ಬಾಲಕಿಯ ಗ್ಯಾಂಗ್ ರೇಪ್ ನಡೆಸಿ ಬ್ಲಾಕ್ ಮೇಲ್..: ಆಗಸ್ಟ್ ನಲ್ಲಿ ನಡೆದ ಘಟನೆ ತಡವಾಗಿ ಬೆಳಕಿಗೆ
Team Udayavani, Jan 10, 2022, 11:51 AM IST
ಜಿಂದ್: 16 ವರ್ಷದ ಪ್ರಾಯದ ಬಾಲಕಿಯನ್ನು ಸಾಮೂಹಿಕ ಅತ್ಯಾಚಾರ ನಡೆಸಿ, ಕೃತ್ಯದ ವಿಡಿಯೋ ಶೂಟ್ ನಡೆಸಿ ಬ್ಲಾಕ್ ಮೇಲ್ ನಡೆಸಿದ ಘಟನೆ ಹರ್ಯಾಣ ರಾಜ್ಯದ ಜಿಂದ್ ಜಿಲ್ಲೆಯಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ರವಿವಾರ ತಿಳಿಸಿದ್ದಾರೆ.
ಈ ಘಟನೆ ಜಿಂದ್ ಜಿಲ್ಲೆಯ ಗರ್ಹಿ ಪೊಲೀಸ್ ಠಾಣಾ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಈ ಘಟನೆ ನಡೆದಿದೆ. ಕಳೆದ ವರ್ಷದ ಆಗಸ್ಟ್ 5ರಂದು ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
11ನೇ ತರಗತಿಯ ವಿದ್ಯಾರ್ಥಿನಿಯು ಮನೆಯ ಪಕ್ಕದ ಮಹಿಳೆಯನ್ನು ಭೇಟಿಯಾಗಲೆಂದು ತೆರಳಿದ್ದಳು. ಈ ವೇಳೆ ಇಬ್ಬರು ಆಕೆಯನ್ನು ತಡೆದು ಅತ್ಯಾಚಾರ ನಡೆಸಿದ್ದಾರೆ. ಅದಲ್ಲದೆ ವಿಡಿಯೋ ಚಿತ್ರೀಕರಣ ನಡೆಸಿದ್ದಾರೆ ಎಂದು ಪೊಲೀಸರು ಹೇಳಿದರು.
ವಿಚಾರವನ್ನು ಯಾರಿಗಾದರೂ ತಿಳಿಸಿದರೆ ವಿಡಿಯೋವನ್ನು ವೈರಲ್ ಮಾಡುವುದಾಗಿ ಮತ್ತು ಹಣಕ್ಕಾಗಿ ಬಾಲಕಿಯ ಬಳಿ ಆರೋಪಿಗಳು ಬ್ಲಾಕ್ ಮೇಲ್ ಮಾಡಿದ್ದಾರೆ.
ಇದನ್ನೂ ಓದಿ:ವಿಡಿಯೋ: ದೋಣಿಗಳ ಮೇಲೆ ಬಿದ್ದ ಬೃಹತ್ ಬಂಡೆ: 10 ಮಂದಿ ದುರ್ಮರಣ
ಆರೋಪಿಗಳ ಸತತ ಕಾಟದಿಂದ ಬೇಸತ್ತ ಬಾಲಕಿ ಕೊನೆಗೆ ಮನೆಯಲ್ಲಿ ಈ ವಿಚಾರವನ್ನು ತಿಳಿಸಿದ್ದಾಳೆ. ಶನಿವಾರ ರಾತ್ರಿ ಬಾಲಕಿಯ ತಾಯಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಪಕ್ಕದ ಮನೆಯ ಮಹಿಳೆ ಸೇರಿದಂತೆ ಮೂವರು ಆರೋಪಿಗಳ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆ ಮತ್ತು ಇತರ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಈ ವಿಷಯದ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
MUST WATCH
ಹೊಸ ಸೇರ್ಪಡೆ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.