ವಿಡಿಯೋ: ದೋಣಿಗಳ ಮೇಲೆ ಬಿದ್ದ ಬೃಹತ್ ಬಂಡೆ: 10 ಮಂದಿ ದುರ್ಮರಣ
Team Udayavani, Jan 10, 2022, 9:15 AM IST
ಬ್ರಜಿಲಿಯಾ: ದಕ್ಷಿಣ ಅಮೆರಿಕಾ ದೇಶದ ಬ್ರೆಜಿಲ್ ನ ಸುಲ್ ಮಿನಾಸ್ ನಲ್ಲಿ ಜಲಪಾತದ ಕೆಳಗೆ ಮೋಟಾರ್ ಬೋಟ್ ಗಳ ಮೇಲೆ ಕಲ್ಲಿನ ಗೋಡೆ ಕುಸಿದು ಕನಿಷ್ಠ 10 ಜನರು ಸಾವನ್ನಪ್ಪಿದ ಘಟನೆ ಶನಿವಾರ ನಡೆದಿದೆ. ಘಟನೆಯಲ್ಲಿ 30 ಜನರು ಗಾಯಗೊಂಡಿದ್ದಾರೆ.
ಮಿನಾಸ್ ಗೆರೈಸ್ ರಾಜ್ಯದ ಜನಪ್ರಿಯ ಪ್ರವಾಸಿ ತಾಣವಾದ ಕ್ಯಾಪಿಟೋಲಿಯೊ ಕಣಿವೆಯಲ್ಲಿ ಈ ಘಟನೆ ನಡೆದಿದೆ. ಬಂಡೆಯ ಗೋಡೆಯೊಂದು ಮುರಿದು ಎರಡು ದೋಣಿಗಳ ಮೇಲೆ ಅಪ್ಪಳಿಸಿದ ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.
ಇದನ್ನೂ ಓದಿ:ಇಂದು ವಿಶ್ವ ಹಿಂದಿ ದಿನ: ವಿಶ್ವಪ್ರಿಯ ಹಿಂದಿ ಭಾಷೆಯ ಉಪೇಕ್ಷೆ ಸಲ್ಲದು
ಅಗ್ನಿಶಾಮಕ ಸಿಬ್ಬಂದಿ ಮತ್ತು ಮುಳುಗು ತಜ್ಞರು ಭಾನುವಾರ ಸರೋವರದಿಂದ ಮತ್ತೆ ಮೂರು ದೇಹಗಳನ್ನು ಹೊರತೆಗೆದಿದ್ದಾರೆ. ಸಾವಿನ ಸಂಖ್ಯೆ 10 ಕ್ಕೆ ಏರಿದೆ ಎಂದು ರಾಯಿಟರ್ಸ್ ವರದಿ ಮಾಡಿದೆ.
ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗಳಿಗೆ ಕರೆದೊಯ್ಯಲಾಗಿದೆ. ಹಲವರ ಮೂಳೆ ಮುರಿತವಾಗಿದ್ದು, ತಲೆ ಮತ್ತು ಮುಖದ ಗಾಯಗಳೊಂದಿಗೆ ಓರ್ವ ವ್ಯಕ್ತಿ ಆಸ್ಪತ್ರೆಯಲ್ಲಿ ಗಂಭೀರ ಸ್ಥಿತಿಯಲ್ಲಿದ್ದಾರೆ. ಕನಿಷ್ಠ 23 ಇತರರಿಗೆ ಸಣ್ಣಪುಟ್ಟ ಗಾಯಗಳಿಗೆ ಚಿಕಿತ್ಸೆ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
URGENTE!!! Pedras se soltam de cânion em Capitólio, em Minas, e atingem três lanchas. pic.twitter.com/784wN6HbFy
— O Tempo (@otempo) January 8, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kottigehara:ಸಿಲಿಂಡರ್ ಸ್ಫೋಟ, ಮನೆ ಸಂಪೂರ್ಣ ನೆಲಸಮ,ಕೆಲಸಕ್ಕೆ ಹೋಗಿದ್ದರಿಂದ ಮನೆಮಂದಿ ಪಾರು
TestTeam; ಆಸ್ಟ್ರೇಲಿಯಾ ಪ್ರಕಟಿಸಿದ ವರ್ಷದ ಟೆಸ್ಟ್ ತಂಡಕ್ಕೆ ಭಾರತೀಯ ನಾಯಕ; ರೋಹಿತ್ ಅಲ್ಲ
Koratagere: ರಸ್ತೆಯಲ್ಲಿ ಚರಂಡಿ ನೀರು; ಸಾಂಕ್ರಾಮಿಕ ರೋಗದ ಭೀತಿಯಲ್ಲಿ ಗ್ರಾಮಸ್ಥರು
ಸಂಸ್ಕೃತ ಕಾಲೇಜಿನ 120ರ ಸಂಭ್ರಮದಲ್ಲಿ ಹಳೆ ವಿದ್ಯಾರ್ಥಿಗಳು ಒಟ್ಟಾಗಲಿ: ವಿ| ಪ್ರಸನ್ನಾಚಾರ್ಯ
Rabakavi: ಬ್ರಹ್ಮಾನಂದ ಉತ್ಸವ; ಗಮನ ಸೆಳೆದ ರೊಟ್ಟಿ ಜಾತ್ರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.