ಮಕ್ಕಳಿಗೆ ಲಸಿಕೆ: ಚಿಕ್ಕಬಳ್ಳಾಪುರ ಜಿಲ್ಲೆ ಪ್ರಥಮ


Team Udayavani, Jan 8, 2022, 2:21 PM IST

ಮಕ್ಕಳಿಗೆ ಲಸಿಕೆ: ಚಿಕ್ಕಬಳ್ಳಾಪುರ ಜಿಲ್ಲೆ ಪ್ರಥಮ

ಚಿಕ್ಕಬಳ್ಳಾಪುರ: 15 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಕೋವಿಡ್‌ ಲಸಿಕೆ ನೀಡುವಲ್ಲಿ ಜಿಲ್ಲೆಯು ರಾಜ್ಯ ಮಟ್ಟದ ಪಟ್ಟಿಯಲ್ಲಿ ಪ್ರಥಮ ಸ್ಥಾನಗಳಿಸಿದೆ ಎಂದು ಜಿಲ್ಲಾಧಿಕಾರಿ ಆರ್‌.ಲತಾ ತಿಳಿಸಿದ್ದಾರೆ.

ಮಾಧ್ಯಮಗಳಿಗೆ ಮಾಹಿತಿ ನೀಡಿ ಮಾತನಾಡಿದ ಅವರು, ಜ.3ರಿಂದ 15 ರಿಂದ 17 ವರ್ಷದ ಮಕ್ಕಳಿಗೆ ಕೋವಿಡ್‌ ಲಸಿಕೆ ನೀಡುವ ಕಾರ್ಯ ಸರ್ಕಾರದ ನಿರ್ದೇಶನದಂತೆ ಜಿಲ್ಲೆಯಲ್ಲಿಯೂ ಸಮಾರೋಪಾದಿಯಲ್ಲಿ ಕೈಗೆತ್ತಿಕೊಳ್ಳಲಾಗಿತ್ತು. 65,545 ಮಕ್ಕಳ ಪೈಕಿ 39,050 ಮಂದಿಗೆ ಕೊರೊನಾ ಲಸಿಕೆ ನೀಡಿದ್ದು, ಶೇ.60 ಸಾಧನೆ ಮಾಡಿ, ರಾಜ್ಯ ಮಟ್ಟದ ಪಟ್ಟಿಯಲ್ಲಿ ಪ್ರಥಮ ಸ್ಥಾನ ಗಳಿಸಿರುವುದಕ್ಕೆ ಜಿಲ್ಲಾಧಿಕಾರಿ ಹರ್ಷ ವ್ಯಕ್ತಪಡಿಸಿದರು.

ಅಧಿಕಾರಿ, ಸಿಬ್ಬಂದಿಗೆ ಅಭಿನಂದನೆ: ನಗರದ ಜೂನಿಯರ್‌ ಕಾಲೇಜಿನಲ್ಲಿ ಜ.5ರಂದು ಮಕ್ಕಳಿಗೆ ಲಸಿಕೆ ಹಾಕಿಸುವ ಮೂಲಕ ಮೇಳವನ್ನು ಜಿಲ್ಲಾ ಉಸ್ತುವಾರಿಸಚಿವ ಡಾ.ಕೆ.ಸುಧಾಕರ್‌ ಉದ್ಘಾಟಿಸಿದರು. ಆರೋಗ್ಯ, ಶಿಕ್ಷಣ ಇಲಾಖೆಯ ಅಧಿ ಕಾರಿಗಳು ವಿಶೇಷ ಆಸಕ್ತಿ ವಹಿಸಿ, ಮಕ್ಕಳು ಓದುವ ಶಾಲಾ ಕಾಲೇಜುಗಳಲ್ಲಿಯೇ ಲಸಿಕಾ ಸತ್ರಗಳನ್ನು ಯಶಸ್ವಿಯಾಗಿ ಆಯೋಜಿಸಿದ್ದರಿಂದರಾಜ್ಯ ಮಟ್ಟದ ಪಟ್ಟಿಯಲ್ಲಿ ಮೊದಲ ಸ್ಥಾನ ಗಳಿಸಲು ಸಾಧ್ಯವಾಗಿದೆ ಎಂದು ಹೇಳಿದರು.

2ನೇ ಡೋಸ್‌ ಲಸಿಕೆ ಹಾಕಿಸಿ: ಈ ಸಾಧನೆಗೆ ಸಹಕರಿಸಿದ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಗೆ ಮತ್ತು ಜಿಲ್ಲಾಡಳಿತದ ಅಧಿಕಾರಿಗಳು, ಸಿಬ್ಬಂದಿಗೆ ಅಭಿನಂದನೆ ತಿಳಿಸಿದ ಡೀಸಿ, ಈ ವಯೋಮಾನದ ಮಕ್ಕಳಿಗೆ ಲಸಿಕೆ ಹಾಕಿಸುವುದರಲ್ಲಿ ಹಾಗೂ ಮೊದಲ ಡೋಸ್‌ ಲಸಿಕೆ ಪಡೆದು 2ನೇ ಡೋಸ್‌ ಪಡೆಯಲು ಅರ್ಹರಿರುವ, ಬಾಕಿ ಇರುವ ಜಿಲ್ಲೆಯ ಜನರಿಗೆ ಲಸಿಕೆ ಹಾಕಿ ಶೇ.100 ಪ್ರಗತಿ ಸಾಧಿ ಸಬೇಕು ಎಂದು ವಿವರಿಸಿದರು.

ಈ ಮೂಲಕ ಎರಡೂ ಡೋಸ್‌ಗಳ ಲಸಿಕೆಯನ್ನು ರಾಜ್ಯದಲ್ಲಿಯೇ ಮೊದಲು ಪೂರ್ಣಗೊಳಿಸಿದ ಜಿಲ್ಲೆಯಾಗಿ ಚಿಕ್ಕಬಳ್ಳಾಪುರ ಜಿಲ್ಲೆ ಹೊರಹೊಮ್ಮಬೇಕು.ಆ ನಿಟ್ಟಿನಲ್ಲಿ ಅಧಿಕಾರಿಗಳು ಶ್ರಮಿಸಬೇಕು ಎಂದು ಸೂಚನೆ ನೀಡಿದರು.

ಸಚಿವರಿಂದ ಉತ್ತಮ ಸ್ಪಂದನೆ: ಜಿಲ್ಲೆಯಲ್ಲಿ ಲಸಿಕಾ ಉತ್ಸವ, ಅಭಿಯಾನ, ಮೇಳಗಳಲ್ಲಿ ಚಿಕ್ಕಬಳ್ಳಾಪುರ ಜನರು ಸದಾ ಸ್ಪಂದನಾಶೀಲರು ಎಂಬುದನ್ನು ಈ ಹಿಂದೆ ನಡೆದ ಮೇಳಗಳಲ್ಲಿ ತೋರಿಸಿಕೊಟ್ಟು ರಾಜ್ಯ ಮಟ್ಟದಲ್ಲಿ ಹಲವು ಬಾರಿ ಚಿಕ್ಕಬಳ್ಳಾಪುರ ಜಿಲ್ಲೆ ಪ್ರಥಮ ಸ್ಥಾನ ಗಳಿಸಲು ಕಾರಣಕರ್ತರಾಗಿದ್ದಾರೆ. ಅದೇ ರೀತಿಯಲ್ಲಿ 15ರಿಂದ 18 ರ ವಯೋಮಾನದ ಜಿಲ್ಲೆಯ ಮಕ್ಕಳು ಸ್ಪಂದನಾಶೀಲರೆಂದು ತೋರಿಸಿಕೊಟ್ಟಿದ್ದಾರೆ ಎಂದರು.

ಹಾಗೆಯೇ ಜಿಲ್ಲೆಯ ಸಮಸ್ತ ಜನರು ಮುಂದಿನ ದಿನಗಳಲ್ಲೂ ಸಹಕಾರ ನೀಡಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡುವುದು ಹಾಗೂ ಕೋವಿಡ್‌ ನಿಯಂತ್ರಣಾ ಮಾರ್ಗಸೂಚಿ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಚಿಕ್ಕಬಳ್ಳಾಪುರ ಜಿಲ್ಲೆಗೆ ಕೋವಿಡ್‌ 3ನೇ ಅಲೆ ಬರದಂತೆ ಸಹಕಾರ ನಿಡಬೇಕೆಂದು ಜಿಲ್ಲಾಧಿಕಾರಿಗಳು ಜನರಲ್ಲಿ ಮನವಿ ಮಾಡಿದರು.

ಟಾಪ್ ನ್ಯೂಸ್

NITK-Padavi-pradana

Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್‌ ರಂಗರಾಜನ್‌

Nalin-Kateel

Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್‌

Padmaraj–JPoojary

Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್‌

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Udupi-DC-Dr.-Vidya-kumari

Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ

adani (2)

Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CKB-Crime

Chikkaballapura: ಕಾರಿನಲ್ಲಿ ಸಾಗಿಸುತ್ತಿದ್ದ 7.20 ಲಕ್ಷ ರೂ. ಮೌಲ್ಯದ ಗಾಂಜಾ ವಶ

Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್‌: ಆರ್‌. ಅಶೋಕ್‌ ಆರೋಪ

Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್‌: ಆರ್‌. ಅಶೋಕ್‌ ಆರೋಪ

Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ

Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ

ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!

Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

NITK-Padavi-pradana

Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್‌ ರಂಗರಾಜನ್‌

Nalin-Kateel

Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್‌

Padmaraj–JPoojary

Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್‌

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.