ಪಾದಯಾತ್ರೆ ಬಗ್ಗೆ ಸರ್ಕಾರಕ್ಕೆ ಹೈಕೋರ್ಟ್ ಪ್ರಶ್ನೆ : ಸಚಿವ ಅಶ್ವತ್ಥನಾರಾಯಣ್ ಪ್ರತಿಕ್ರಿಯೆ
Team Udayavani, Jan 12, 2022, 3:15 PM IST
ಬೆಂಗಳೂರು : ಕಾಂಗ್ರೆಸ್ ಪಾದಯಾತ್ರೆ ವಿಚಾರವಾಗಿ ಸರ್ಕಾರಕ್ಕೆ ಹೈಕೋರ್ಟ್ ಪ್ರಶ್ನೆ ವಿಚಾರಕ್ಕೆ ಸಂಬಂಧಿಸಿ ಸಚಿವ ಡಾ.ಅಶ್ವತ್ಥನಾರಾಯಣ್ ಅವರು ಬುಧವಾರ ಪ್ರತಿಕ್ರಿಯೆ ನೀಡಿದ್ದು, ತ್ವರಿತವಾಗಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿ, ಸರ್ಕಾರದಿಂದ ಎಲ್ಲಾ ಹಂತದಲ್ಲೂ ಕ್ರಮ ವಹಿಸಿದ್ದೇವೆ. ಕಾಂಗ್ರೆಸ್ ನವರು ಜವಾಬ್ದಾರಿ ಇಲ್ಲದ ಜನಪ್ರತಿನಿಧಿಗಳಾಗಿ ಸಂಪೂರ್ಣ ಜವಾಬ್ದಾರಿ ಮರೆತಿದ್ದಾರೆ. ಕ್ರಮ ವಹಿಸಿ, ಕೇಸ್ ದಾಖಲಿಸಲಾಗಿದೆ. ಬಂಧಿಸುವುದು ಮತ್ತೊಂದರ ಬಗ್ಗೆ ಮುಖ್ಯ ಮಂತ್ರಿಗಳು ಜವಾಬ್ದಾರಿಯುತವಾಗಿ ಕ್ರಮ ತೆಗೆದುಕೊಳ್ಳುತ್ತಾರೆ.ರೂಲ್ಸ್ ಗಾಳಿಗೆ ತೂರಿ, ಕೋವಿಡ್ ಇಲ್ಲ ಎಂದು ಹೇಳುತ್ತಾರೆ. ಇವರಿಗೆ ಯಾರು ಬುದ್ದಿ ಹೇಳುತ್ತಾರೆ ಎಂದು ಪ್ರಶ್ನಿಸಿದರು.
ಇದನ್ನೂ ಓದಿ : ಅನುಮತಿ ನೀಡಿಲ್ಲ ಎಂದಾದ ಮೇಲೆ ಪಾದಯಾತ್ರೆ ತಡೆಯಲು ಹಿಂಜರಿಕೆ ಏಕೆ: ಸರ್ಕಾರಕ್ಕೆ ಹೈಕೋರ್ಟ್
ಕಾಂಗ್ರೆಸ್ ನಾಯಕರಿಗೆ ಸೂಕ್ಷ್ಮವಾಗಿ ಹೇಳಲು ಪ್ರಯತ್ನಿಸಿದ್ದೇವೆ. ಆದರೂ ಸ್ಪಂದಿಸಲಿಲ್ಲ. ತಮ್ಮ ಏಳಿಗೆ, ಸ್ವಾರ್ಥಕ್ಕಾಗಿ ಪಾದಯಾತ್ರೆ ಮಾಡುತ್ತಿದ್ದಾರೆ. ತ್ವರಿತವಾಗಿ ಕಾಂಗ್ರೆಸ್ ನಾಯಕರ ವಿರುದ್ದ ಕ್ರಮ ತೆಗೆದುಕೊಳ್ಳಲಾಗುವುದು. ಜೀವ ರಕ್ಷಣೆ ಹಾಗೂ ಜೀವನೋಪಾಯ ಎರಡೂ ಮುಖ್ಯ ಎಂದರು.
ಕಾಂಗ್ರೆಸ್ ಪಾದಯಾತ್ರೆಯ ಬಗ್ಗೆ ಸರ್ಕಾರದ್ದು ಮೃದು ಧೋರಣೆ ಆಗಿದೆ. ಅದನ್ನ ಸರಿ ಪಡಿಸಲು ಪ್ರಯತ್ನ ಮಾಡುತ್ತೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.