ಮೈಸೂರು: ಪ್ರಧಾನಿ ನರೇಂದ್ರ ಮೋದಿಗೆ ದೈವಬಲ ಪ್ರೇರಣೆಗೆ ಮೃತ್ಯುಂಜಯ ಹೋಮ
ಪಂಜಾಬ್ ಕಾಂಗ್ರೆಸ್ ಸರ್ಕಾರ ವಜಾಕ್ಕೆ ಶಾಸಕ ಎಲ್ ನಾಗೇಂದ್ರ ಆಗ್ರಹ
Team Udayavani, Jan 7, 2022, 3:27 PM IST
ಮೈಸೂರು : ಪ್ರಧಾನಿ ನರೇಂದ್ರ ಮೋದಿ ಅವರಿಗೆ ಭದ್ರತೆ ನೀಡುವಲ್ಲಿ ಪಂಜಾಬ್‌ನ ಕಾಂಗ್ರೆಸ್ ಸರ್ಕಾರ ಭಾರೀ ಲೋಪವೆಸಗಿದೆ. ಕೂಡಲೇ ಆ ಸರ್ಕಾರವನ್ನು ವಜಾಗೊಳಿಸಿ ಅಲ್ಲಿ ರಾಷ್ಟ್ರಪತಿ ಆಡಳಿತ ಜಾರಿ ಮಾಡುವಂತೆ ಶಾಸಕ ಎಲ್ ನಾಗೇಂದ್ರ ಆಗ್ರಹಿಸಿದರು.
ಬಿಜೆಪಿ ಚಾಮರಾಜ ಕ್ಷೇತ್ರದ ವತಿಯಿಂದ ದಿವಾನ್ಸ್ ರಸ್ತೆಯಲ್ಲಿರುವ ಅಮೃತೇಶ್ವರ ದೇವಸ್ಥಾನ ದಲ್ಲಿ ಪ್ರಧಾನಿ ನರೇಂದ್ರ ಮೋದಿ ರವರಿಗೆ ದೈವಬಲ ಪ್ರೇರಣೆಗೆ ಅವರ ಹೆಸರಿನಲ್ಲಿ ಮೃತ್ಯುಂಜಯ ಹೋಮ ನಡೆಸಿದ ಸಂದರ್ಭದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನರೇಂದ್ರ ಮೋದಿ ವಿರುದ್ಧ ವೈಯಕ್ತಿಕವಾಗಿ ದ್ವೇಷ ಸಾಧಿಸುತ್ತಿರುವ ಕಾಂಗ್ರೆಸ್ ಪಕ್ಷ, ಭದ್ರತೆಯಲ್ಲಿ ವೈಫಲ್ಯವೆಸಗುವ ಮೂಲಕ ಅವರ ಜೀವದ ಜೊತೆ ಚೆಲ್ಲಾಟವಾಡಿದೆ ಎಂದು ಆರೋಪಿಸಿದರು.
ಸ್ವಾರ್ಥ ರಾಜಕೀಯಕ್ಕಾಗಿ ಎಸಗಿರುವ ಇಂತಹ ಲೋಪಗಳು ದೇಶದ ಭದ್ರತೆಗೆ ಸವಾಲೊಡ್ಡಲಿವೆ. ಪ್ರಧಾನಿ ಫಿರೋಜ್‌ಪುರದಲ್ಲಿ ಸುಮಾರು 42 ಸಾವಿರ ಕೋಟಿ ವೆಚ್ಚದ ಯೋಜನೆಗಳಿಗೆ ಅಡಿಗಲ್ಲು ಹಾಕಲು ಹೊರಟಿದ್ದರು. ಅವರನ್ನು ಸ್ವಾಗತಿಸಲು ವಿಮಾನ ನಿಲ್ದಾಣಕ್ಕೆ ಬರಬೇಕಿದ್ದ ಮುಖ್ಯಮಂತ್ರಿ, ರಾಜ್ಯದ ಮುಖ್ಯ ಕಾರ್ಯದರ್ಶಿ ಹಾಗೂ ಪೊಲೀಸ್ ಮಹಾನಿರ್ದೇಶಕ ಬಾರದೇ ಇರುವುದು ಕೂಡ ಸಂಶಯಾಸ್ಪದ ವರ್ತನೆಯಾಗಿದೆ ಎಂದರು. ಪ್ರಧಾನಿ ಬರುವ ಹಾದಿಯಲ್ಲಿ ಲಾರಿ ಹಾಗೂ ಟ್ರ್ಯಾಕ್ಟರ್ ಸಮೇತ ಬಂದು ಪ್ರತಿಭಟನಾಕಾರರು ರಸ್ತೆ ಬಂದ್ ಮಾಡಿದ್ದಾರೆ. ಇದು ಪಂಜಾಬ್‌ನ ಗುಪ್ತಚರ ದಳಕ್ಕೆ ಗೊತ್ತಿರಲಿಲ್ಲವೇ. ವಿರೋಧ ಪಕ್ಷಗಳ ಆಡಳಿತ ಇರುವ ರಾಜ್ಯಗಳಲ್ಲಿ ಇಂತಹ ಉದಾಸೀತನೆ ಸರ್ವಥಾ ಸಮರ್ಥನೀಯವಲ್ಲ ಎಂದು ಹೇಳಿದರು.
ಈ ಸಂದರ್ಭದಲ್ಲಿ ನಗರಪಾಲಿಕೆ ಸದಸ್ಯೆ ಪ್ರಮೀಳಾ ಭರತ್ , ಮೈ ಕಾ ಪ್ರೇಮ್ ಕುಮಾರ್ , ಬಿಜೆಪಿ ನಗರ ಉಪಾಧ್ಯಕ್ಷ ಹರ್ಷ, ಬಿಜೆಪಿ ವೈದ್ಯಕೀಯ ಪ್ರಕೋಷ್ಠ ಸಹ ಸಂಚಾಲಕ ಗಿರೀಶ್ ,ಲಕ್ಷ್ಮಿ, ನವೀನ್,ಬಿಜೆಪಿ ಚಾಮರಾಜ ಕ್ಷೇತ್ರದ ಯುವ ಮೋರ್ಚಾ ಅಧ್ಯಕ್ಷ ಸಚಿನ್ , ಮಂಜುನಾಥ್ ,ಸುರೇಂದ್ರ,ರಾಜೇಂದ್ರ , ವಿಘ್ನೇಶ್ವರ ಭಟ್, ಸುದರ್ಶನ್ ,ದಿನೇಶ್ ಗೌಡ ,ತನುಜಾ ಮಹೇಶ್ ,ಶೋಭಾ, ಆನಂದ್ ,ಕಾಂತಿಲಾಲ್ ಜೈನ್,ಶರ್ಮಾ ,ಪಾಪಣ್ಣ ಮತ್ತು ಶ್ರೀನಿವಾಸ್ ,ಹಾಗೂ ಇನ್ನಿತರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು
Actor Health: ಸ್ವಲ್ಪ ಜರುಗಿದ ದರ್ಶನ್ ಬೆನ್ನುಮೂಳೆ; ತುರ್ತಾಗಿ ಆಪರೇಷನ್ ಇಲ್ಲ: ವೈದ್ಯರು
Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್ ಸಿಂಹ
Hunsur: ಕೆಲ ಗ್ರಾಮಗಳಲ್ಲಿ ಒಂಟಿ ಸಲಗದ ಉಪಟಳ; ಬೆಳೆ ನಾಶ, ರೈತರು ಕಂಗಾಲು
Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.