ಚಳ್ಳಕೆರೆ: ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ವಿದ್ಯಾರ್ಥಿಗಳ ಪ್ರತಿಭಟನೆ
Challakere, Protests, students, Government First grade College,
Team Udayavani, Jan 7, 2022, 4:43 PM IST
ಚಳ್ಳಕೆರೆ: ಇಲ್ಲಿನ ಎಚ್‌ಪಿಪಿಸಿ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಪೂರ್ಣ ಪ್ರಮಾಣದ ತರಗತಿಗಳನ್ನು ನಡೆಸದೇ ಇರುವುದರಿಂದ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಎಬಿವಿಪಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.
ಅಖೀಲ ಭಾರತ ವಿದ್ಯಾರ್ಥಿ ಪರಿಷತ್ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಭಾನುಪ್ರಸಾದ್ ಮಾತನಾಡಿ, ಕಳೆದ ಹಲವಾರು ತಿಂಗಳುಗಳಿಂದ ವಿದ್ಯಾರ್ಥಿಗಳು ಕಾಲೇಜಿಗೆ ಬಂದರೂ ಬಹುತೇಕ ತರಗತಿಗಳು ನಡೆಯುತ್ತಿಲ್ಲ. ಈ ಬಗ್ಗೆ ಕಾಲೇಜಿನ ಪ್ರಾಂಶುಪಾಲರಾಗಲೀ, ವಿಶ್ವವಿದ್ಯಾಲಯದ ಅಧಿ ಕಾರಿಗಳಾಗಲೀ ಯಾವುದೇ ಕ್ರಮ ಕೈಗೊಂಡಿಲ್ಲ. ಇದರಿಂದ ವಿದ್ಯಾರ್ಥಿಗಳು ಭವಿಷ್ಯದ ಬಗ್ಗೆ ಆತಂಕಗೊಂಡಿದ್ದಾರೆ. ಆದ್ದರಿಂದ ಕೂಡಲೇ ಎಲ್ಲಾ ವಿದ್ಯಾರ್ಥಿಗಳಿಗೂ ಪೂರ್ಣ ಪ್ರಮಾಣದಲ್ಲಿ ತರಗತಿ ನಡೆಯಬೇಕೆಂದು ಆಗ್ರಹಿಸಿದರು. ಠಾಣಾ ಇನ್ಸ್‌ಪೆಕ್ಟರ್ ಜೆ.ಎಸ್. ತಿಪ್ಪೇಸ್ವಾಮಿಯವರಿಗೆ ವಿದ್ಯಾರ್ಥಿಗಳು ಮನವಿ ಸಲ್ಲಿಸಿದರು.
ಈ ಬಗ್ಗೆ ಪ್ರಾಚಾರ್ಯರೊಂದಿಗೆ ಚರ್ಚಿಸಿದ ಠಾಣಾ ಇನ್ಸ್‌ಪೆಕ್ಟರ್ ತಿಪ್ಪೇಸ್ವಾಮಿ, ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಕಾಲೇಜು ಆಡಳಿತ ಮಂಡಳಿ ಹೆಚ್ಚು ಜವಾಬ್ದಾರಿ ವಹಿಸಬೇಕು. ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಜಾಗ್ರತೆ ವಹಿಸಬೇಕೆಂದು ಮನವಿ ಮಾಡಿದರು. ಅಲ್ಲದೆ ಕಾಲೇಜು ಶಿಕ್ಷಣ ಇಲಾಖೆ ಜಂಟಿ ನಿರ್ದೇಶಕರೊಂದಿಗೆ ದೂರವಾಣಿಯಲ್ಲಿ ಮಾತನಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಕಾಲೇಜು ಶಿಕ್ಷಣ ಇಲಾಖೆ ಜಂಟಿ ನಿರ್ದೇಶಕ ಅಶೋಕ್ ರೇವಣಕರ್, ಪೂರ್ಣ ಪ್ರಮಾಣದಲ್ಲಿ ತರಗತಿ ನಡೆಸಲು ರಾಜ್ಯ ಸರ್ಕಾರ ಶೀಘ್ರದಲ್ಲೇ ಸೂಕ್ತ ನಿರ್ಧಾರ ಕೈಗೊಳ್ಳಲಿದೆ. ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಟಿಯಿಂದ ಸರ್ಕಾರ ಚಿಂತನೆ ನಡೆಸುತ್ತಿದ್ದು, ಈ ಬಗ್ಗೆ ಎರಡೂ¾ರು ದಿನದಲ್ಲಿ ಸರ್ಕಾರ ಸೂಕ್ತ ಆದೇಶ ಹೊರಡಿಸಲಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Talk Fight: ಬಿ.ಎಸ್.ಯಡಿಯೂರಪ್ಪ ಬಗ್ಗೆ ಹಗುರ ಮಾತು ಸಲ್ಲ: ಬಿ.ವೈ.ವಿಜಯೇಂದ್ರ ಎಚ್ಚರಿಕೆ
Waqf Property: ಸಚಿವ ಜಮೀರ್ ಅಹ್ಮದ್‌ರನ್ನು ಗಡೀಪಾರು ಮಾಡಿ: ಬಿ.ವೈ.ವಿಜಯೇಂದ್ರ
ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ
Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ
ByPolls; ಕಾಂಗ್ರೆಸ್ ಸಂಪರ್ಕದಲ್ಲಿ ಯೋಗೇಶ್ವರ ವಿಚಾರ: ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ
MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.