ವರ್ಷ ಕಳೆದರೂ ಕಾರ್ಯಾರಂಭಗೊಳ್ಳದ ಪುನರ್ವಸತಿ ಕಚೇರಿ

3.30 ಲ.ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ಕಟ್ಟಡ

Team Udayavani, Jan 8, 2022, 5:51 PM IST

ವರ್ಷ ಕಳೆದರೂ ಕಾರ್ಯಾರಂಭಗೊಳ್ಳದ ಪುನರ್ವಸತಿ ಕಚೇರಿ

ಗಂಗೊಳ್ಳಿ: ಇಲ್ಲಿನ ಎಸ್‌.ವಿ. ಜೂನಿಯರ್‌ ಕಾಲೇಜು ರಸ್ತೆಯಲ್ಲಿರುವ ಹಳೆ ಪಂಚಾಯತ್‌ ಕಚೇರಿ ಸಮೀಪ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ (ವಿ.ಆರ್‌.ಡಬ್ಲ್ಯು.) ಕಚೇರಿ ಉದ್ಘಾಟನೆಗೊಂಡು ವರ್ಷ ಕಳೆದರೂ ಇನ್ನೂ ಕಾರ್ಯಾರಂಭಗೊಂಡಿಲ್ಲ.

ಬೀಗವೇ ತೆರೆದಿಲ್ಲ
ಗಂಗೊಳ್ಳಿ ಗ್ರಾ.ಪಂ.ನ 14ನೇ ಹಣಕಾಸು ಯೋಜನೆಯ ವಿಕಲಚೇತನರ ಶೇ. 5ರ ಅನುದಾನದಲ್ಲಿ ಎಸ್‌.ವಿ. ಜೂನಿ
ಯರ್‌ ಕಾಲೇಜು ರಸ್ತೆಯಲ್ಲಿರುವ ಹಳೆ ಪಂಚಾಯತ್‌ ಕಚೇರಿ ಸಮೀಪ ಸುಮಾರು 3.30 ಲ.ರೂ. ವೆಚ್ಚದಲ್ಲಿ ಅಂಗವಿಕಲರ ವಿ.ಆರ್‌. ಡಬ್ಲ್ಯು. ಕಚೇರಿ ಕಟ್ಟಡ ನಿರ್ಮಿಸಲಾಗಿತ್ತು. ಕಳೆದ ಸುಮಾರು 1 ವರ್ಷದ ಹಿಂದೆ ಕಟ್ಟಡ ಉದ್ಘಾಟಿಸಲಾಗಿದ್ದರೂ ಕಟ್ಟಡಕ್ಕೆ ಹಾಕಿರುವ ಬೀಗ ಈವರೆಗೂ ತೆರೆದಿಲ್ಲ. ಗಂಗೊಳ್ಳಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ನೇಮಕವಾಗಿದ್ದು, ನೂತನ ಕಟ್ಟಡ ಕಾರ್ಯಾರಂಭ ಮಾಡದೇ ಇರುವುದರಿಂದ ಅವರು ಕಳೆದ ಅನೇಕ ವರ್ಷಗಳಿಂದ ಗಂಗೊಳ್ಳಿ ಗ್ರಾ.ಪಂ. ಕಚೇರಿಯಲ್ಲಿಯೇ ಕಾರ್ಯ
ನಿರ್ವಹಿಸುತ್ತಿದ್ದಾರೆ. ಸರಕಾರದ ನಿಯಮ ದಂತೆ ಗ್ರಾ.ಪಂ. ಮೂಲಕ ಇವರಿಗೆ ಗೌರವಧನ ನೀಡಲಾಗುತ್ತಿದೆ.

ಸೌಕರ್ಯಗಳಿಲ್ಲ
ಅಂಗವಿಕಲರಿಗೆ ಸಹಾಯ, ಉಪಯೋಗಕ್ಕಾಗಿ ನಿರ್ಮಿಸಲಾಗಿರುವ ನೂತನಕಟ್ಟಡದಲ್ಲಿ ಪೀಠೊಪಕರಣ ಸಹಿತ ಯಾವುದೇ ಮೂಲ ಸೌಲಭ್ಯಗಳಿಲ್ಲ. ನೂತನವಾಗಿ ನಿರ್ಮಿಸಲಾಗಿರುವ ಗ್ರಾಮೀಣ ಪುನರ್ವಸತಿ ಕಚೇರಿಯಲ್ಲಿ ಮೂಲ ಸೌಲಭ್ಯ ಒದಗಿಸಿ ಸಾರ್ವಜನಿಕ ಸೇವೆಗೆ ನೀಡಲು ಕ್ರಮ ಕೈಗೊಳ್ಳುವಂತೆ ಸ್ಥಳೀಯ ಗ್ರಾ.ಪಂ. ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಹಾಗಿದ್ದರೂ ಈವರೆಗೆ ನೂತನ ಕಟ್ಟಡದ ಬೀಗಮುದ್ರೆ ತೆರವುಗೊಂಡಿಲ್ಲ.

ತೆರವಿಗೆ ಆಗ್ರಹ
ಸುಸಜ್ಜಿತ ನೂತನ ಕಟ್ಟಡ ನಿರ್ಮಾಣಗೊಂಡಿದ್ದರೂ ಅದರ ಪ್ರಯೋಜನ ಸಾರ್ವಜನಿಕರಿಗೆ ದೊರೆಯುತ್ತಿಲ್ಲ. ಹೀಗಾಗಿ ಗ್ರಾಮೀಣ ಪುನರ್ವಸತಿ ಕಚೇರಿಯನ್ನು ಸಾರ್ವಜನಿಕ ಸೇವೆಗೆ ಮುಕ್ತಗೊಳಿಸಬೇಕು. ಅಂಗವಿಕಲರ ಸೇವೆಗೆ ನಿಯುಕ್ತಿಗೊಂಡಿರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರಿಗೆ ಈ ಕಚೇರಿಮೂಲಕ ಸೇವೆ ನೀಡುವಂತೆ ಮಾಡಲು ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಮುಕ್ತಗೊಂಡಿಲ್ಲ
ಹಳೆ ಪಂಚಾಯತ್‌ ಕಚೇರಿ ಸಮೀಪ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಕಚೇರಿ ಕಟ್ಟಡ ನಿರ್ಮಾಣಗೊಂಡು ಉದ್ಘಾಟನೆಯಾಗಿ ವರ್ಷ ಕಳೆದರೂ ಸೇವೆಗೆ ಮುಕ್ತವಾಗಿಲ್ಲ. ಹೀಗಾಗಿ ಆದಷ್ಟು ಶೀಘ್ರ ಈ ಕಚೇರಿಯನ್ನು ಸಾರ್ವಜನಿಕ ಸೇವೆಗೆ ಉಪಯೋಗವಾಗುವಂತೆ ಮಾಡಬೇಕಿದೆ.
-ಬಿ. ಗಣೇಶ ಶೆಣೈ,
ಗ್ರಾ.ಪಂ. ಸದಸ್ಯ, ಗಂಗೊಳ್ಳಿ

ಶೀಘ್ರ ಸೇವೆಗೆ ಮುಕ್ತ
ನೂತನವಾಗಿ ನಿರ್ಮಿಸಲಾಗಿರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತ ಕಚೇರಿಯಲ್ಲಿ ಪೀಠೊಪಕರಣ ಮತ್ತಿತರ ಮೂಲ ಸೌಕರ್ಯ ಇಲ್ಲ. ಆದಷ್ಟು ಶೀಘ್ರ ಪೀಠೊಪಕರಣ ಒದಗಿಸಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತ ಕಚೇರಿ ಕಟ್ಟಡವನ್ನು ಸಾರ್ವಜನಿಕ ಸೇವೆಗೆ ಮುಕ್ತಗೊಳಿಸಲಾಗುವುದು.
-ಉಮಾಶಂಕರ,
ಪಿಡಿಒ, ಗಂಗೊಳ್ಳಿ ಗ್ರಾ. ಪಂ.

ಟಾಪ್ ನ್ಯೂಸ್

kangana-2

Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ

IPL 2025 Auction:‌ ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..

IPL 2025 Auction:‌ ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..

kl-rahul

IPL Auction: ‌ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್‌ ರಾಹುಲ್;‌ ಖರೀದಿ ಆರಂಭಿಸಿದ ಆರ್‌ ಸಿಬಿ

sanjay-raut

Ex-CJI ಚಂದ್ರಚೂಡ್ ರಾಜಕಾರಣಿಗಳಿಗೆ ಕಾನೂನಿನ ಭಯ ತೆಗೆದುಹಾಕಿದ್ದಾರೆ : ರಾವತ್

IPL Mega Auction: Huge demand for spinner Chahal; Miller to Lucknow

IPL Mega Auction: ಸ್ಪಿನ್ನರ್‌ ಚಾಹಲ್‌ ಗೆ ಭಾರೀ ಬೇಡಿಕೆ; ಮಿಲ್ಲರ್‌ ಲಕ್ನೋಗೆ

DKShi

Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್

rishabh-pant

IPL Mega Auction: ಭರ್ಜರಿ ಬಿಡ್‌ ಗಳಿಸಿ ಅಯ್ಯರ್‌ ದಾಖಲೆ ಮುರಿದ ರಿಷಭ್‌ ಪಂತ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

12

Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್‌; ತನಿಖೆ ಚುರುಕು

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Udupi-DC-Dr.-Vidya-kumari

Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ

puttige-5

Udupi:ಗೀತಾರ್ಥ ಚಿಂತನೆ 93; ಶ್ರೀಕೃಷ್ಣನಿಗೆ ಶರಣಾದ ಅರ್ಜುನ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

kangana-2

Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ

IPL 2025 Auction:‌ ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..

IPL 2025 Auction:‌ ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..

kl-rahul

IPL Auction: ‌ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್‌ ರಾಹುಲ್;‌ ಖರೀದಿ ಆರಂಭಿಸಿದ ಆರ್‌ ಸಿಬಿ

sanjay-raut

Ex-CJI ಚಂದ್ರಚೂಡ್ ರಾಜಕಾರಣಿಗಳಿಗೆ ಕಾನೂನಿನ ಭಯ ತೆಗೆದುಹಾಕಿದ್ದಾರೆ : ರಾವತ್

IPL Mega Auction: Huge demand for spinner Chahal; Miller to Lucknow

IPL Mega Auction: ಸ್ಪಿನ್ನರ್‌ ಚಾಹಲ್‌ ಗೆ ಭಾರೀ ಬೇಡಿಕೆ; ಮಿಲ್ಲರ್‌ ಲಕ್ನೋಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.