ಸದ್ದಿಲ್ಲದೆ ಚಿತ್ರೀಕರಣ ಮುಗಿಸಿದ ‘ವೆಡ್ಡಿಂಗ್ ಗಿಫ್ಟ್’
Team Udayavani, Jan 7, 2022, 10:29 AM IST
“ವೆಡ್ಡಿಂಗ್ ಗಿಫ್ಟ್’ ಹೀಗೊಂದು ಸಿನಿಮಾ ಆರಂಭವಾಗಿರೋದು ನಿಮಗೆ ಗೊತ್ತಿರಬಹುದು. ಈಗ ಈ ಚಿತ್ರ ಸದ್ದಿಲ್ಲದೇ ಚಿತ್ರೀಕರಣ ಮುಗಿಸಿದೆ. ಈ ಖುಷಿಯನ್ನು ಹಂಚಿಕೊಳ್ಳಲು ಇತ್ತೀಚೆಗೆ ಚಿತ್ರತಂಡ ಮಾಧ್ಯಮ ಮುಂದೆ ಬಂದಿತ್ತು. ಈ ಚಿತ್ರವನ್ನು ವಿಕ್ರಂ ಪ್ರಭು ನಿರ್ಮಿಸಿ, ನಿರ್ದೇಶಿಸುತ್ತಿದ್ದಾರೆ.
ತಮ್ಮ ಸಿನಿಮಾದ ಬಗ್ಗೆ ಮಾತನಾಡುವ ವಿಕ್ರಂ, “ನಾನು ಮೂಲತಃ ಮಂಗಳೂರಿನವನು. ಈಗ ಪುಣೆ ವಾಸಿ. ಹದಿನೆಂಟು ವರ್ಷಗಳ ಹಿಂದೆ ರಾಜೇಂದ್ರ ಸಿಂಗ್ ಬಾಬು ಅವರ “ಲವ್’ ಚಿತ್ರಕ್ಕೆ ಕೆಲಸ ಮಾಡಿದ್ದೆ. ಆನಂತರ ಚಿತ್ರರಂಗದಿಂದ ದೂರವಾಗಿದೆ. ಈಗ ಮತ್ತೆ ಬಂದಿದ್ದೀನಿ. ಈ ಚಿತ್ರವನ್ನು ನಿರ್ಮಿಸಿ, ನಿರ್ದೇಶಿಸಿದ್ದೇನೆ. ನಮ್ಮ ಪ್ರಕಾರ ಡಿಸೆಂಬರ್ 31ರಂದು ಚಿತ್ರೀಕರಣ ಪೂರ್ಣವಾಗಬೇಕಿತ್ತು. ಒಂದು ದಿನ ಮೊದಲೇ 30 ರಂದೇ ಚಿತ್ರೀಕರಣ ಮುಗಿದಿದೆ.
ಬೆಂಗಳೂರು, ತುಮಕೂರು, ಉಡುಪಿ, ಮಂಗಳೂರು ಮುಂತಾದಕಡೆ ಮೂವತ್ತೇಳು ದಿನಗಳ ಚಿತ್ರೀಕರಣ ನಡೆದಿದೆ. ಗಂಡ-ಹೆಂಡತಿ ನಡುವೆ ನಡೆಯುವ ಕಥಾಹಂದರ. ಸೆಕ್ಷನ್ 498 ಸಂಬಂಧಿಸಿದ ಕೆಲವು ಸನ್ನಿವೇಶಗಳು ನಮ್ಮ ಚಿತ್ರದಲ್ಲಿದೆ. ಗಂಡ-ಹೆಂಡತಿ ಕೊನೆಗೆ ಒಂದಾಗುತ್ತಾರಾ? ಇಲ್ಲವಾ? ಎಂಬುದನ್ನು ಚಿತ್ರದಲ್ಲಿ ನೋಡಬೇಕು’ ಎನ್ನುವುದು ವಿಕ್ರಂ ಪ್ರಭು ಮಾತು.
ಇದನ್ನೂ ಓದಿ:ಹಾಡಲ್ಲಿ ‘ಗಂಡುಲಿ’ ಗುಣಗಾನ
ಚಿತ್ರದಲ್ಲಿ ನಟಿ ಪ್ರೇಮ ಲಾಯರ್ ಆಗಿ ನಟಿಸಿದ್ದಾರೆ. ತಮ್ಮ ಪಾತ್ರದ ಬಗ್ಗೆ ಮಾತನಾಡುವ ಅವರು, “ಕಥೆ ಕೇಳಿ ವಿಭಿನ್ನ ಅನಿಸಿತು. ಮೊದಲ ಸಲ ಲಾಯರ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ. ನಾನು ಎಲ್ಲಾ ಚಿತ್ರಗಳನ್ನು ಒಪ್ಪಿಕೊಳ್ಳುವುದಿಲ್ಲ. ಪಾತ್ರ ಚೆನ್ನಾಗಿದ್ದರಷ್ಟೆ ಒಪ್ಪಿಕೊಳ್ಳುವುದು. ಒಂದು ಉತ್ತಮ ಸಂದೇಶವಿರುವ ಚಿತ್ರದಲ್ಲಿ ನಟಿಸಿರುವ ಖುಷಿಯಿದೆ’ ಎಂದರು.
ನಾಯಕಿ ಸೋನು ಗೌಡ ಕೂಡಾ “ವೆಡ್ಡಿಂಗ್ ಗಿಫ್ಟ್’ ಮೇಲೆ ನಿರೀಕ್ಷೆ ಇಟ್ಟಿದ್ದಾರೆ. “ನಾನು ಚಿತ್ರೀಕರಣ ಮುಗಿಸಿ ಬಂದ ಮೇಲೆ ರಾತ್ರಿ ಕೊರಗುತ್ತಿದ್ದೆ. ನಾನು ಮಾಡಿದ್ದು, ಸರಿನಾ? ತಪ್ಪಾ? ಅಂತ ಯೋಚಿಸುತ್ತಿದ್ದೆ. ನನ್ನ ತಂಗಿ ಇದ್ದನ್ನು ಸರಿ ಮಾಡಿದ್ದಳು. ನೀನು ಚಿತ್ರದ ಪಾತ್ರಗಳನ್ನು ಚಿತ್ರೀಕರಣ ಮುಗಿಯುತ್ತಿದ್ದ ಹಾಗೆ ಅಲ್ಲೇ ಬಿಟ್ಟುಬಿಡಬೇಕು. ಮನೆಗೆ ಬಂದ ಮೇಲೆ ನೀನು ಸೋನು ಗೌಡ ಆಗಿಯೇ ಇರಬೇಕು ಎಂದಳು.
ಈಗ ಹಾಗೆ ಮಾಡುತ್ತಿದ್ದೇನೆ. ನಾನು ಈವರೆಗೂ ಇಂತಹ ಪಾತ್ರ ಮಾಡಿಲ್ಲ. ಆಕಾಂಕ್ಷ ಎಂಬ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ. ನೊಂದ ಮನಸ್ಸುಗಳಿಗೆ ಹತ್ತಿರವಾಗುವ ಪಾತ್ರ ನನ್ನದು’ ಎನ್ನುವುದು ಸೋನು ಗೌಡ ಮಾತು
ನಾಯಕ ನಿಶಾನ್ ನಾಣಯ್ಯ ತಮ್ಮ ಪಾತ್ರದ ಬಗ್ಗೆ ವಿವರಣೆ ನೀಡಿದರು. ಸಂಗೀತ ನಿರ್ದೇಶಕ ಬಾಲಚಂದ್ರ ಪ್ರಭು, ಛಾಯಾಗ್ರಹಕ ಉದಯಲೀಲ ಹಾಗೂ ಸಂಕಲನಕಾರ ವಿಜೇತ್ ಚಂದ್ರ ಕೂಡಾ ಸಿನಿಮಾ ಬಗೆಗಿನ ಅನುಭವ ಹಂಚಿಕೊಂಡರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.