ಷ ಯುವರಾಜ ಕದಂ ಅವರನ್ನು ತರಾಟೆಗೆ ತೆಗೆದುಕೊಂಡರು. ಈ ವೇಳೆ ವ್ಯಾಪಾರಸ್ಥರು-ಅಧಿಕಾರಿಗಳ ನಡುವೆ ಮಾತಿನ ಚಕಮಕಿ ಸಹ ನಡೆಯಿತು.

ಭಾರತೀಯ ಕೃಷಿಕ ಸಮಾಜದ ಅಧ್ಯಕ್ಷ ಸಿದಗೌಡ ಮೋದಗಿ ಮಾತನಾಡಿ, ಸರಕಾರಿ ಆದೇಶದಂತೆ ಈಗಾಗಲೇ ಎಪಿಎಂಸಿ ವಾರ್ಷಿಕ ಲೀಸ್‌ ಮೇಲೆ 132 ಅಂಗಡಿಗಳನ್ನು ನೀಡಿದೆ. ಇದಕ್ಕೆ 20 ಲಕ್ಷದಿಂದ 1 ಕೋಟಿ 5 ಲಕ್ಷದವರೆಗೆ ಲೀಸ್‌ ಮೇಲೆ ವ್ಯಾಪಾರ ಮಾಡಲು ಅವಕಾಶ ಕಲ್ಪಿಸಲಾಗಿದ್ದು ಅದರಂತೆ ವ್ಯಾಪಾರ ಮಾಡುತ್ತಿದ್ದೇವೆ. ಆದರೆ ಈಗ ಎಪಿಎಂಸಿ ಅಧಿಕಾರಿಗಳು ಖಾಸಗಿ ತರಕಾರಿ ಮಾರುಕಟ್ಟೆಗೆ ಅನುಮತಿ ನೀಡಿದ್ದಾರೆ.ಇದರಿಂದ ಸರಕಾರಿ ಎಪಿಎಂಸಿಗಳಲ್ಲಿ ವ್ಯಾಪಾರ ನಡೆಸುವ ವ್ಯಾಪಾರಸ್ಥರಿಗೆ ಹಾಗೂ ರೈತರಿಗೆ ಅನಾನುಕೂಲವಾಗಿದೆ.

ಕೂಡಲೇ ಖಾಸಗಿ ಎಪಿಎಂಸಿ ಅನುಮತಿ ರದ್ದುಗೊಳಿಸಬೇಕು ಎಂದು ಒತ್ತಾಯಿಸಿದರು. ಈ ಗೊಂದಲಕ್ಕೆ ಬೆಳಗಾವಿಯ ಕೃಷಿ ಮಾರಾಟ ಇಲಾಖೆ ಉಪ ನಿರ್ದೇಶಕರು, ಎಪಿಎಂಸಿ ಅಧಿಕಾರಿಗಳೇ ಕಾರಣ. ಮೂಲಸೌಲಭ್ಯಗಳ ಕೊರತೆ ತೋರಿಸಿ ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಂಡು ಸರಕಾರಕ್ಕೆ ತಪ್ಪು ಮಾಹಿತಿ ನೀಡಿ ಖಾಸಗಿ ಎಪಿಎಂಸಿ ನಿರ್ಮಾಣಕ್ಕೆ ಕಾರಣರಾಗಿದ್ದಾರೆ. ಎಪಿಎಂಸಿ ಆಡಳಿತ ಮಂಡಳಿ ಗಮನಕ್ಕೆ ತರದೆ ಈ ನಿರ್ಧಾರ ಕೈಗೊಂಡು ಸರಕಾರಕ್ಕೆ ಹಾನಿ ಮಾಡಿದ್ದಾರೆ. ಹೀಗಾಗಿ ರೈತರ ಹಿತದೃಷ್ಟಿಯಿಂದ ನಾವು ಕಾನೂನು ಹೋರಾಟಕ್ಕೆ ಸಿದ್ಧರಿದ್ದೇವೆ ಎಂದು ಹೇಳಿದರು.

ಇದಲ್ಲದೆ ರೈತರಿಗೆ ಅನ್ಯಾಯ ಮಾಡಿರುವ ಕೃಷಿ ಮಾರುಕಟ್ಟೆ ನಿರ್ದೇಶಕ ಕರಿಗೌಡ, ಉಪನಿರ್ದೇಶಕ ಮಹಾಂತೇಶ ಪಾಟೀಲ ಹಾಗೂ ಎಪಿಎಂಸಿ ಕಾರ್ಯದರ್ಶಿ ಡಾ| ಕೋಡಿಗೌಡ ಅವರ ವಿರುದ್ಧ ಎಸಿಬಿಗೆ ದೂರು ನೀಡಲಾಗಿದೆ ಎಂದು ಸಿದಗೌಡ ಮೋದಗಿ ಹೇಳಿದರು.

ಕೃಷಿ ಉತ್ಪನ್ನ ಮಾರುಕಟ್ಟೆ ಅಧಿಕಾರಿಗಳು ಖಾಸಗಿ ಎಪಿಎಂಸಿಗೆ ಅನುಮತಿ ನೀಡಬಾರದು ಎಂದು ಠರಾವು ಮಾಡಿ ಸಂಬಂಧಪಟ್ಟ ಅಧಿಕಾರಿಗಳಿಗೆ ಸಲ್ಲಿಸಲಾಗಿತ್ತು. ಆದರೆ ಈಗ ಅಧಿಕಾರಿಗಳು ಸರಕಾರಕ್ಕೆ ತಪ್ಪು ಮಾಹಿತಿ ನೀಡಿ ಇಲ್ಲಿನ ವ್ಯಾಪಾರಸ್ಥರನ್ನು ತೊಂದರೆಗೆ ಸಿಲುಕಿಸಿದ್ದಾರೆ.
ಸಿದಗೌಡ ಮೋದಗಿ,
ಭಾರತೀಯ ಕೃಷಿಕ ಸಮಾಜದ ಅಧ್ಯಕ್ಷ

ಟಾಪ್ ನ್ಯೂಸ್

renukaacharya

BJP; ಹರಕುಬಾಯಿ ನಾಯಕರಿಂದಲೇ ಸೋಲು: ರೇಣುಕಾಚಾರ್ಯ ಆಕ್ರೋಶ

Arrest

Madikeri: ವೀರ ಸೇನಾನಿಗಳಿಗೆ ಅಗೌರವ: ಆರೋಪಿ ಸೆರೆ

1-modi

BJP; ಅಭಿವೃದ್ಧಿ, ಉತ್ತಮ ಆಡಳಿತ ಗೆದ್ದೇ ಗೆಲ್ಲುತ್ತದೆ: ಜಯಕ್ಕೆ ಪ್ರಧಾನಿ ಬಣ್ಣನೆ

Exam 2

SSLC ಪರೀಕ್ಷೆ ನೋಂದಣಿ: ನ.30ರವರೆಗೆ ಅವಧಿ ವಿಸ್ತರಣೆ

R Ashok (2)

R. Ashok; ಪಾಪ, ನಿಖಿಲ್‌ ಅದೃಷ್ಟವೇ ಸರಿಯಿಲ್ಲ…

1-dkkk

HDK ಕ್ಷೇತ್ರ ಬಿಟ್ಟು ಹೋಗಿದ್ದಕ್ಕೆ ಜನ ಕೊಟ್ಟ ತೀರ್ಪು: ಡಿಕೆಶಿ ಟಾಂಗ್‌

NITK-Padavi-pradana

Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್‌ ರಂಗರಾಜನ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yathnal

Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್‌

satish

ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್‌ ಜಾರಕಿಹೊಳಿ

ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ

ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ

lakxmi

Belagavi: ಗ್ಯಾರಂಟಿ ವಿರೋಧಿಸಿದ ವಿಪಕ್ಷಗಳಿಗೆ ಸ್ಪಷ್ಟ ಉತ್ತರ ನೀಡಿದ ಮತದಾರ: ಹೆಬ್ಬಾಳ್ಕರ್

ಬೆಳಗಾವಿ: ಪ್ರಾಚೀನ ಕಾಲದ ಬಾವಿಗಳಿಂದ ಪ್ರಸಿದ್ಧಿ ಹೊಂದಿದ ಅರಭಾಂವಿ

ಬೆಳಗಾವಿ: ಪ್ರಾಚೀನ ಕಾಲದ ಬಾವಿಗಳಿಂದ ಪ್ರಸಿದ್ಧಿ ಹೊಂದಿದ ಅರಭಾಂವಿ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

World Super Kabaddi League: ವಿಶ್ವ ಕಬಡ್ಡಿ ಲೀಗ್‌ಗೆ ಅನುಮತಿ

World Super Kabaddi League: ವಿಶ್ವ ಕಬಡ್ಡಿ ಲೀಗ್‌ಗೆ ಅನುಮತಿ

renukaacharya

BJP; ಹರಕುಬಾಯಿ ನಾಯಕರಿಂದಲೇ ಸೋಲು: ರೇಣುಕಾಚಾರ್ಯ ಆಕ್ರೋಶ

Arrest

Madikeri: ವೀರ ಸೇನಾನಿಗಳಿಗೆ ಅಗೌರವ: ಆರೋಪಿ ಸೆರೆ

1-modi

BJP; ಅಭಿವೃದ್ಧಿ, ಉತ್ತಮ ಆಡಳಿತ ಗೆದ್ದೇ ಗೆಲ್ಲುತ್ತದೆ: ಜಯಕ್ಕೆ ಪ್ರಧಾನಿ ಬಣ್ಣನೆ

Exam 2

SSLC ಪರೀಕ್ಷೆ ನೋಂದಣಿ: ನ.30ರವರೆಗೆ ಅವಧಿ ವಿಸ್ತರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.