ಅಂಗನವಾಡಿಯಲ್ಲೇ ಎಲ್ಕೆಜಿ-ಯುಕೆಜಿ ಆರಂಭಿಸಿ
Team Udayavani, Jan 11, 2022, 9:51 PM IST
ರಾಯಚೂರು: ಅಂಗನವಾಡಿ ಕೇಂದ್ರಗಳನ್ನು ಎಲ್ಕೆಜಿ, ಯುಕೆಜಿ ಕೇಂದ್ರಗಳಾಗಿ ಪರಿವರ್ತಿಸಿ, ನೌಕರರಿಗೆ ಸೇವಾ ಜ್ಯೇಷ್ಠತಾ ಆಧಾರದ ಮೇಲೆ ವೇತನ ಪದ್ಧತಿ ಜಾರಿಗೊಳಿಸುವುದು ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದಿಂದ ಡಿಸಿ ಕಚೇರಿ ಎದುರಿನ ಉದ್ಯಾನದಲ್ಲಿ ಪ್ರತಿಭಟಿಸಿದರು.
ಬಳಿಕ ಜಿಲ್ಲಾ ಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದ ಪ್ರತಿಭಟನಾಕಾರರು, ಕಾರ್ಯಕರ್ತೆಯರು ಎಸ್ಸೆಸ್ಸೆಲ್ಸಿ, ಪದವೀಧರರಾಗಿದ್ದು, ಅವರಿಗೆ ತರಬೇತಿಯನ್ನು ಕೊಟ್ಟು, ಅಂಗನವಾಡಿ ಕೇಂದ್ರಗಳಲ್ಲಿಯೇ ಎಲ್ಕೆಜಿ, ಯುಕೆಜಿ ಆರಂಭಿಸಬೇಕು. ಹೊಸ ಶಿಕ್ಷಣ ನೀತಿ ಕೈಬಿಡಬೇಕು. ಅಂಗನವಾಡಿ ಕೇಂದ್ರಗಳನ್ನು ಗ್ರಾಪಂಗಳ ಸುಪರ್ದಿಗೆ ವಹಿಸಬಾರದು, ಅಂಗನವಾಡಿ ಕೇಂದ್ರಗಳು ಮಕ್ಕಳನ್ನು ಆಕರ್ಷಿಸುವ ಕೇಂದ್ರಗಳಾಗಬೇಕು. ಆದ್ದರಿಂದ ಅಂಗನವಾಡಿ ಕೇಂದ್ರಗಳನ್ನು ಪಾಲನಾ ಮತ್ತು ಕಲಿಕೆಯ ಕೇಂದ್ರಗಳನ್ನಾಗಿಸಬೇಕು.
ವೇಳಾ ಪಟ್ಟಿಯಲ್ಲಿ 3 ಗಂಟೆ ಶಾಲಾಪೂರ್ವ ಶಿಕ್ಷಣಕ್ಕೆ ಆದ್ಯತೆ ನೀಡಬೇಕು ಎಂದು ಒತ್ತಾಯಿಸಿದರು. ಅಂಗನವಾಡಿ ನೌಕರರನ್ನು ಐಸಿಡಿಎಸ್ನ ಉದ್ದೇಶಗಳಿಗೆ ಬಿಟ್ಟು ಉಳಿದ ಹೆಚ್ಚುವರಿ ಕೆಲಸ ನಿಬಂìಧಿ ಸಿ ಶಾಲಾ ಪೂರ್ವ ಶಿಕ್ಷಣಕ್ಕೆ ಒತ್ತು ನೀಡಬೇಕು. ಹೊಸ ಶಿಕ್ಷಣ ನೀತಿಯ ಶಿಫಾರಸ್ಸಿನಲ್ಲಿರುವ 3-8 ವರ್ಷದ ವರ್ಗೀಕರಣ ಕೈ ಬಿಡಬೇಕು. ಮಹಿಳಾ ಮಕ್ಕಳ ಅಭಿವೃದ್ಧಿ ಇಲಾಖೆ ಶಿಫಾರಸ್ಸು ಮಾಡಿರುವ 339.48 ಲಕ್ಷ ಅನುದಾನ ಬಿಡುಗಡೆ ಮಾಡಬೇಕು. ಕೊರೊನಾ ವೇಳೆ ನಿಧನರಾದ ಕುಟುಂಬದವರಿಗೆ ಮಗಳು ಇಲ್ಲದಿದ್ದಾಗ ಸೊಸೆಗೆ ಅವರ ಹುದ್ದೆ ಕೊಡಬೇಕು. ಅನುಕಂಪದ ಆಧಾರದಲ್ಲಿ ಕೆಲಸ ಕೊಡುವಾಗ ಮಗಳು ಬದಲಿಗೆ ಸೊಸೆ ಎಂದು ಬದಲಿಸಬೇಕು.
ಕೋಳಿ ಮೊಟ್ಟೆಯನ್ನು ಆಹಾರ ಪದಾರ್ಥಗಳ ಜೊತೆಯಲ್ಲಿ ಸರಬರಾಜು ಮಾಡಬೇಕು ಎಂಬಿತ್ಯಾದಿ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿದರು. ಸಂಘಟನೆ ಮುಖಂಡರಾದ ಪದ್ಮಾ, ಪಾರ್ವತಿ, ಕೆ.ಜಿ. ವೀರೇಶ್, ಡಿ.ಎಸ್. ಶರಣಬಸವ, ಗೋಕರಮ್ಮ, ಗಂಗಮ್ಮ, ಈಶ್ವರಮ್ಮ ಸೇರಿ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾತೋ ರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ
Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು
Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ
Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ
Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.