ಯುವ ನ್ಯಾಯವಾದಿಗಳಿಗೆ ಸವಲತ್ತು : ಮೋತಕಪಳ್ಳಿ
Team Udayavani, Jan 10, 2022, 9:01 PM IST
ಕಲಬುರಗಿ: ಕೋವಿಡ್-19 ಸಾಂಕ್ರಾಮಿಕ ರೋಗದ ಸಂದರ್ಭದಲ್ಲಿ ಸಂಕಷ್ಟದಲ್ಲಿರುವ ವಕೀಲರಿಗೆ ಹೆಚ್ಚಿನ ರೀತಿಯಲ್ಲಿ ಆರ್ಥಿಕ ಸಹಾಯ ಒದಗಿಸುವುದರ ಜತೆಗೆ ಕಲ್ಯಾಣ ಕರ್ನಾಟಕ ಪ್ರದೇಶದಿಂದ ನೋಂದಾಯಿತರಾಗುವ ನವ ವಕೀಲರಿಗೆ 371(ಜೆ) ವಿಧಿ ಅನ್ವಯ ಇನ್ನು ಹೆಚ್ಚಿನ ಸಹಾಯ, ಸವಲತ್ತುಗಳ ದೊರಕುವ ನಿಟ್ಟಿನಲ್ಲಿ ಆದ್ಯತೆ ನೀಡುವುದಾಗಿ ಕರ್ನಾಟಕ ರಾಜ್ಯ ವಕೀಲರ ಪರಿಷತ್ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಕಲಬುರಗಿಯ ಕಾಶೀನಾಥ ಮೋತಕಪಳ್ಳಿ ಹೇಳಿದರು.
ವಕೀಲರ ಪರಿಷತ್‌ನ ಕೇಂದ್ರ ಕಚೇರಿ ಬೆಂಗಳೂರಿನಲ್ಲಿ ಅಧ್ಯಕ್ಷರಾಗಿ ಆಯ್ಕೆಯಾದ ನಂತರ ಸನ್ಮಾನಿತಗೊಂಡು ಮಾತನಾಡಿದ ಅವರು, ಗ್ರಾಮೀಣ ಭಾಗದಿಂದ ಬಂದು ರಾಜ್ಯಾಧ್ಯಕ್ಷ ಸ್ಥಾನ ವಹಿಸಿಕೊಂಡಿರುವುದು ಸಂತಸ ತಂದಿದೆ. ತಮ್ಮ ಅವಧಿಯುದ್ದಕ್ಕೂ ಗಾಮೀಣ ಪ್ರದೇಶದಿಂದ ಬಂದು ನೂತನವಾಗಿ ವಕೀಲ ವೃತ್ತಿ ನಡೆಸುವವರಿಗೆ ಆರ್ಥಿಕ ಸಹಾಯವನ್ನು ಒದಗಿಸುವುದು, ವಕೀಲರಿಗೆ ಮೂಲಭೂತ ಸೌಕರ್ಯಗಳಾದ ಗ್ರಂಥಾಲಯ, ನೂತನ ತಂತ್ರಜ್ಞಾನ, ಗಣಕಯಂತ್ರಗಳನ್ನು ಒದಗಿಸುವುದಕ್ಕೆ ಹೆಚ್ಚಿನ ಆಸಕ್ತಿ ವಹಿಸುವುದಾಗಿ ಭರವಸೆ ನೀಡಿದರು.
ಉಪಾಧ್ಯಕ್ಷರಾಗಿ ಆಯ್ಕೆಯಾಗಿರುವ ಮೈಸೂರಿನ ಚಂದ್ರಮೌಳಿ ಬಿ ಆರ್. ಮಾತನಾಡಿದರು. ಭಾರತೀಯ ವಕೀಲರ ಪರಿಷತ್ ಸದಸ್ಯ, ಕೋ-ಛೇರಮನ್ ಆರ್. ಸದಾಶಿವರೆಡ್ಡಿ ಮತ್ತು ಪರಿಷತ್‌ನ ಸದಸ್ಯರು ಶುಭಾಶಯ ಕೋರಿದರು. ನಿರ್ಗಮಿತ ಅಧ್ಯಕ್ಷ ಶ್ರೀನಿವಾಸ ಬಾಬು ಎಲ್., ಉಪಾಧ್ಯಕ್ಷ ಕೆ. ಕಲ್ಲೇಶ್ವರ ತುಕಾರಾಮ ನೂತನ ಅಧ್ಯಕ್ಷರಿಗೆ ಹಾಗೂ ಉಪಾಧ್ಯಕ್ಷರಿಗೆ ಅಧಿ ಕಾರ ಹಸ್ತಾಂತರಿಸಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf issue: ರೈತರ ಜಮೀನು ಪಡೆಯಲು ಬಿಡುವುದಿಲ್ಲ: ಬಿಜೆಪಿ ಗುಡುಗು
Kalaburagi: ಪುನರ್ ವಿಂಗಡನೆ ಮೂಲಕ ರಾಜ್ಯಕ್ಕೆ ಅನ್ಯಾಯ ಮಾಡುವ ಸಂಚು: ಪ್ರಿಯಾಂಕ್ ಖರ್ಗೆ
Waqf Notice Issue: ಬಿಜೆಪಿ- ಕಾಂಗ್ರೆಸ್ ನಾಯಕರಿಂದ ರಾಜಕೀಯ ವಾಕ್ಸಮರ
Kalaburagi: ಮಸೀದಿಗಳು ರಾಜ್ಯ ಸರ್ಕಾರವನ್ನು ಆಳುತ್ತಿವೆ: ಛಲವಾದಿ ನಾರಾಯಣಸ್ವಾಮಿ ಆಕ್ರೋಶ
Chittapura: ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದ ಕಾರು… ಚಾಲಕ ಮೃತ್ಯು, ಇಬ್ಬರಿಗೆ ಗಾಯ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.