ಬಸ್ ಸೌಲಭ್ಯ ಕಲ್ಪಿಸಲು ಆಗ್ರಹ
Team Udayavani, Jan 7, 2022, 6:05 PM IST
ಸಿಂಧನೂರು: ತಾಲೂಕಿನ ಬಪ್ಪೂರು, ತಿಡಿಗೋಳ, ದೇವರಗುಡಿ ಸೇರಿದಂತೆ ಇತರ ಭಾಗದಿಂದ ನಗರಕ್ಕೆ ಆಗಮಿಸುವ ವಿದ್ಯಾರ್ಥಿಗಳಿಗೆ ಸಮರ್ಪಕವಾಗಿ ಸಾರಿಗೆ ಸೌಲಭ್ಯ ಕಲ್ಪಿಸುವಂತೆ ಸಮಾಜ ಸೇವಕಿ ಡಾ| ನಾಗವೇಣಿ ಪಾಟೀಲ್ ಒತ್ತಾಯಿಸಿದರು.
ಬಸ್ ಸಮಸ್ಯೆಯಿಂದ ವಿದ್ಯಾರ್ಥಿಗಳು ಪ್ರತಿಭಟನೆಗೆ ಮುಂದಾದ ಹಿನ್ನೆಲೆಯಲ್ಲಿ ಗುರುವಾರ ಬಸ್‌ಡಿಪೋಕ್ಕೆ ಭೇಟಿ ನೀಡಿ, ಪರಿಹಾರ ಕಲ್ಪಿಸುವಂತೆ ಆಗ್ರಹಿಸಿದರು.
ಸಾರಿಗೆ ಘಟಕದ ವ್ಯವಸ್ಥಾಪಕರನ್ನು ಭೇಟಿ ಮಾಡಿ, ವಿದ್ಯಾರ್ಥಿಗಳ ಬೇಡಿಕೆ ಈಡೇರಿಸುವಂತೆ ಮನವಿ ಮಾಡಿದರು. ಸಿಂಧನೂರು ನಗರಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಬಡ ವಿದ್ಯಾರ್ಥಿಗಳು ಬರುತ್ತಾರೆ. ಅವರಿಗೆ ಬೆಳಗ್ಗೆ, ಮಧ್ಯಾಹ್ನ, ಸಂಜೆಯ ಹೊತ್ತಿನಲ್ಲಿ ಸರಿಯಾದ ವೇಳೆಗೆ ಬಸ್ ಓಡಿಸಬೇಕು. ಬಸ್ ಸಿಗದ ಕಾರಣಕ್ಕೆ ವಿದ್ಯಾರ್ಥಿಗಳು ಉಪವಾಸ ಬಳಲಬೇಕಾಗುತ್ತದೆ. ಇದನ್ನು ಅಧಿಕಾರಿಗಳು ಅರ್ಥ ಮಾಡಿಕೊಳ್ಳಬೇಕು ಎಂದು ಒತ್ತಾಯಿಸಿ, ಸಾರಿಗೆ ಡಿಸಿಯವರೊಂದಿಗೆ ದೂರವಾಣಿಯಲ್ಲಿ ಚರ್ಚಿಸಿದರು.
ಅಧಿಕಾರಿಗಳು ಮನವಿ ಸ್ಪಂದಿಸಿ ಬಸ್ ಓಡಿಸಲು ಕ್ರಮ ಕೈಗೊಳ್ಳುವ ಭರವಸೆ ನೀಡಿದ ಬಳಿಕ, ವಿದ್ಯಾರ್ಥಿಗಳು ಪ್ರತಿಭಟನೆ ಕೈ ಬಿಟ್ಟರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್ ಆಗಲಿದೆ ʼಕಂಗುವʼ
Urwa: ಬಾಯ್ದೆರೆದ ಕಾಂಕ್ರೀಟ್ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ
Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್: ಸಿದ್ದರಾಮಯ್ಯ
Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ
Karkala: ದುರ್ಗಾ ಗ್ರಾಮ ಪಂಚಾಯತ್; ರಸ್ತೆ ಸಂಪೂರ್ಣ ದುರವಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.