ದಾರಿ ಕಾಣದೇ ಹೆದ್ದಾರಿಯಲ್ಲೇನಿಂತ ಕೊಚ್ಚೆ ನೀರು!


Team Udayavani, Jan 11, 2022, 1:24 PM IST

ದಾರಿ ಕಾಣದೇ ಹೆದ್ದಾರಿಯಲ್ಲೇನಿಂತ ಕೊಚ್ಚೆ ನೀರು!

ರಾಯಚೂರು: ತಾಲೂಕು ಕೇಂದ್ರವಾಗಬೇಕು ಎಂಬ ಮಹತ್ವದ ಬೇಡಿಕೆಯುಳ್ಳ ಹೋಬಳಿ ಕೇಂದ್ರ ಗಬ್ಬೂರಿನಲ್ಲಿ ಸಮಸ್ಯೆಯೊಂದು ಬಗೆ ಹರಿಯದೆ ಉಳಿದಿದೆ.

ರಾಯಚೂರು-ಕಲಬುರಗಿಗೆ ಸಂಪರ್ಕ ಕಲ್ಪಿಸುವ ಮುಖ್ಯ ಹೆದ್ದಾರಿಯಲ್ಲೇ ಚರಂಡಿ ನೀರು ಶೇಖರಣೆಯಾಗುತ್ತಿದ್ದು, ಸಾರ್ವಜನಿಕರಿಗೆ ಕಂಟಕವಾಗಿ ಪರಿಣಮಿಸಿದೆ. ದೇವದುರ್ಗ ಕ್ಷೇತ್ರಕ್ಕೆ ಒಳಪಡುವ ಈ ಊರಿನ ಸಮಸ್ಯೆ ಈಗ ಎಲ್ಲರ ಗಮನ ಸೆಳೆಯುತ್ತಿದೆ. ಮೇಲ್ನೋಟಕ್ಕೆ ಇದು ಸಂಪೂರ್ಣ ಅವೈಜ್ಞಾನಿಕ ಕಾಮಗಾರಿಯಿಂದಾದ ಸಮಸ್ಯೆ. ಗ್ರಾಪಂ ಕೇಂದ್ರವಾಗಿರುವ ಈ ಊರಿನಲ್ಲಿ ಸಮಸ್ಯೆಯೊಂದು ತಿಂಗಳಾನುಗಟ್ಟಲೇ ಜೀವಂತವಾಗಿರುವುದು ವಿಪರ್ಯಾಸ. ಇದು ರಾಜ್ಯ ಹೆದ್ದಾರಿಯಾಗಿದ್ದು, ನಿತ್ಯ ಸಾವಿರಾರು ವಾಹನಗಳು ಸಂಚರಿಸುವುದರಿಂದ ಸಮಸ್ಯೆ ತೀವ್ರತೆ ಹೆಚ್ಚಾಗುತ್ತಿದೆ.

ಏನಿದು ಸಮಸ್ಯೆ?

ಸುಮಾರು 15 ವರ್ಷಗಳ ಹಿಂದೆ ಇಲ್ಲಿ ಚರಂಡಿ ನಿರ್ಮಿಸಲಾಗಿತ್ತು. ಆಗ ಈ ಊರು ನಿರೀಕ್ಷಿತ ಮಟ್ಟದಲ್ಲಿ ಬೆಳೆದಿರಲಿಲ್ಲ. ಈಗ ತಾಲೂಕು ಕೇಂದ್ರವಾಗುವ ಮಟ್ಟಿಗೆ ಬೆಳೆದಿದ್ದು, ಜನಸಂಖ್ಯೆ, ಗ್ರಾಮದ ವಿಸ್ತಾರ ಕೂಡ ಹೆಚ್ಚಾಗಿದೆ. ಖಾಸಗಿಯವರ ಜಮೀನಿಗೆ ಚರಂಡಿ ಕಾಮಗಾರಿ ಕೊನೆಗಾಣಿಸಲಾಗಿತ್ತು. ಆದರೆ, ಈಗ ಆ ಜಮೀನಿನ ಮಾಲೀಕರು ಚರಂಡಿ ನೀರು ಹೊಲಕ್ಕೆ ಹರಿಸದಂತೆ ಆಕ್ಷೇಪ ವ್ಯಕ್ತಪಡಿಸಿದ್ದು, ಅಡ್ಡಗಟ್ಟಿದ್ದಾರೆ. ಬರೀ ಮಳೆ ನೀರಾದರೆ ಜಮೀನಿಗೆ ಹರಿಸಲು ಅಭ್ಯಂತರವಿಲ್ಲ. ಆದರೆ, ಕೊಚ್ಚೆ ನೀರು ಜಮೀನಿಗೆ ಬಿಟ್ಟುಕೊಳ್ಳುವುದು ಹೇಗೆ ಎಂಬುದು ಜಮೀನಿನ ಮಾಲೀಕರ ಆಕ್ಷೇಪ. ಅಲ್ಲದೇ, ಇದೇ ಸ್ಥಳದಲ್ಲೇ ಕಾಲುವೆ ಹಾದು ಹೋಗಿದ್ದು, ಕಾಲುವೆಗೆ ಹರಿಸಿದರೆ ರೈತರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಶೀಘ್ರ ಇತ್ಯರ್ಥಗೊಳ್ಳಬೇಕಿದೆ

ಸಮಸ್ಯೆ ದಿನೇ-ದಿನೇ ಜಟಿಲಗೊಳ್ಳುತ್ತ ಸಾಗುತ್ತಿದೆ. ಗ್ರಾಮಸ್ಥರು ಈ ಸಮಸ್ಯೆ ಬಗ್ಗೆ ಈಗಾಗಲೇ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳಿಗೆ ತಿಳಿಸಿದ್ದಾರೆ. ಅಧಿಕಾರಿಗಳು ಕೂಡ ಸ್ಥಳ ಪರಿಶೀಲಿಸಿದ್ದು, ಮುಂದಿನ ಕ್ರಮಗಳ ಭರವಸೆ ನೀಡಿದ್ದಾರೆ. ಆದರೆ, ತಿಂಗಳುಗಳೇ ಕಳೆದರೂ ಯಾವೊಂದು ಬೆಳವಣಿಗೆ ಕಂಡು ಬರುತ್ತಿಲ್ಲ. ಈ ರಸ್ತೆ ಮುಖ್ಯ ವಾಣಿಜ್ಯಕ ತಾಣವಾಗಿದ್ದು, ಹೋಟೆಲ್‌ಗ‌ಳು, ವಾಣಿಜ್ಯ ಮಳಿಗೆಗಳು, ಬೃಹತ್‌ ದೇವಸ್ಥಾನ, ಮನೆಗಳ ಮಾಲೀಕರು ಇದೇ ಚರಂಡಿಗೆ ನೀರು ಹರಿಸುತ್ತಿದ್ದಾರೆ. ಎಲ್ಲ ನೀರು ರಸ್ತೆಯಲ್ಲೇ ನಿಂತ ಕಾರಣ ಫುಟಪಾತ್‌ ಕೂಡ ಮುಳುಗಿ ಓಡಾಡುವುದು ಕಷ್ಟವಾಗುತ್ತಿದೆ. ಕೊಚ್ಚೆ ನೀರಿನಲ್ಲಿ ಜನ ವ್ಯಾಪಾರ ಮಾಡಲು ಬಾರದ ಕಾರಣ ವರ್ತಕರಿಗೆ ನಷ್ಟವಾಗುತ್ತಿದೆ. ಹೆದ್ದಾರಿಯೆಲ್ಲ ಹಾಳಾಗಿ ಹೋಗಿದೆ. ಈ ಮಾರ್ಗದಿಂದ 3-4 ಕಿ.ಮೀ. ದೂರದಲ್ಲಿ ಹಳ್ಳ ಹರಿಯುತ್ತಿದ್ದು, ಅಲ್ಲಿಗೆ ಸಂಪರ್ಕ ಕಲ್ಪಿಸಲಿ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಆದರೆ, ಅದು ಎಷ್ಟರ ಮಟ್ಟಿಗೆ ಸಾಧ್ಯವಾಗಲಿದೆಯೋ ನೊಡಬೇಕಿದೆ.

ರಾಜಕೀಯ ಮೇಲಾಟದ ಗುಮಾನಿ

ಸಮಸ್ಯೆ ತೀವ್ರತೆ ಹೆಚ್ಚಿದಂತೆಲ್ಲ ಜನ ನಾನಾ ರೀತಿಯಲ್ಲಿ ವ್ಯಾಖ್ಯಾನ ಮಾಡುತ್ತಿದ್ದು, ಈಗ ರಾಜಕೀಯ ಮೇಲಾಟದ ಬಣ್ಣವನ್ನು ಬಳಿಯಲಾಗುತ್ತಿದೆ. ಕಳೆದ ಕೆಲ ತಿಂಗಳಿಂದ ಗಬ್ಬೂರು ರಾಜಕೀಯವಾಗಿ ಸದ್ದು ಮಾಡುತ್ತಿದೆ. ದೇವದುರ್ಗ ತಾಲೂಕಿನ ಅರಕೇರಾ ತಾಲೂಕು ಘೋಷಣೆಯಾಗಿರುವುದಕ್ಕೆ ಗಬ್ಬೂರು ಗ್ರಾಮಸ್ಥರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಗಬ್ಬೂರು ಎಲ್ಲ ರೀತಿಯಲ್ಲಿಯೂ ಅರ್ಹತೆ ಹೊಂದಿದ್ದು, ತಾಲೂಕು ಕೇಂದ್ರ ಮಾಡಬೇಕು ಎಂಬ ಹೋರಾಟ ಇಂದಿಗೂ ಜೀವಂತವಾಗಿದೆ. ಈ ಸಮಸ್ಯೆ ಗ್ರಾಮದಲ್ಲಿ ರಾಜಕೀಯ ಭಿನ್ನಾಭಿಪ್ರಾಯಗಳಿಗೂ ಕಾರಣವಾಗುತ್ತಿದೆ.

ಮುಖ್ಯರಸ್ತೆಯಲ್ಲಿ ಚರಂಡಿ ನಿಂತಿದ್ದು, ಅದಕ್ಕೆ ಸೂಕ್ತ ದಾರಿ ಮಾಡಲು ಈಗಾಗಲೇ ಕ್ರಮ ಕೈಗೊಳ್ಳಲಾಗುತ್ತಿದೆ. ತಹಶೀಲ್ದಾರ್‌, ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಬಂದು ಸ್ಥಳ ಪರಿಶೀಲನೆ ನಡೆಸಿದ್ದಾರೆ. ಚರಂಡಿ ನಿರ್ಮಾಣಕ್ಕೆ ಸ್ಥಳ ಸಮೀಕ್ಷೆ ಕೂಡ ಮಾಡಲಾಗಿದೆ. ಈಗ ಚರಂಡಿ ನೀರು ಹರಿಸಲು ಕೆಲವರ ವಿರೋಧ ವ್ಯಕ್ತವಾಗಿದ್ದರಿಂದ ಸಮಸ್ಯೆಯಾಗಿದೆ. – ಶಿವಕುಮಾರ್‌, ಪ್ರಭಾರ ಪಿಡಿಒ, ಗಬ್ಬೂರು

ತಿಂಗಳುಗಳೇ ಕಳೆದರೂ ಚರಂಡಿ ನೀರಿನ ಸಮಸ್ಯೆಗೆ ಪರಿಹಾರ ಸೂಚಿಸುತ್ತಿಲ್ಲ. ಸಂಬಂಧಪಟ್ಟ ಎಲ್ಲರ ಗಮನಕ್ಕೆ ತರಲಾಗಿದೆ. ಈ ನೀರಿನಲ್ಲಿ ಸ್ಥಳೀಯ ವ್ಯಾಪಾರಿಗಳಿಗೆ, ಪ್ರಯಾಣಿಕರಿಗೆ ತುಂಬಾ ತೊಂದರೆಯಾಗಿದೆ. ವಾತಾವರಣ ಸಂಪೂರ್ಣ ಹಾಳಾಗಿದೆ. ಒಬ್ಬರನ್ನೊಬ್ಬರು ದೂರುವುದಕ್ಕಿಂತ ಸಮಸ್ಯೆ ಹೇಗೆ ನಿವಾರಿಸಬೇಕು ಎಂಬ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳಬೇಕು. -ಶಿವಪುತ್ರಪ್ಪಗೌಡ, ಸ್ಥಳೀಯರು

ಟಾಪ್ ನ್ಯೂಸ್

Waqf; Donated property is different, writing the property to the Waqf Board is different: C.T. Ravi

Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್‌ ಬೋರ್ಡ್‌ ಗೆ ಬರೆಯುವುದು ಬೇರೆ: ಸಿ.ಟಿ ರವಿ

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

75

IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

ip

‌IPL Auction: ಕೇನ್‌, ಮಯಾಂಕ್‌, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ

Andaman: ಮೀನುಗಾರಿಕಾ ದೋಣಿಯಲ್ಲಿದ್ದ 5 ಟನ್ ಮಾದಕ ವಸ್ತು ವಶಕ್ಕೆ ಪಡೆದ ಕೋಸ್ಟ್ ಗಾರ್ಡ್

Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-raichur

Raichur: ರಾತೋ ರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ

1-wewqewq

Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

ಮಂತ್ರಾಲಯ ಶ್ರೀಗಳಿಂದ ತುಂಗಭದ್ರ ನದಿಯಲ್ಲಿ ದಂಡೋದಕ ಸ್ನಾನ

Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ

5-raichur

Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

3

Gurupura: ನಾಡಕಚೇರಿ ಕಟ್ಟಡ ಉದ್ಘಾಟನೆಗೆ ಸಿದ್ಧ

KMC

Health Card: ಮಣಿಪಾಲ ಆರೋಗ್ಯಕಾರ್ಡ್ ನೋಂದಾವಣೆಗೆ ಐದು ದಿನ ಬಾಕಿ: ನ.30 ಕೊನೆಯ ದಿನ 

2

Puttur: ಚೆನ್ನಾಗಿ ಮಳೆ ಬಂದರೂ ಕುಸಿದ ಅಂತರ್ಜಲ ಮಟ್ಟ

ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್‌

ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್‌

Waqf; Donated property is different, writing the property to the Waqf Board is different: C.T. Ravi

Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್‌ ಬೋರ್ಡ್‌ ಗೆ ಬರೆಯುವುದು ಬೇರೆ: ಸಿ.ಟಿ ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.