ಜೆಡಿಎಸ್‌ನಿಂದ ಜ.26ರಿಂದ ರಾಜ್ಯವ್ಯಾಪಿ ಜನತಾ ಜಲಧಾರೆ ರಥಯಾತ್ರೆ


Team Udayavani, Jan 8, 2022, 7:10 AM IST

ಜೆಡಿಎಸ್‌ನಿಂದ ಜ.26ರಿಂದ ರಾಜ್ಯವ್ಯಾಪಿ ಜನತಾ ಜಲಧಾರೆ ರಥಯಾತ್ರೆನಿಂದ ಜ.26ರಿಂದ ರಾಜ್ಯವ್ಯಾಪಿ ಜನತಾ ಜಲಧಾರೆ ರಥಯಾತ್ರೆ

ಬೆಂಗಳೂರು: ಮೇಕದಾಟು ಯೋಜನೆಗೆ ಆಗ್ರಹಿಸಿ ಕಾಂಗ್ರೆಸ್‌ ಪಕ್ಷ ಪಾದಯಾತ್ರೆ ಹೊರಡಲು ಮುಂದಾದ ಬೆನ್ನಲ್ಲೇ ರಾಜ್ಯದ ಎಲ್ಲಾ ನೀರಾವರಿ ಯೋಜನೆಗಳ ವಿಚಾರ ಮುಂದಿಟ್ಟುಕೊಂಡು ಜೆಡಿಎಸ್‌ ರಾಜ್ಯವ್ಯಾಪಿ ಜನತಾ ಜಲಧಾರೆ ಹೆಸರಲ್ಲಿ “ರಥಯಾತ್ರೆ’ ಕೈಗೊಳ್ಳಲು ನಿರ್ಧರಿಸಿದೆ.

ರಾಜ್ಯದ ಎಲ್ಲಾ ಭಾಗಗಳಿಗೂ ನೀರು ಒದಗಿಸುವ, ಲಭ್ಯ ನೀರನ್ನು ಸಮರ್ಪಕವಾಗಿ ಬಳಸಿಕೊಳ್ಳುವ ಹಾಗೂ ನೆನೆಗುದಿಗೆ ಬಿದ್ದಿರುವ ಎಲ್ಲ ನೀರಾವರಿ ಯೋಜನೆಗಳನ್ನು ಜಾರಿ ಮಾಡುವ ಮಹಾ ಸಂಕಲ್ಪದೊಂದಿಗೆ ಜೆಡಿಎಸ್‌ ಪಕ್ಷದಿಂದ ರಾಜ್ಯವ್ಯಾಪಿ ಇದೇ ಜನವರಿ 26ರಿಂದ ‘ ಜನತಾ ಜಲಧಾರೆ ‘ ಎಂಬ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಜನತಾ ಜಲಧಾರೆಗೆ ಹೊರಡಲಿರುವ ಗಂಗಾ ರಥವನ್ನು ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರು ಮತ್ತು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಶುಕ್ರವಾರ ಅನಾವರಣಗೊಳಿಸಿದರು. ಇದೇ ವೇಳೆ ಜನತಾ ಜಲಧಾರೆಯ ಲಾಂಛನ ಸಹ ಬಿಡುಗಡೆಗೊಳಿಸಲಾಯಿತು.

ಬಳಿಕ ಮಾತನಾಡಿದ ಎಚ್‌.ಡಿ. ಕುಮಾರಸ್ವಾಮಿ, ಕರ್ನಾಟಕ ಅತಿವೃಷ್ಟಿ- ಅನಾವೃಷ್ಟಿಗೆ ತುತ್ತಾಗುವ ರಾಜ್ಯ. ಮಳೆ ನೀರನ್ನು ಪೋಲಾಗದಂತೆ ಬಳಕೆ ಮಾಡಿಕೊಳ್ಳುವುದು ಹಾಗೂ ಸದಾ ಬರದಿಂದ ತತ್ತರಿಸುವ ಬಯಲುಸೀಮೆಯನ್ನು ಜಲ ಶ್ಯಾಮಲಗೊಳಿಸುವ ಕನಸು ನಮ್ಮದು. ಜೊತೆಗೆ ಸಸ್ಯಶ್ಯಾಮಲದ ಕನಸಿನೊಂದಿಗೆ ಕೃಷಿಗೆ ಸಮೃದ್ಧ ನೀರು ಹಾಗೂ ಜಲ ಶ್ಯಾಮಲಕ್ಕಾಗಿ ಕುಡಿಯಲು ಸಮೃದ್ಧ ನೀರು ಒದಗಿಸುವುದು ನಮ್ಮ ಗುರಿ. ಆ ನಿಟ್ಟಿನಲ್ಲಿ ಜಾತ್ಯತೀತ ಜನತಾದಳ ಏನು ಮಾಡುತ್ತದೆ? ಯಾವ ಕಾರ್ಯಕ್ರಮಗಳನ್ನು ಹಾಕಿಕೊಂಡಿದೆ? ಎಂಬುದನ್ನು ಜಲಧಾರೆ ಯಾತ್ರೆಯ ಮೂಲಕ ಜನರಿಗೆ ಹೇಳುತ್ತೇವೆ ಎಂದರು.

ಗಂಗೆಯನ್ನು ಪರಮ ಪವಿತ್ರವೆಂದು ಭಾವಿಸುವ ಪರಂಪರೆ ನಮ್ಮದು. ಈ ನಂಬಿಕೆಗೆ ಚ್ಯುತಿ ಬಾರದಂತೆ ಶ್ರದ್ಧಾ ಭಕ್ತಿಯಿಂದ ರಾಜ್ಯದ 15 ನದಿಗಳ ಪವಿತ್ರ ಜಲವನ್ನು ಕಲಶಗಳಲ್ಲಿ ಸಂಗ್ರಹ ಮಾಡಿ, ಆ ನೀರನ್ನು ಬೆಂಗಳೂರಿನ ಪಕ್ಷದ ಕೇಂದ್ರ ಕಚೇರಿ ಜೆಪಿ ಭವನಕ್ಕೆ ಬರಮಾಡಿಕೊಂಡು ಗಂಗಾಪೂಜೆ ನೆರೆವೇರಿಸಲಾಗುವುದು. ಜನವರಿ 23ರಂದು ರಾಮನಗರದ ಶ್ರೀ ಚಾಮುಂಡೇಶ್ವರಿ ಅಮ್ಮನವರ ದೇಗುಲದಿಂದ ರಾಜ್ಯದ 15 ದಿಕ್ಕುಗಳಿಗೆ ಹೊರಡುವ ಗಂಗಾ ರಥಗಳಿಗೆ (15 ವಾಹನಗಳು) ಚಾಲನೆ ನೀಡಲಾಗುವುದು ಎಂದು ಕುಮಾರಸ್ವಾಮಿ ತಿಳಿಸಿದರು.

ಇದನ್ನೂ ಓದಿ:ಅಣ್ಣಾ ಎನ್ನುವುದು ಬೇಡ ಅಂದರೆ ಸಾಹೇಬರೇ ಎನ್ನುತ್ತೇನೆ: ಕುಮಾರಸ್ವಾಮಿಗೆ ಡಿಕೆಶಿ

ಕೋವಿಡ್‌ ಮುನ್ನೆಚ್ಚರಿಕೆ ವಹಿಸುತ್ತೇವೆ:
ನಮಗೆ ಧಾವಂತವಿಲ್ಲ. ವೈರಸ್‌ ನಿಯಂತ್ರಣಕ್ಕೆ ಸರ್ಕಾರ ಜಾರಿ ಮಾಡುವ ಎÇÉಾ ನಿಯಮಗಳಿಗೆ ಬದ್ಧರಾಗಿ ಜಲಧಾರೆ ಕಾರ್ಯಕ್ರಮ ನಡೆಸುತ್ತೇವೆ. ಕಾಂಗ್ರೆಸ್‌ ನಾಯಕರಂತೆ ಅನುಮತಿ ಕೊಡದಿದ್ದರೆ ಪ್ರಾಣ ಬಿಡುತ್ತೇವೆ ಎಂದು ನಾವು ಬೆದರಿಕೆ ಹಾಕುವುದಿಲ್ಲ ಎಂದು ಎಚ್‌.ಡಿ. ಕುಮಾರಸ್ವಾಮಿ ಇದೇ ವೇಳೆ ತಿಳಿಸಿದರು.

ಜ.26ರಿಂದ ಜಲಧಾರೆ ಆರಂಭ:
ಜನವರಿ 26ರಂದು ಇಷ್ಟೂ ವಾಹನಗಳಲ್ಲಿ ಅಳವಡಿಸಲಾಗಿರುವ ಕಲಶಗಳ ಮೂಲಕ ಪೂರ್ವ ನಿಗದಿ ಮಾಡಲಾಗಿರುವ ಸ್ಥಳಗಳಲ್ಲಿ ಬೆಳಗ್ಗೆ 9 ಗಂಟೆಗೆ ಕಾವೇರಿ, ಕಬಿನಿ, ಮೇಕೆದಾಟು, ಹೇಮಾವತಿ, ನೇತ್ರಾವತಿ, ಕುಮಾರಧಾರ, ತುಂಗಭದ್ರಾ, ಶರಾವತಿ, ಅಘನಾಶಿನಿ, ಕೃಷ್ಣಾ, ಘಟಪ್ರಭಾ, ಮಲಪ್ರಭಾ, ಭೀಮಾ, ಅರ್ಕಾವತಿ, ಉತ್ತರ ಪಿನಾಕಿನಿ, ಚಿತ್ರಾವತಿ ಸೇರಿ 15 ಸ್ಥಳಗಳಲ್ಲಿ ಮೊದಲ ದಿನ ಜಲ ಸಂಗ್ರಹ ಮಾಡಲಾಗುವುದು. ಇಡೀ ಜಲಧಾರೆ ಕಾರ್ಯಕ್ರಮದಲ್ಲಿ ಒಟ್ಟು 51 ಸ್ಥಳಗಳಲ್ಲಿ ಪವಿತ್ರ ನದಿಗಳ ಜಲ ಸಂಗ್ರಹ ಮಾಡಲಾಗುವುದು. ರಾಜ್ಯದ 180 ವಿಧಾನಸಭೆ ಕ್ಷೇತ್ರಗಳು, 140 ತಾಲ್ಲೂಕು ಕೇಂದ್ರಗಳಲ್ಲಿ ಈ ಕಲಶಗಳು ಹಾದು ಹೋಗಲಿದ್ದು, ಎÇÉೆಡೆ ಜಲ ತುಂಬಿದ ಕಲಶಗಳ ಮೆರೆವಣಿಗೆ, ಕಲಾ ತಂಡಗಳ ಮೆರಗು, ಮಂಗಳವಾದ್ಯಗಳ ಮೇಳ, ಕಲಶಗಳೊಂದಿಗೆ ಮಹಿಳೆಯರ ನಡಿಗೆ ನಡೆಯಲಿದೆ. ದಿನಂಪ್ರತಿ 15 ಕಡೆ ಇಂಥ ಕಾರ್ಯಕ್ರಮಗಳು ನಡೆಯಲಿವೆ. ಎಲ್ಲಾ ಗಂಗಾ ರಥ ವಾಹನಗಳು 15-20ದಿನಗಳಲ್ಲಿ ಬೆಂಗಳೂರು ತಲುಪಲಿದ್ದು, ಅರಮನೆ ಮೈದಾನದಲ್ಲಿ ಬೃಹತ್‌ ಕಾರ್ಯಕ್ರಮ ನಡೆಸಲಾಗುವುದು ಎಂದು ಕುಮಾರಸ್ವಾಮಿ ಮಾಹಿತಿ ನೀಡಿದರು.

ವರ್ಷವಿಡೀ ಗಂಗಾ ಪೂಜೆ:
ಜನತಾ ಜಲಧಾರೆಯ ಸಮಾರೋಪ ಕಾರ್ಯಕ್ರಮ ಮುಗಿದ ನಂತರ ಪೂಜಿಸಲ್ಪಟ್ಟಿದ್ದ ಪವಿತ್ರ ಜಲವುಳ್ಳ ಕಲಶವನ್ನು ಬೆಂಗಳೂರಿನ ವಿವಿಧೆಡೆಗಳಿಂದ ಮೆರವಣಿಗೆ ಮೂಲಕ ಪಕ್ಷದ ರಾಜ್ಯ ಕಚೇರಿ ಜೆಪಿ ಭವನಕ್ಕೆ ವಿದ್ಯುಕ್ತವಾಗಿ ಬರ ಮಾಡಿಕೊಂಡು ಆ ಕಲಶ ಪ್ರತಿಷ್ಠಾಪನೆ ಮಾಡಲಾಗುವುದು. ಅಂದಿನಿಂದ ವರ್ಷವಿಡಿ ಗಂಗಾ ಪೂಜೆ, ಗಂಗಾ ಆರತಿ ನಿರಂತರವಾಗಿ ನಡೆಯಲಿದೆ. ಆ ನಿತ್ಯ ಪೂಜೆಯಲ್ಲಿ ಪಕ್ಷದ ಎಲ್ಲ ಮುಖಂಡರು, ಕಾರ್ಯಕರ್ತರು ಹಾಗೂ ಮಹಿಳಾ ಕಾರ್ಯಕರ್ತರು ಭಾಗಿಯಾಗಲಿದ್ದಾರೆ ಎಂದರು.

 

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

1-aaaaaaa

Karkala: ಕಾಂಗ್ರೆಸ್ ನಾಯಕ ಡಿ. ಅರ್.‌ರಾಜು ನಿಧನ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police crime

Belgavi:ಸಚಿವೆ ಲಕ್ಷ್ಮೀ ಹೆಬ್ಬಾಳಕ‌ರ್ ಆಪ್ತನ ಮೇಲೆ ದುಷ್ಕರ್ಮಿಗಳ ತಂಡದಿಂದ ದಾಳಿ

Paddy 2

Kampli; ದರ ಕುಸಿತ: ಭತ್ತ ನೆಲಕ್ಕೆ ಚೆಲ್ಲಿ ರೈತರ ಪ್ರತಿಭಟನೆ

R Ashok (2)

BPL ಕಾರ್ಡ್‌ನಿಂದ ಎಪಿಎಲ್‌ಗೆ 6ನೇ ಗ್ಯಾರಂಟಿ: ಅಶೋಕ್‌ ಲೇವಡಿ

renukaacharya

Waq ಹೋರಾಟಕ್ಕೆ ವಿಜಯೇಂದ್ರ ತಂಡಗಳೇ ಅಧಿಕೃತ: ರೇಣುಕಾಚಾರ್ಯ

CM-ibrahim

HDK ವಿರುದ್ಧ ಜಮೀರ್‌ ಹೇಳಿಕೆ ತಪ್ಪು: ಸಿ.ಎಂ. ಇಬ್ರಾಹಿಂ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

1-chuii

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.