ಕೋವಿಡ್ ನಿಯಮ ತಪ್ಪದೇ ಪಾಲಿಸಿ: ಚಾಪಲ್
Team Udayavani, Jan 8, 2022, 8:27 PM IST
ದೇವದುರ್ಗ: ಕೊನೊರಾ ಮೂರನೇ ಅಲೆ ಸೋಂಕು ದಿನೇ-ದಿನೇ ಹೆಚ್ಚಾಗುತ್ತಿರುವ ಹಿನ್ನೆಲೆ ರಾಜ್ಯ ಸರಕಾರ ಹೊರಡಿಸಿದ ವೀಕೆಂಡ್ ಕರ್ಫ್ಯೂ ಕಟ್ಟುನಿಟ್ಟಾಗಿ ಪಾಲಿಸುವಂತೆ ಜನರಲ್ಲಿ ಜಾಗೃತಿ ಮೂಡಿಸುವ ಜವಾಬ್ದಾರಿ ಅಧಿ ಕಾರಿಗಳ ಮೇಲೆ ಹೆಚ್ಚಿದೆ ಎಂದು ತಹಶೀಲ್ದಾರ್ ಶ್ರೀನಿವಾಸ ಚಾಪಲ್ ಹೇಳಿದರು.
ಪಟ್ಟಣದ ಮಿನಿ ವಿಧಾನಸೌಧ ಸಭಾಂಗಣದಲ್ಲಿ ಶುಕ್ರವಾರ ತಹಶೀಲ್ದಾರ್ ಅಧ್ಯಕ್ಷತೆಯಲ್ಲಿ ವೀಕೆಂಡ್ ಕರ್ಫ್ಯೂ ಕುರಿತು ತಾಲೂಕು ಮಟ್ಟದ ಅ ಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ಶನಿವಾರ ನಡೆಯುವ ವಾರದ ಸಂತೆ ತರಕಾರಿ, ಕುರಿ, ಮೇಕೆ, ಜಾನುವಾರುಗಳ ಸಂತೆ ರದ್ದು ಮಾಡಲಾಗಿದೆ. ವಾರದ ಸಂತೆಗೆ ಬರುವಂತ ಸ್ಥಳಗಳಲ್ಲಿ ಪೊಲೀಸ್ ಸಿಬ್ಬಂದಿಗಳೊಂದಿಗೆ ಬಿಗಿ ಕ್ರಮ ಕೈಗೊಳ್ಳಬೇಕು. ಹೂವಿನಹೆಡಗಿ ಚೆಕ್ ಪೋಸ್ಟ್, ಶಂಕರಬಂಡಿ ಕ್ರಾಸ್, ಸಿರವಾರ ಕ್ರಾಸ್, ಬೆಟ್ಟದ ಶಂಭುಲಿಂಗೇಶ್ವರ, ವೆಂಗಳಪುರ ಮಾರ್ಗ ಪೊಲೀಸ್ ಠಾಣೆ ಮುಂಭಾಗದಲ್ಲಿ ಸೇರಿದಂತೆ ಬಿಗಿ ಕ್ರಮಕೈಗೊಳ್ಳಲು ಜಾಗೃತಿ ವಹಿಸಬೇಕು ಎಂದು ತಿಳಿಸಿದರು. ಹಳ್ಳಿಗಳಲ್ಲಿ ಗ್ರಾಪಂ ಮೂಲಕ ವಾರದ ಸಂತೆ ರದ್ದು, ವಾರಾಂತ್ಯದ ಕರ್ಫ್ಯೂ ಕುರಿತು ಡಂಗೂರ ಜತೆ ಜಾಗೃತಿ ಮೂಡಿಸಬೇಕು ಎಂದು ಜಾಲಹಳ್ಳಿ, ಗಬ್ಬೂರು, ಅರಕೇರಾ ಸೇರಿ ನಾಡಕಚೇರಿ ಅ ಧಿಕಾರಿಗಳಿಗೆ ಸೂಚನೆ ನೀಡಿದರು. ಇದರಲ್ಲಿ ಪಿಡಿಒಗಳ ಪಾತ್ರಯೂ ಬಹಳ ಮುಖ್ಯವಾಗಿದೆ. ಒಮಿಕ್ರಾನ್ ಮೂರನೇ ಅಲೆಯ ಅಬ್ಬರ ಹೆಚ್ಚಿದೆ. ಇಲ್ಲಿವರೆಗೆ ತಾಲೂಕಿನಲ್ಲಿ ಒಂದೇ ಒಂದು ಪ್ರಕರಣ ದೃಢಪಟ್ಟಿಲ್ಲ.
ಸೋಂಕು ಹರಡದಂತೆ ಮುನ್ನಚ್ಚರಿಕೆ ಕ್ರಮವಹಿಸಲು ಅಧಿ ಕಾರಿಗಳು ಎಚ್ಚರ ವಹಿಸಬೇಕು ಎಂದು ಸಭೆಯಲ್ಲಿ ತಹಶೀಲ್ದಾರ್ ಸೂಚಿಸಿದರು. ಪುರಸಭೆ ವ್ಯಾಪ್ತಿಯ ವಾರ್ಡ್ ಗಳಲ್ಲಿ ಟಂಟಂ ಮೂಲಕ ಜನರಲ್ಲಿ ಜಾಗೃತಿ ಮೂಡಿಸುವಂತೆ ಪುರಸಭೆ ಮುಖ್ಯಾಧಿ ಕಾರಿ ಶರಣಪ್ಪ ಅವರಿಗೆ ಸೂಚಿಸಿದರು. ಅಗತ್ಯ ವಸ್ತುಗಳು ಹೊರತುಪಡಿಸಿ ಇನ್ನುಳಿದ ಯಾವುದೇ ಅಂಗಡಿಗಳು ತೆರೆಯದಂತೆ ಪುರಸಭೆ ಅಧಿ ಕಾರಿಗಳು ಎಚ್ಚರವಹಿಸಬೇಕಿದೆ.
ಕೋವಿಡ್ ಮೂರನೇ ಅಲೆ ವ್ಯಾಪಕವಾಗಿ ಹರಡುತ್ತಿದ್ದು, ನಿಯಂತ್ರಣ ಮಾಡುವ ಜತೆ ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದು ಅ ಧಿಕಾರಿಗಳಿಗೆ ಸೂಚಿಸಿದರು. ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿ ಕಾರಿ ಆರ್.ಇಂದಿರಾ, ಸಿಪಿಐ ಆರ್. ಎಂ. ನದಾಫ್, ಮುಖ್ಯಾವೈದ್ಯಾ ಧಿಕಾರಿ ಆರ್.ಎಂ. ಹುಲಿಮನಿಗೌಡ, ಪಿಎಸ್‌ಐ ಸಣ್ಣ ವೀರೇಶ, ನರಸರೆಡ್ಡಿ, ಶಿರಸ್ತೇದಾರ ಮಂಜುನಾಥ, ವಿಕಾಸ, ಮನೋಹರ ಸೇರಿ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Polls Result: ಪ್ರತಿಪಕ್ಷಗಳ ಸುಳ್ಳು ಆರೋಪಕ್ಕೆ ಜನಾದೇಶದ ಉತ್ತರ: ಖಂಡ್ರೆ
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್ ಖಂಡ್ರೆ
Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ
Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Prabhutva movie review: ಪ್ರಗತಿ ಪಥದಲ್ಲಿ ಕ್ರಾಂತಿಯ ಕಿಡಿ
BBK11: ಇವತ್ತು ಬಿಗ್‌ಬಾಸ್ ಮನೆಯಿಂದ ಆಚೆ ಬರುವುದು ಇವರೇ ನೋಡಿ
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Smart meters: ನೀರು ಸಂರಕ್ಷಿಸುವ ವಿಚಾರದಲ್ಲಿ ಕ್ರಾಂತಿ ಮಾಡಿದ ಸ್ಮಾರ್ಟ್ ವಾಟರ್ ಮೀಟರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.