ಪಾದಯಾತ್ರೆಗೆ ಕಾಂಗ್ರೆಸ್ ನಾಯಕರು ಸಜ್ಜು
Team Udayavani, Jan 8, 2022, 6:30 AM IST
ಬೆಂಗಳೂರು: ವಾರಾಂತ್ಯ ಕರ್ಫ್ಯೂ ನಡುವೆಯೇ ಮೇಕೆದಾಟು ಯೋಜನೆ ತ್ವರಿತ ಜಾರಿಗೆ ಆಗ್ರಹಿಸಿ ಕಾಂಗ್ರೆಸ್ ನಾಯಕರು ಪಾದಯಾತ್ರೆಗೆ ಸಜ್ಜಾಗಿದ್ದಾರೆ.
ಕೊರೊನಾ ಮಾರ್ಗಸೂಚಿ ಮುಂದಿಟ್ಟು ಪಾದಯಾತ್ರೆಗೆ ಅವಕಾಶ ಇಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ನಾವು ಪಾದಯಾತ್ರೆ ಮಾಡಿಯೇ ಸಿದ್ಧ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಶನಿವಾರ ಬೆಳಗ್ಗೆ ಕಾಂಗ್ರೆಸ್‌ನ ಹಿರಿಯ ನಾಯಕರ ಸಭೆ ಕರೆದಿದ್ದು, ಸರಕಾರ ಪಾದಯಾತ್ರೆ ತಡೆದರೆ ಯಾವ ರೀತಿಯ ಕಾರ್ಯತಂತ್ರ ಅನುಸರಿಸಬೇಕು ಎಂಬ ಬಗ್ಗೆ ಚರ್ಚಿಸಿ ಮೂರ್‍ನಾಲ್ಕು ಪರ್ಯಾಯ ಮಾರ್ಗಗಳ ಬಗ್ಗೆಯೂ ಚಿಂತಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ವಾರಾಂತ್ಯ ಕರ್ಫ್ಯೂ ಶುಕ್ರವಾರ ರಾತ್ರಿಯಿಂದಲೇ ಜಾರಿಯಾಗುವುದರಿಂದ ನಾಯಕರ ಸಂಚಾರಕ್ಕೆ ಅವಕಾಶ ಇದೆಯೇ ಎಂಬ ಪ್ರಶ್ನೆಯೂ ಇದೆ. ಬಹುತೇಕ ಪಾದಯಾತ್ರೆ ಸಂಘರ್ಷದ ಸ್ವರೂಪ ಪಡೆಯುವ ಸಾಧ್ಯತೆಯೇ ಹೆಚ್ಚು.
ಕನಕಪುರದ ಸಂಗಮ ಸಮೀಪದ ತೋಟವೊಂದರಲ್ಲಿ ಶನಿವಾರ ಕಾಂಗ್ರೆಸ್ ನಾಯಕರು ವಾಸ್ತವ್ಯ ಇರಲಿದ್ದು, ರವಿವಾರ ಬೆಳಗ್ಗೆ ಪಾದಯಾತ್ರೆ ಆರಂಭಿಸಲು ನಿರ್ಧರಿಸಲಾಗಿದೆ. ಪ್ರತಿ ದಿನ ಒಂದೊಂದು ಜಿಲ್ಲೆಯಿಂದ ಪಾದಯಾತ್ರೆಗೆ ಕಾರ್ಯಕರ್ತರು ಬರಲಿದ್ದು, 5 ಸಾವಿರಕ್ಕೂ ಹೆಚ್ಚು ಮಂದಿ ನೋಂದಣಿ ಮಾಡಿಕೊಂಡಿದ್ದಾರೆ.
ಮೇಲ್ನೋಟಕ್ಕೆ ಪಾದಯಾತ್ರೆ ವೇಳೆ ಜನಜಂಗುಳಿ ಅಥವಾ ದಟ್ಟಣೆ ಉಂಟಾಗುವ ಲಕ್ಷಣಗಳು ಕಂಡುಬರು ತ್ತಿದೆ. ಆದರೆ, ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರು, ಕೊರೊನಾ ನಿಯಮ ಪಾಲಿಸಿ ನೀರಿಗಾಗಿ ನಡಿಗೆ ಮಾಡುತ್ತೇವೆ ಎಂದೂ ಹೇಳಿದ್ದಾರೆ. ಅದು ಹೇಗೆ ಸಾಧ್ಯ ಎಂಬುದನ್ನು ಕಾದು ನೋಡಬೇಕಾಗಿದೆ.
ಇದನ್ನೂ ಓದಿ:ಪಾಕ್ ಸುಪ್ರೀಂಕೋರ್ಟ್‌ಗೆ ಮೊದಲ ಮಹಿಳಾ ಜಡ್ಜ್
ಜ. 9ರಂದು ಪಾದಯಾತ್ರೆಯಲ್ಲಿ ಭಾಗವಹಿಸುತ್ತೇನೆ. ಬೆಂಗಳೂರಿನ 5 ದಿನಗಳ ಪಾದಯಾತ್ರೆ ಜವಾಬ್ದಾರಿ ನನಗೆ ನೀಡಿದ್ದು, ಅದರ ಸಿದ್ಧತೆ ಮಾಡಿಕೊಳ್ಳುತ್ತೇವೆ.
-ರಾಮಲಿಂಗಾ ರೆಡ್ಡಿ, ಕೆಪಿಸಿಸಿ ಕಾರ್ಯಾಧ್ಯಕ್ಷ
ಪಾದಯಾತ್ರೆಗೆ ನಾವು ವಿರೋಧ ಮಾಡುತ್ತಿಲ್ಲ. ಆದರೆ ಹಿಂದೆ ಆಡಳಿತ ನಡೆಸಿದವರು, ಮುಖ್ಯಮಂತ್ರಿಯಾಗಿದ್ದವರು ಹಾಗೂ ಅಪಾರ ಅನುಭವ ಇರುವವರು ಈ ಬಗ್ಗೆ ಆಲೋ ಚಿಸಲಿ. ಪ್ರತಿಭಟನೆಗಳು ಪ್ರಜಾಪ್ರಭುತ್ವದ ಭಾಗವಾಗಿದೆ. ಪಾದಯಾತ್ರೆಯನ್ನು ಸ್ವಲ್ಪ ದಿನ ಮುಂದೂಡಲಿ.
-ಡಾ| ಕೆ.ಸುಧಾಕರ್, ಆರೋಗ್ಯ ಸಚಿವ
ಒಪ್ಪಿಗೆ ಸಿಗುವುದಾದರೆ ನಾನೂ ಪಾಲ್ಗೊಳ್ಳುತ್ತೇನೆ
ಬೆಂಗಳೂರು: ಮೇಕುದಾಟು ಪಾದಯಾತ್ರೆ ಮೂಲಕ ಆ ಯೋಜನೆಗೆ ಕೇಂದ್ರ ಸರಕಾರದ ಒಪ್ಪಿಗೆ ಸಿಗುತ್ತದೆ ಎಂದು ಕಾಂಗ್ರೆಸ್ ಖಚಿತಪಡಿಸಿದರೆ ನಾನು ಎಲ್ಲರಿಗಿಂತ ಮೊದಲೇ ಪಾದಯಾತ್ರೆಯಲ್ಲಿ ಪಾಲ್ಗೊಳ್ಳುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದರು. ಪಕ್ಷದ ಕಚೇರಿ ಜೆ.ಪಿ. ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ನದ್ದು ಪಾದಯಾತ್ರೆ ಅಲ್ಲ, ಅದು ಮತಯಾತ್ರೆ ಆಗಿದೆ. ಕೇವಲ ಮುಂದಿನ ಚುನಾವಣೆ ದೃಷ್ಟಿಯಲ್ಲಿರಿಸಿಕೊಂಡು ಪಾದಯಾತ್ರೆ ಹೆಸರಲ್ಲಿ ಜನರಿಗೆ ಮಂಕುಬೂದಿ ಎರಚಲಾಗುತ್ತಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ
Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ
Private Bus fare: ಶೀಘ್ರದಲ್ಲೇ ಖಾಸಗಿ ಬಸ್ ಪ್ರಯಾಣ ದರವೂ ಏರಿಕೆ?
Minimum Temperature: ಬೆಂಗಳೂರಿನಲ್ಲಿ ಶೀಘ್ರ 11 ಡಿಗ್ರಿ ತಾಪ?: 12 ವರ್ಷದಲ್ಲೇ ದಾಖಲೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ
Mollywood: ʼಮಾರ್ಕೊʼ ಬಳಿಕ ಮೋಹನ್ ಲಾಲ್ ನಿರ್ದೇಶನದ ʼಬರೋಜ್ʼ ಚಿತ್ರಕ್ಕೂ ಪೈರಸಿ ಕಾಟ
BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್ ಗೆ ಆಹ್ವಾನವಿಲ್ಲ! ದಿಗ್ಗಜನ ಬೇಸರ
Gundlupete: ಅಕ್ರಮವಾಗಿ 3 ಕೆ.ಜಿ. 100 ಗ್ರಾಂ ಗಾಂಜಾ ಸಾಗಣೆ: ಬಂಧನ
Odisha: ಕಾರಿಗೆ ಟ್ರಕ್ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.