![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Jan 10, 2022, 7:15 AM IST
ಹೊಸದಿಲ್ಲಿ: ಉತ್ತರ ಪ್ರದೇಶ ಸಹಿತ ಐದು ರಾಜ್ಯಗಳ ಚುನಾವಣೆಗೆ ವೇಳಾಪಟ್ಟಿ ಬಿಡುಗಡೆಯಾಗಿದೆ. ಸೋಂಕಿನ ಹಿನ್ನೆಲೆಯಲ್ಲಿ ಜ. 15ರ ವರೆಗೆ ಬಹಿರಂಗ ಪ್ರಚಾರ ಮಾಡದಂತೆ ಚುನಾವಣ ಆಯೋಗ ಈಗಾಗಲೇ ತಿಳಿಸಿದೆ. ಆದ್ದರಿಂದ ಬಿಜೆಪಿ, ಕಾಂಗ್ರೆಸ್, ಎಸ್‌ಪಿ ಸೇರಿದಂತೆ ಎಲ್ಲ ರಾಜಕೀಯ ಪಕ್ಷಗಳು ಆನ್‌ಲೈನ್ ಅಥವಾ ವರ್ಚುವಲ್ ಪ್ರಚಾರಕ್ಕೆ ಮುಂದಾಗಿವೆ. ಸಾಮಾಜಿಕ ಜಾಲತಾಣವೆಂದರೆ ದೂರವೇ ಇರುತ್ತಿದ್ದ ಮಾಯಾವತಿ ನೇತೃತ್ವದ ಬಿಎಸ್‌ಪಿ ಕೂಡ ಹೊಸ ಪ್ರಚಾರ ತಂತ್ರದ ಮೊರೆ ಹೊಗುವ ಪರಿಸ್ಥಿತಿ ಉಂಟಾಗಿದೆ.
ಬಿಜೆಪಿ
-3ಡಿ ಸ್ಟುಡಿಯೋ ಮಿಕ್ಸ್, ಜೂಮ್ ಮತ್ತು ವೆಬ್‌ಎಕ್ಸ್ ಬಳಸುವಂತೆ ಪಕ್ಷದ ಐಟಿ ಸೆಲ್‌ಗೆ ಸೂಚನೆ
– 3ಡಿ ಸ್ಟುಡಿಯೋ ಮಿಕ್ಸ್‌ನಲ್ಲಿ ಎರಡು ಭಿನ್ನ ಸ್ಥಳ ಗಳಲ್ಲಿ ಇರುವ ನಾಯಕರನ್ನು ಒಂದೇ ವೇದಿಕೆ ಯಲ್ಲಿರುವಂತೆ ಚಿತ್ರಿಸಲಾಗುತ್ತದೆ.
– ಫೇಸ್‌ಬುಕ್, ಟ್ವಿಟರ್, ಇನ್‌ಸ್ಟಾಗ್ರಾಂ, ವಾಟ್ಸ್ ಆ್ಯಪ್‌ಗ್ಳನ್ನು ಈಗಾಗಲೇ ಬಳಸುತ್ತಿದ್ದು, ಮತ್ತಷ್ಟು ಪರಿಣಾಮಕಾರಿ ಬಳಕೆಗೆ ಕ್ರಮ.
– 1.8 ಲಕ್ಷ ಪೋಲಿಂಗ್ ಬೂತ್ ವ್ಯಾಪ್ತಿಯಲ್ಲಿ ಕನಿಷ್ಠ ಎರಡು ವಾಟ್ಸ್‌ಆ್ಯಪ್ ಗ್ರೂಪ್ ರಚನೆಗೆ ಕ್ರಮ.
– ಜತೆಗೆ ಸ್ಥಳೀಯವಾಗಿಯೂ ಪಕ್ಷದ ಚುನಾವಣ ತಂತ್ರ ರೂಪಿಸುವ ವಾರ್ ರೂಂಗಳೂ ಇವೆ.
ಸಮಾಜವಾದಿ ಪಕ್ಷ
– ಫೇಸ್‌ಬುಕ್, ಟ್ವಿಟರ್, ಯೂಟ್ಯೂಬ್‌ನಲ್ಲಿ ಪ್ರಚಾರ.
– ಸಣ್ಣ ವ್ಯಾನ್‌ಗಳಲ್ಲಿ ಡಿಜಿಟಲ್ ಸ್ಕ್ರೀನ್ ಅಳವಡಿಸಿ ಗ್ರಾಮೀಣ ಪ್ರದೇಶಗಳಲ್ಲಿ ಪ್ರಚಾರ.
– ಪಕ್ಷದ ಕಾರ್ಯಕರ್ತರಿಗೆ ಮತ್ತು ಮುಖಂಡರಿಗೆ ಡಿಜಿಟಲ್ ವೇದಿಕೆಗಳ ಬಳಕೆಗೆ ತರಬೇತಿ.
– ಉ.ಪ್ರ.ದ ಪ್ರತೀ ಕ್ಷೇತ್ರಗಳಲ್ಲಿ ವಾಟ್ಸ್‌ಆ್ಯಪ್ ಗ್ರೂಪ್ ರಚಿಸಿ, ಪ್ರಚಾರಕ್ಕೆ ಆದ್ಯತೆ.
ಬಿಎಸ್‌ಪಿ
– ಜಾಲತಾಣಗಳೆಂದರೆ ಮೂಗು ಮುರಿಯುತ್ತಿದ್ದ ಪಕ್ಷ ಈಗ ಅದನ್ನೂ ಅಪ್ಪಿಕೊಳ್ಳಲು ಸಿದ್ಧವಾಗಿದೆ.
– ಸದ್ಯ ಫೇಸ್‌ಬುಕ್ ಅನ್ನು ಮಾತ್ರ ನೇರ ಪ್ರಸಾರಕ್ಕೆ ಬಳಸುತ್ತಿದೆ.
– ಇತರ ಪಕ್ಷಗಳಂತೆ ಟ್ವಿಟರ್, ವಾಟ್ಸ್‌ಆ್ಯಪ್ ಬಳಕೆ ಯಲ್ಲಿ ಸದ್ಯಕ್ಕೆ ಹಿಂದುಳಿದಿದೆ.
ಕಾಂಗ್ರೆಸ್
ಉ.ಪ್ರ.ದಲ್ಲಿ ಪ್ರಿಯಾಂಕಾ ವಾದ್ರಾ ಪ್ರಚಾರದ ನೇತೃತ್ವ ವಹಿಸಿದ್ದಾರೆ. ಸೋಂಕಿನ ಹಿನ್ನೆಲೆಯಲ್ಲಿ ಮತ್ತು ಚುನಾವಣಾ ಆಯೋಗದ ಸೂಚನೆ ಹಿನ್ನೆಲೆಯಲ್ಲಿ ಎಲ್ಲ ಸಾರ್ವಜನಿಕ ರ‍್ಯಾಲಿ, ಕಾರ್ಯಕ್ರಮಗಳನ್ನು ರದ್ದುಪಡಿಸಿದ್ದಾರೆ. ಹೀಗಾಗಿ ಟ್ವಿಟರ್, ವಾಟ್ಸ್‌ಆ್ಯಪ್, ಫೇಸ್‌ಬುಕ್ ಸೇರಿದಂತೆ ಹಲವು ಜಾಲತಾಣಗಳಲ್ಲಿ ಪ್ರಚಾರ ಕೈಗೊಳ್ಳಲು ಪಕ್ಷ ಮುಂದಾಗಿದೆ. ಫೇಸ್‌ಬುಕ್‌ನಲ್ಲಿ “ಪ್ರಿಯಾಂಕಾ ಕೇ ಸಾಥ್ ಲೈವ್’ ಎಂಬ ಕಾರ್ಯಕ್ರಮವನ್ನು ಆಯೋಜಿಸುವ ಬಗ್ಗೆ ಯೋಚನೆಗಳು ನಡೆದಿವೆ.
ಆಮ್ ಆದ್ಮಿ ಪಕ್ಷ
ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ಕೂಡ ಡಿಜಿಟಲ್ ಮಾಧ್ಯಮದಲ್ಲಿ ಪ್ರಚಾರಕ್ಕೆ ಹಿಂದುಳಿದಿಲ್ಲ. ಜ. 8ರಂದು ವಾರಾಣಸಿಯಲ್ಲಿ ಯೂ ಟ್ಯೂಬ್, ಫೇಸ್‌ಬುಕ್, ಟ್ವಿಟರ್, ಇನ್‌ಸ್ಟಾಗ್ರಾಂಗಳ ಮೂಲಕ ನೇರಪ್ರಸಾರ ಮಾಡಲಾಗಿತ್ತು.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.