150 ಮಂದಿ ವಿರುದ್ಧ ಎಫ್ಐಆರ್; ಪ್ರಧಾನಿ ಭೇಟಿ ವೇಳೆ ಭದ್ರತಾ ಲೋಪ
ಅನಾಮಿಕರ ಮೇಲೆ ದೂರು
Team Udayavani, Jan 8, 2022, 6:40 AM IST
ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಅವರ ಪಂಜಾಬ್ ಭೇಟಿ ವೇಳೆ ನಡೆದಿರುವ ಭದ್ರತಾ ಲೋಪ ಪ್ರಕರಣ ಸಂಬಂಧ 150 ಅನಾಮಿಕರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಪಂಜಾಬ್ ಪೊಲೀಸರೇ ಈ ಎಫ್ಐಆರ್ ದಾಖಲಿಸಿದ್ದು, ವಿಚಾರಣೆ ಕೈಗೆತ್ತಿಕೊಂಡಿದ್ದಾರೆ. ವಿಚಿತ್ರವೆಂದರೆ ಐಪಿಸಿ ಸೆಕ್ಷನ್ 283ರಂತೆ ದೂರು ದಾಖಲಾಗಿದ್ದು, ಇದರಲ್ಲಿ ತಪ್ಪಿತಸ್ಥರಾದವರಿಗೆ ಗರಿಷ್ಠ 200 ರೂ.ವರೆಗೆ ದಂಡ ವಿಧಿಸಬಹುದಾಗಿದೆ.
ಇನ್ನೊಂದೆಡೆ ಕೇಂದ್ರ ಸರಕಾರ ನೇಮಕ ಮಾಡಿರುವ ಕೇಂದ್ರ ತಂಡ ಪಂಜಾಬ್‌ನ ಫಿರೋಜ್‌ಪುರಕ್ಕೆ ತೆರಳಿದ್ದು, ಘಟನಾ ಸ್ಥಳ ಪರಿಶೀಲಿಸಿದೆ. ಇದರ ಮಧ್ಯೆಯೇ ಪಂಜಾಬ್ ಸರಕಾರ ನೇಮಕ ಮಾಡಿದ್ದ ಸಮಿತಿಯೂ ಕೇಂದ್ರ ಸರಕಾರಕ್ಕೆ ವರದಿ ಸಲ್ಲಿಸಿದ್ದು, ಪ್ರಕರಣ ಸಂಬಂಧ ಎಫ್ಐಆರ್ ದಾಖಲಿಸಲಾಗಿದೆ ಎಂದು ಹೇಳಿದೆ.
ಕೇಂದ್ರ ತಂಡವು ಶುಕ್ರವಾರ ಫಿರೋಜ್‌ಪುರದಲ್ಲಿನ ಫ್ಲೈಓವರ್ ಬಳಿ ತೆರಳಿ 45 ನಿಮಿಷಗಳ ಕಾಲ ಪರಿಶೀಲನೆ ನಡೆಸಿದೆ. ಬಳಿಕ ಈ ತಂಡ ಬಿಎಸ್‌ಎಫ್ ಸೆಕ್ಟರ್ ಮುಖ್ಯ ಕಚೇರಿಗೆ ತೆರಳಿತು. ಈ ಜಾಗದಿಂದ ಬಿಎಸ್‌ಎಫ್ ಮುಖ್ಯ ಕಚೇರಿ 10 ಕಿ.ಮೀ. ದೂರದಲ್ಲಿದ್ದು, ಬುಧವಾರ ನಡೆದ ಘಟನೆ ಬಗ್ಗೆ ವಿವರ ಕಲೆಹಾಕಿದೆ. ಅಲ್ಲದೆ, ಪಂಜಾಬ್ ಡಿಜಿಪಿ ಸೇರಿದಂತೆ 12 ಹಿರಿಯ ಅಧಿಕಾರಿಗಳು ಪ್ರಧಾನಿ ಅವರ ಭದ್ರತೆಯ ಹೊಣೆ ಹೊತ್ತಿದ್ದರು. ಹೀಗಾಗಿ ಇವರಿಗೆ ಕೇಂದ್ರ ತಂಡದ ಮುಂದೆ ಹಾಜರಾಗುವಂತೆ ನೋಟಿಸ್ ನೀಡಲಾಗಿತ್ತು. ಆದರೆ, ಪೊಲೀಸ್ ಮಹಾನಿರ್ದೇಶಕ ಸಿದ್ಧಾರ್ಥ ಚಟ್ಟೋಪಾಧ್ಯಾಯ ಅವರು ವಿಚಾರಣೆಗೆ ಹಾಜರಾಗಲಿಲ್ಲ. 24 ಗಂಟೆಗಳಲ್ಲಿ ಹಾಜರಾಗಿ ಮಾಹಿತಿ ನೀಡುವಂತೆ ಕೇಂದ್ರ ಸರಕಾರ ಅವರಿಗೆ ಸೂಚನೆ ನೀಡಿದೆ.
ಇದನ್ನೂ ಓದಿ:ವಿದೇಶದಿಂದ ಬರುವವರಿಗೆ 7 ದಿನ ಕ್ವಾರಂಟೈನ್ ಕಡ್ಡಾಯ
ಸುರಕ್ಷಿತ ವಾಗಿರಿಸಿ: ಭದ್ರತಾ ಲೋಪ ಪ್ರಕರಣ ಸಂಬಂಧ ಸುಪ್ರೀಂಕೋರ್ಟ್ ಕೂಡ ಶುಕ್ರವಾರ ವಿಚಾರಣೆ ನಡೆಸಿದ್ದು, ಪ್ರಧಾನಿ ಅವರ ಟ್ರಾವೆಲ್ ಹಿಸ್ಟರಿಯನ್ನು ಸುರಕ್ಷಿತವಾಗಿ ಇರಿಸುವಂತೆ ಸೂಚಿಸಿದೆ. ಪಂಜಾಬ್ ಪೊಲೀಸರು, ಎಸ್‌ಪಿಜಿ, ಕೇಂದ್ರ ಮತ್ತು ರಾಜ್ಯದ ತನಿಖಾ ತಂಡಗಳಿಗೆ ಈ ಬಗ್ಗೆ ಸೂಚನೆ ನೀಡಿದ್ದು, ರಿಜಿಸ್ಟ್ರಾರ್ ಜನರಲ್‌ಗೆ ಸೂಕ್ತ ನೆರವು ನೀಡುವಂತೆ ಆದೇಶಿಸಿದೆ. ಅಂದರೆ ಅಂದಿನ ಘಟನೆಯ ಎಲ್ಲ ದಾಖಲೆಗಳನ್ನು ಸಂಗ್ರಹಿಸಲು ಆರ್‌ಜಿಗೆ ನೆರವು ನೀಡಬೇಕು ಎಂದಿದೆ.
ಈ ಎಲ್ಲ ಬೆಳವಣಿಗೆಗಳ ಮಧ್ಯೆ ಪಂಜಾಬ್‌ನಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಲು ಕೇಂದ್ರ ಸರಕಾರ ಸಂಚು ರೂಪಿಸುತ್ತಿದೆ ಎಂದು ಮುಖ್ಯಮಂತ್ರಿ ಚನ್ನಿ ಆರೋಪಿಸಿದ್ದಾರೆ.
ಅಪಾಯದ ಸ್ಥಳದಲ್ಲಿದ್ದರು..
ಪ್ರಧಾನಿ ಮೋದಿ ಅವರು ಬುಧವಾರ 20 ನಿಮಿಷಗಳ ಕಾಲ ಕಾದ ಸ್ಥಳ ಪಾಕಿಸ್ಥಾನದಿಂದ ಕೇವಲ 10 ಕಿ.ಮೀ.ದೂರದಲ್ಲಿದ್ದು, ಅವರು ಅತ್ಯಂತ ಅಪಾಯದ ಸ್ಥಳದಲ್ಲಿದ್ದರು ಎಂದು ಕಾಂಗ್ರೆಸ್ ನಾಯಕ ಮನೀಶ್ ತಿವಾರಿ ಆತಂಕ ವ್ಯಕ್ತಪಡಿಸಿದ್ದಾರೆ. ಈ ಮೂಲಕ ಪ್ರಧಾನಿಗೆ ಜೀವ ಭಯವಿರಲಿಲ್ಲ ಎಂದ ಪಂಜಾಬ್ ಮುಖ್ಯಮಂತ್ರಿ ಮತ್ತು ತಮ್ಮದೇ ಪಕ್ಷದ ಚರಣ್‌ಜಿತ್ ಸಿಂಗ್ ಚನ್ನಿ ಅವರಿಗೆ ತಿರುಗೇಟು ನೀಡಿದ್ದಾರೆ. ಅಂದು ಪ್ರಧಾನಿಯವರು ಪಾಕಿಸ್ಥಾನದ ಶೂಟಿಂಗ್ ರೇಂಜ್‌ನ ಒಳಗೇ ಇದ್ದರು. ಅವರಿಗೆ ಜೀವಭಯವಿರಲಿಲ್ಲ ಎಂದು ಹೇಳಲು ಸಾಧ್ಯವಿಲ್ಲ. ಅಲ್ಲದೆ ಅಂದು ಅಲ್ಲಿ ಇದ್ದವರು ಪ್ರಧಾನಿಗಳು. ಬೇರಾರೂ ಅಲ್ಲ ಎಂಬುದನ್ನು ನೆನಪಿನಲ್ಲಿ ಇರಿಸಿಕೊಳ್ಳಬೇಕು ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Gurupura: ನಾಡಕಚೇರಿ ಕಟ್ಟಡ ಉದ್ಘಾಟನೆಗೆ ಸಿದ್ಧ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Gurupura: ನಾಡಕಚೇರಿ ಕಟ್ಟಡ ಉದ್ಘಾಟನೆಗೆ ಸಿದ್ಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.