ಕಾಂಗ್ರೆಸ್ ನಾಯಕರು ಜನರ ಬದುಕಿನ ಜತೆ ಚೆಲ್ಲಾಟ ಆಡುತ್ತಿದ್ದಾರೆ; ಆರಗ ಜ್ಞಾನೇಂದ್ರ
ಕಾಂಗ್ರೆಸ್ ನಾಯಕರ ಉದ್ದೇಶ ನೀರಿನ ಮೇಲೆ ರಾಜಕೀಯ ಮಾಡುವುದು
Team Udayavani, Jan 10, 2022, 3:45 PM IST
ಬೆಂಗಳೂರು : ಕೊವಿಡ್ ಸೋಂಕಿನ ನಡುವೆಯೂ ಪಾದಯಾತ್ರೆ ಯನ್ನು ಕೈಗೊಳ್ಳುವುದರ ಮೂಲಕ, ಕಾಂಗ್ರೆಸ್ ನಾಯಕರು, ಜನರ ಬದುಕಿನ ಜತೆ ಚೆಲ್ಲಾಟ ಆಡುತ್ತಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ರವರು, ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರೋನಾ ನಿಯಂತ್ರಣ ಕಾಯಿದೆಯನ್ನು ಉಲ್ಲಂಘಸಿದವರ ವಿರುಧ್ದ, ರಾಮನಗರ ಜಿಲ್ಲಾಡಳಿತ ಕ್ರಮ ತೆಗೆದುಕೊಳ್ಳುತ್ತಿದೆ. ಕಾಂಗ್ರೆಸ್ ನಾಯಕರ ಉದ್ದೇಶ ನೀರಿನ ಮೇಲೆ ರಾಜಕೀಯ ಮಾಡುವುದು, ಆದರೆ ನಮ್ಮ ಆತಂಕ ಇರುವುದು ಸಾರ್ವಜನಿಕರ ಆರೋಗ್ಯ ಕಾಪಾಡಿಕೊಳ್ಳುವುದಾಗಿದೆ ಎಂದರು.
ಕೋವಿಡ್ ಸೋಂಕು ಉಲ್ಬಣಗೊಂಡು ಜನತೆ ಸಂಕಷ್ಟಕ್ಕೆ ಒಳಗಾದರೆ, ಕಾಂಗ್ರೆಸ್ ನಾಯಕರು ಹೊಣೆ ಹೊರಬೇಕಾದೀತು ಎಂದು ಎಚ್ಚರಿಸಿದ ಸಚಿವರು” ಕಾಂಗ್ರೆಸ್ ನಡೆಗೆ ನಾಡಿನ ಜನತೆಯೂ ಅಸಮಾಧಾನ ಗೊಂಡಿದ್ದಾರೆ” ಎಂದು ತಿಳಿಸಿದರು.
“ಕಾಂಗ್ರೆಸ್ ನಾಯಕರ ನಡವಳಿಕೆ ಅತ್ಯಂತ ಹೊಣೆಗೇಡಿತನದ್ದು. ಶಾಂತಿ ಹಾಗೂ ಕಾನೂನು ಸುವ್ಯವಸ್ಥೆಯನ್ನು ಜಿಲ್ಲಾಡಳಿತ ನಿಭಾಯಿಸುತ್ತಿದೆ ಎಂದ ಸಚಿವರು ಕಾಂಗ್ರೆಸ್. ನಾಯಕರ ವಿರುದ್ಧ ಎಫ್ಐಆರ್ ದಾಖಲಾಗಿದೆ, ಅವರು ನ್ಯಾಯಾಲಯದಲ್ಲಿ ಉತ್ತರಿಸಲಿ ಎಂದು ತಿರುಗೇಟು ನೀಡಿದ್ದಾರೆ.
ನೀರಿನ ಮೇಲೆ ರಾಜಕೀಯ ಮಾಡಲು ಹೊರಟಿದ್ದಾರೆ, ಆದರೆ ಜನತೆ ಬುದ್ದಿವಂತರು, ಇವರ ನಾಟಕವನ್ನು ಅರ್ಥ ಮಾಡಿಕೊಂಡಿದ್ದಾರೆ. ಮೇಕೆದಾಟು ಯೋಜನೆ ವಿಷಯದಲ್ಲಿ ಕಾಂಗ್ರೆಸ್ ನಾಯಕರು ಅಧಿಕಾರದಲ್ಲಿದ್ದಾಗ ನಿರ್ಲಕ್ಷ್ಯ ವಹಿಸಿದ್ದಾರೆ, ಈಗ ಮುಂದಿನ ಚುನಾವಣೆ ದೃಷ್ಟಿಯಿಂದ ಪಾದಯಾತ್ರೆ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ, ಎಂದು ಆರೋಪಿಸಿದರು.
ಮೇಕೆದಾಟು ಯೋಜನೆಯನ್ನು ಅನುಷ್ಟಾನ ಗಳಿಸಲು ನಮ್ಮ ಸರಕಾರ ಬದ್ದ ಯಾವುದೇ ಸಂಶಯ ಬೇಡ, ಎಂದ ಸಚಿವರು ವಿವಾದ ಪ್ರಸ್ತುತ ಸರ್ವೋಚ್ಚ ನ್ಯಾಯಾಲಯದ ಮುಂದಿದೆ. ಕಾಂಗ್ರೆಸ್ ನಾಯಕರು ಅಧಿಕಾರ ದಲ್ಲಿದ್ದಾಗ, ಐದು ವರ್ಷದಲ್ಲಿ ಕೇವಲ ಡಿ ಪಿ ಆರ್ ಸಲ್ಲಿಸಿದ್ದು ಬಿಟ್ಟರೆ, ಬೇರೆ ಏನೂ ಮಾಡಲಿಲ್ಲ ಎಂದು, ಟೀಕಿಸಿದರು.
ಕೋವಿಡ್ ನಿಬಂಧನೆಗಳನ್ನು ಪಾಲಿಸುವುದಿಲ್ಲ ಬೇಕಾದರೆ ಜೈಲಿಗೆ ಹಾಕಿ ಎಂದು ಸವಾಲು ಎಸೆದಿದ್ದಾರೆ ಇದು ಅವರ ಉದ್ಧಟತನ ತೋರಿಸುತ್ತದೆ. ಕಾಂಗ್ರೆಸ್ ನಾಯಕರ ಬಗ್ಗೆ ಜನ ಸಾಮಾನ್ಯರು ಜಿಗುಪ್ಸೆಗೊಳ್ಳುತ್ತಿದ್ದಾರೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್?
Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?
BJP: ಇಂದು ಅಶೋಕ್ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್ ಕಮಿಟಿ ಸಭೆ
ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂ ಸಿದ್ದರಾಮಯ್ಯಗೆ ಪತ್ರ
Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್ನ ಕೃಷ್ಣದಾಸ್ ಸೆರೆ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Sullia: ರಬ್ಬರ್ ಸ್ಮೋಕ್ ಹೌಸ್ಗೆ ಬೆಂಕಿ
Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ
Mosque survey: ಸಂಭಲ್ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.