ರಾಜ್ಯದಲ್ಲಿ ಇಂದು 12 ಸಾವಿರ ಕೋವಿಡ್ ಕೇಸ್: 04 ಸಾವು

10 ದಿನಗಳಲ್ಲಿ ಅರ್ಧ ಲಕ್ಷ ಸಮೀಪಿಸಿದ ಸೋಂಕು: ಮೂರನೇ ಅಲೆ ತೀವ್ರತೆ

Team Udayavani, Jan 9, 2022, 5:18 PM IST

covid-1

ಬೆಂಗಳೂರು: ಮೂರನೇ ಅಲೆ ತೀವ್ರಗೊಂಡಿದ್ದು, ರಾಜ್ಯದಲ್ಲಿ ಪ್ರಕರಣಗಳ ಸಂಖ್ಯೆ ಕೇವಲ ಹತ್ತು ದಿನಗಳಲ್ಲಿ 41,000ದ ಗಡಿ ದಾಟಿದೆ.

ರಾಜ್ಯದಲ್ಲಿ ರವಿವಾರ 12,000 ಕೋವಿಡ್‌ ಪ್ರಕರಣಗಳು ಪತ್ತೆಯಾಗಿದ್ದು, 4 ಮಂದಿ ಕೊರೊನಾದಿಂದ ಮೃತಪಟ್ಟಿದ್ದಾರೆ. ಆ ಮೂಲಕ ರಾಜ್ಯದ ಪಾಸಿಟಿವಿಟಿ ದರ ಶೇ.6.33ಕ್ಕೆ ಏರಿಕೆಯಾಗಿದ್ದು, ಹತ್ತು ದಿನದಲ್ಲಿ ದಿನವೊಂದಕ್ಕೆ ಸರಾಸರಿ 4,000 ಕೊರೊನಾ ಸೋಂಕು ದೃಢವಾಗಿದೆ. ಬೆಂಗಳೂರು ನಗರದಲ್ಲಿ 9,020 ಮಂದಿಯಲ್ಲಿ ಸೋಂಕು ದೃಢಗೊಂಡಿದ್ದು, 40,000 ಸಕ್ರಿಯ ಪ್ರಕರಣಗಳಿವೆ. ಆ ಮೂಲಕ ಸೋಂಕಿನ ಪ್ರಮಾಣ ಶೇ.10ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಕಳೆದೊಂದು ವಾರದಲ್ಲಿ ಶೇ.3.91 ಪಾಸಿಟಿವಿಟಿ ದರ ದಾಖಲಾಗಿದೆ.

ದ್ವಿಗುಣ ವೇಗದ ಸೋಂಕು
ಬೆಂಗಳೂರು ಹೊರತುಪಡಿಸಿದರೆ, ಉಳಿದೆಲ್ಲ ಜಿಲ್ಲೆಯಲ್ಲಿ ನಿತ್ಯ 100 ಸೋಂಕು ಸಮೀಪಿಸುತ್ತಿರುವ ಕಡೆಯಲ್ಲಿ ಏಕಾಏಕಿಯಾಗಿ ನಿತ್ಯ ದಾಖಲಾಗುವ ಪ್ರಕರಣಗಳ ಸಂಖ್ಯೆ 400ರ ಸಮೀಪಿಸುತ್ತಿದೆ. ಮೈಸೂರಿನಲ್ಲಿ 398, ಉಡುಪಿ 348, ದ.ಕ. 298, ಮಂಡ್ಯ 261, ಶಿವಮೊಗ್ಗ 198, ತುಮಕೂರು 190, ಧಾರವಾಡ 147, ಹಾಸನ 182,ಬಳ್ಳಾರಿ 107, ಬೆಳಗಾವಿ 105 ಪ್ರಕರಣಗಳು ಪತ್ತೆಯಾಗಿದೆ.

18 ಜಿಲ್ಲೆಯಲ್ಲಿ ಸೋಂಕು ಹೆಚ್ಚಳ
ಬೆಂಗಳೂರು ಗ್ರಾಮಾಂತರ 98, ಕಲಬುರಗಿ 98, ಉತ್ತರ ಕನ್ನಡ 94, ಕೋಲಾರ 83, ಚಿಕ್ಕಮಗಳೂರು 78, ವಿಜಯಪುರ 49, ಚಿಕ್ಕಬಳ್ಳಾಪುರ 44, ದಾವಣಗೆರೆ 30, ಕೊಡಗು 29, ಚಾಮರಾಜನಗರ 26, ಚಿತ್ರದುರ್ಗ 24, ಬೀದರ್‌ 20, ರಾಮನಗರ 20, ಕೊಪ್ಪಳ 19, ಯಾದಗಿರಿ 10, ಹಾವೇರಿ 8, ರಾಯಚೂರು ಹಾಗೂ ಗದಗ 7 ಪ್ರಕರಣಗಳು ದಾಖಲಾಗಿದೆ. ಬೆಂಗಳೂರು ನಗರ 2, ಬಳ್ಳಾರಿ, ದ.ಕ. ಜಿಲ್ಲೆಯಲ್ಲಿ ತಲಾ ಒಂದರಂತೆ ಒಟ್ಟು ನಾಲ್ಕು ಮರಣ ಪ್ರಕರಣ ದಾಖಲಾಗಿದೆ. ಪ್ರಸ್ತುತ ಗುಣಮುಖರಾಗುವವರ ಪ್ರಮಾಣ ಶೇ.97.11 ಇದೆ. 49,602 ಸಕ್ರಿಯ ಪ್ರಕರಣಗಳಿವೆ. ರಾಜ್ಯದಲ್ಲಿ ಜ.9ರಂದು 901 ಮಂದಿ ಗುಣಮುಖರಾಗಿದ್ದಾರೆ.

40 ಮೇಲ್ಪಟ್ಟವರಲ್ಲಿ
ಸೋಂಕು ಅಧಿಕ
ಕೊರೊನಾ ಮೂರನೇ ಅಲೆಯಲ್ಲಿ ರಾಜ್ಯದ ಸೋಂಕಿಗೆ ತುತ್ತಾದವರಲ್ಲಿ ಶೇ. 70ರಷ್ಟು ಸೋಂಕಿನ ಪ್ರಕರಣಗಳು 40 ವರ್ಷ ಮೇಲ್ಪಟ್ಟವರಲ್ಲಿ ಕಾಣಿಸಿಕೊಂಡಿದೆ. ಜ.1ರಿಂದ ದಿನದಿಂದ ಜ.9ರ ವರೆಗೆ 11.48 ಲಕ್ಷ ಮಂದಿಯ ಮಾದರಿಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಅದರಲ್ಲಿ 6.48 ಲಕ್ಷ ಮಂದಿ ಪುರುಷರ ಹಾಗೂ 5 ಲಕ್ಷ ಮಹಿಳೆಯರ ಸ್ವಾéಬ್‌ಗಳನ್ನು ಪರೀಕ್ಷೆ ಒಳಪಡಿಸಲಾಗಿದೆ. ಅದರಲ್ಲಿ 27,988 ಪುರುಷರಲ್ಲಿ ಹಾಗೂ 20,545 ಮಹಿಳೆಯರಿಗೆ ಸೋಂಕಿಗೆ ತುತ್ತಾಗಿದ್ದಾರೆ. ಆ ಮೂಲಕ 15ದಿನಗಳಲ್ಲಿ ಅತ್ಯಧಿಕ ಸಂಖ್ಯೆ ಪುರುಷರಲ್ಲಿ ಸೋಂಕು ದೃಢಗೊಳ್ಳುತ್ತಿರುವುದು ವರದಿಗಳ ಅಂಕಿ ಅಂಶಗಳ ದೃಢಪಡಿಸುತ್ತಿವೆ.

ಟಾಪ್ ನ್ಯೂಸ್

ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

Madhya Pradesh: ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

1-reee

Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್

baby 2

Hospital ನಿಂದ ಶಿಶುವಿನ ಅಪಹರಣ: ರೈಲು ನಿಲ್ದಾಣದಲ್ಲಿ ರಕ್ಷಣೆ: ಇಬ್ಬರ ಬಂಧನ

Nirmala 2 a

Middle class; ಮಧ್ಯಮ ವರ್ಗದವರಿಗೆ ಪರಿಹಾರ: ಎಕ್ಸ್ ಬಳಕೆದಾರಗೆ ನಿರ್ಮಲಾ ಪ್ರತಿಕ್ರಿಯೆ

arrested

Big Boss ಸ್ಪರ್ಧಿಯಾಗಿದ್ದ ನಟ-ಗಾಯಕ ಮಾದಕ ವಸ್ತು ಸಹಿತ ಬಂಧನ

Pushpa 2 trailer: ಪೈಸಾ ವಸೂಲ್‌ ಅವತಾರದಲ್ಲಿ ʼಪುಷ್ಪರಾಜ್‌ʼ; ಅಲ್ಲು ಭರ್ಜರಿ ಆ್ಯಕ್ಷನ್

Pushpa 2 trailer: ಪೈಸಾ ವಸೂಲ್‌ ಅವತಾರದಲ್ಲಿ ʼಪುಷ್ಪರಾಜ್‌ʼ; ಅಲ್ಲು ಭರ್ಜರಿ ಆ್ಯಕ್ಷನ್

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

Siddu-Bagalakote

Ration Card: ಅನರ್ಹರಿಗೆ ಬಿಪಿಎಲ್‌ ಕಾರ್ಡ್‌ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ

Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ

Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ

No support for liquor bandh: Tourism Hotel Owners Association

Liquor: ಮದ್ಯ ಬಂದ್‌ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ

: ಸಿಎಂ ಸಿದ್ದರಾಮಯ್ಯ

Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

Madhya Pradesh: ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

1-reee

Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್

byndoor

Karkala: ಕೀಟ ನಾಶಕ ಸೇವಿಸಿ ವ್ಯಕ್ತಿ ಸಾವು

baby 2

Hospital ನಿಂದ ಶಿಶುವಿನ ಅಪಹರಣ: ರೈಲು ನಿಲ್ದಾಣದಲ್ಲಿ ರಕ್ಷಣೆ: ಇಬ್ಬರ ಬಂಧನ

Nirmala 2 a

Middle class; ಮಧ್ಯಮ ವರ್ಗದವರಿಗೆ ಪರಿಹಾರ: ಎಕ್ಸ್ ಬಳಕೆದಾರಗೆ ನಿರ್ಮಲಾ ಪ್ರತಿಕ್ರಿಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.