ಕೋವಿಡ್ ಎಲ್ಲಿದೆ ? ನಾವು ರಿಯಾಲಿಟಿ ಚೆಕ್ ನಡೆಸಿದ್ದೇವೆ : ಡಿ.ಕೆ.ಶಿವಕುಮಾರ್
ಸರಕಾರದ ವಿರುದ್ಧ ತಿರುಗಿ ಬಿದ್ದ ಕಾಂಗ್ರೆಸ್
Team Udayavani, Jan 8, 2022, 1:05 PM IST
ಬೆಂಗಳೂರು : ಕೋವಿಡ್ ಎಲ್ಲಿದೆ ? ಎಲ್ಲೂ ಇಲ್ಲ. ಸರಕಾರ ಸೋಂಕಿತರ ಸಂಖ್ಯೆಯನ್ನು ಹೆಚ್ಚಿಸಿ ಕಳ್ಳಾಟ ಆಡುತ್ತಿದೆ, ನಾವು ರಿಯಾಲಿಟಿ ಚೆಕ್ ನಡೆಸುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪಿಸಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, ಪಾದಯಾತ್ರೆಗೆ ಅಪಾರ ಜನ ಬೆಂಬಲ ವ್ಯಕ್ತವಾಗುತ್ತಿದೆ. ಇದನ್ನು ತಡೆಯುವುದಕ್ಕಾಗಿ ಸರಕಾರ ವಾರಾಂತ್ಯದ ಲಾಕ್‌ಡೌನ್ ಹೇರಿದೆ. ಕೋವಿಡ್ ಕೇಸ್ ಎಷ್ಟಿದೆ ಎಂಬ ಬಗ್ಗೆ ನಾವೂ ರಿಯಾಲಿಟಿ ಚೆಕ್ ನಡೆಸುತ್ತಿದ್ದೇವೆ ಎಂದು ತಿರುಗೇಟು ನೀಡಿದರು.
ಯಾವ ಜಿಲ್ಲೆಯಲ್ಲಿ ಎಷ್ಟು ಸೋಂಕಿತರು ಇದ್ದಾರೆ ? ಅವರಲ್ಲಿ ಎಷ್ಟು ಜನರಿಗೆ ಸೋಂಕು ವಿಪರೀತವಾಗಿದೆ ? ಐಸಿಯುಗೆ ಎಷ್ಟು ಮಂದಿಯನ್ನು ದಾಖಲಿಸಿದ್ದಾರೆ ? ಕ್ವಾರಂಟೈನ್ ವ್ಯವಸ್ಥೆ ಹೇಗಿದೆ ? ಎಷ್ಟು ಮಂದಿ ಮೃತಪಟ್ಟಿದ್ದಾರೆ ಎಂಬ ಬಗ್ಗೆ ಮಾಹಿತಿ ಕಲೆ ಹಾಕಿದ್ದೇವೆ ಎಂದರು.
ಮೇಕಲೆದಾಟು ಪಾದಯಾತ್ರೆ ನಡೆಯುವ ರಾಮನಗರ ಜಿಲ್ಲೆಯಲ್ಲಿ ಕೋವಿಡ್‌ನಿಂದ ಈ ಬಾರಿ ಒಂದೂ ಸಾವಾಗಿಲ್ಲ. ಐಸಿಯುಗೆ ಯಾರೂ ದಾಖಲಾಗಿಲ್ಲ. ಬೆಂಗಳೂರಿನಲ್ಲಿ ಶುಕ್ರವಾರ ೭೬ ವರ್ಷದ ವೃದ್ಧ ಮೃತಪಟ್ಟಿದ್ದಾರೆ. ನಾವು ಆಸ್ಪತ್ರೆಗೆ ಭೇಟಿ ನೀಡಿಯೇ ದಾಖಲೆ ಸಂಗ್ರಹಿಸಿದ್ದೇವೆ. ಇಂಥ ಅವೈಜ್ಞಾನಿಕ ಲಾಕ್‌ಡೌನ್‌ನ್ನು ನಾವು ಖಂಡಿಸುತ್ತೇವೆ ಎಂದರು.
ಕೋವಿಡ್ ಎಲ್ಲಿದೆ ?
ಎಲ್ಲವೂ ಸುಳ್ಳು ಅಂಕಿ-ಅಂಶಗಳು. ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಶೇ.೩೦ರಷ್ಟು ಪಾಸಿಟಿವಿಟಿ ದರವಿತ್ತು. ಈಗ ಶೇ.೫ರಷ್ಟಿದೆ. ಅದು ಕೂಡಾ ಸುಳ್ಳು ಪ್ರಕರಣಗಳು. ನಾವು ಮನೆ ಮನೆಗೆ ಹೋಗಿ ದಾಖಲೆ ಪತ್ತೆ ಹಚ್ಚುತ್ತೇವೆ ಎಂದು ಎಚ್ಚರಿಕೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
MUST WATCH
ಹೊಸ ಸೇರ್ಪಡೆ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ
Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್.ಆರ್.
Actor Darshan Bail Case: ಹತ್ಯೆ ಸ್ಥಳದಲ್ಲಿ ದರ್ಶನ್ ಇದ್ರು: ಫೋಟೋ ಸಾಕ್ಷ್ಯ ಲಭ್ಯ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.