ಭಾಷಾ ಸಾಮರಸ್ಯ ಮೈಗೂಡಿಸಿಕೊಳ್ಳಲು ಸಲಹೆ
Team Udayavani, Jan 11, 2022, 12:10 PM IST
ಜೇವರ್ಗಿ: ಯಾವುದೇ ಭಾಷೆ ಮೇಲು- ಕೀಳಲ್ಲ. ಪ್ರತಿಯೊಂದು ಭಾಷೆಗೆ ತನ್ನದೇ ಆದ ಮಹತ್ವವಿದೆ. ಮಾತೃಭಾಷೆಯನ್ನು ಹೃದಯಾಂತರಾಳದಿಂದ ಪ್ರೀತಿಸಿ, ಅನ್ಯ ಭಾಷೆಗಳನ್ನು ಗೌರವಿಸಬೇಕು. ಇದರಿಂದ ಭಾಷಾ ತಾರತಮ್ಯ ನಿವಾರಣೆಯಾಗಲು ಸಾಧ್ಯವಿದೆ. ಎಲ್ಲ ಭಾಷೆಗಳನ್ನು ಗೌರವಿಸುವ ಭಾಷಾ ಸಾಮರಸ್ಯ ಮೈಗೂಡಿಸಿಕೊಳ್ಳುವುದು ಪ್ರಸ್ತುತ ಸಂದರ್ಭದಲ್ಲಿ ಅಗತ್ಯವಾಗಿದೆ ಎಂದು ಕಲಬುರಗಿ ನಗರದ ಜೇವರ್ಗಿ ಕಾಲೋನಿಯ ಸರ್ಕಾರಿ ಪಿಯು ಕಾಲೇಜಿನ ಹಿಂದಿ ಉಪನ್ಯಾಸಕ ಜಮೀಲ್ ಅಹಮ್ಮದ್ ಹೇಳಿದರು.
ಪಟ್ಟಣದ ಬಸವೇಶ್ವರ ವೃತ್ತದ ಸಮೀಪವಿರುವ ಬಾಲಕರ ಸರ್ಕಾರಿ ಪಿಯು ಕಾಲೇಜಿನಲ್ಲಿ ಎನ್‌ಎಸ್‌ಎಸ್ ಘಟಕದ ಸಹಯೋಗದೊಂದಿಗೆ ಹಿಂದಿ ವಿಭಾಗದ ವತಿಯಿಂದ ಸೋಮವಾರ ಜರುಗಿದ “ವಿಶ್ವ ಹಿಂದಿ ದಿನಾಚರಣೆ’ಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
1975ರ ಜನವರಿ 10ರಂದು ನಾಗಪುರನಲ್ಲಿ ಹಿಂದಿ ಭಾಷೆಗೆ ಸಂಬಂಧಿ ಸಿದಂತೆ ಬೃಹತ ಸಮ್ಮೇಳನ ಜರುಗಿತು. ಹಿಂದಿ ಭಾಷೆಯ ಮಹತ್ವವನ್ನು ಸಾರುವ ದಿಕ್ಸೂಚಿ ಸಮ್ಮೇಳನ ಇದಾಗಿದೆ. ಅದರ ಸವಿನೆನಪಿಗಾಗಿ ಪ್ರತಿವರ್ಷ ಜನವರಿ 10ರಂದು “ವಿಶ್ವ ಹಿಂದಿ ದಿನವನ್ನು ಆಚರಿಸಲಾಗುತ್ತದೆ. ಹಿಂದಿ ಭಾಷೆಯು ರಾಷ್ಟಭಾಷೆಯಾಗಿದ್ದು, ಸರಳ ಹಾಗೂ ಸುಂದರವಾಗಿದೆ. ಇದು ಗ್ರಾಮೀಣ ಪ್ರದೇಶದ ಜನಸಾಮಾನ್ಯರು ಒಳಗೊಂಡಂತೆ ಎಲ್ಲರಿಗೂ ಅರ್ಥವಾಗುವ, ಮಾತನಾಡುವ ಭಾಷೆಯಾಗಿದ್ದು, ಇದು ದೇಶದ ಉದ್ದಗಲಕ್ಕೂ ವ್ಯಾಪಿಸಿದೆ. ಹಿಂದಿ ಭಾಷೆಯು ದೇಶದ ಸಂಸ್ಕೃತಿ, ಪರಂಪರೆಯ ರಾಯಭಾರಿಯಾಗಿ ಪ್ರತಿನಿಧಿಸುತ್ತದೆ ಎಂದರು.
ಪ್ರಾಚಾರ್ಯ ಮೊಹಮ್ಮದ್ ಅಲ್ಲಾ ಉದ್ದೀನ್ ಸಾಗರ, ಎನ್.ಎಸ್. ಎಸ್ ಅದಿಕಾರಿ ಎಚ್.ಬಿ.ಪಾಟೀಲ, ಉಪನ್ಯಾಸಕರಾದ ಶರಣಮ್ಮ ಭಾವಿಕಟ್ಟಿ, ರವೀಂದ್ರಕುಮಾರ ಬಟಗೇರಿ, ಶಂಕ್ರೆಪ್ಪ ಹೊಸದೊಡ್ಡಿ, ಮಂಜುನಾಥ ಎ.ಎಂ., ಪ್ರಕಾಶ ಪಾಟೀಲ, ಪ್ರ.ದ.ಸ ನೇಸರ ಎಂ.ಬೀಳಗಿ, ಅತಿಥಿ ಉಪನ್ಯಾಸಕರಾದ ರಂಜಿತಾ ಠಾಕೂರ್, ಲಾಡ್ಲೆಮಶಾಕ್ ಸೇರಿದಂತೆ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
Wadi: ಡಾ.ಅಂಬೇಡ್ಕರ್ ಕುರಿತು ಆಕ್ಷೇಪಾರ್ಹ ಹೇಳಿಕೆ; ಬೃಹತ್ ಪ್ರತಿಭಟನೆ, ವಾಡಿ ಬಂದ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.