ಏಪ್ರಿಲ್‌ ಕೊನೆವರೆಗೂ ನೀರು ಹರಿಸಿ


Team Udayavani, Jan 13, 2022, 5:23 PM IST

22farmers

ಏಪ್ರಿಲ್‌ ಕೊನೆವರೆಗೂ ನೀರು ಹರಿಸಿಆಲಮಟ್ಟಿ: ಮುಳವಾಡ ಏತನೀರಾವರಿ ಯೋಜನೆಯ 3ನೇ ಹಂತದ ಎಲ್ಲ ಕಾಲುವೆಗಳಿಗೆ ನೀರು ಹರಿಸಿ ಜನಜಾನುವಾರುಗಳಿಗೆ ಕುಡಿಯಲು ನೀರು ಹಾಗೂ ಹಿಂಗಾರು ಹಂಗಾಮಿನ ಬೆಳೆಗಳಿಗೆ ಇನ್ನುಳಿದ ಕಾಲುವೆಗಳಿಗೆ ಏಪ್ರಿಲ್‌ ಕೊನೆಯ ವಾರದವರೆಗೂ ನೀರು ಹರಿಸಬೇಕು ಎಂದು ಅಖಂಡ ಕರ್ನಾಟಕ ರೈತಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಹೇಳಿದರು.

ಇಲ್ಲಿನ ಶ್ರೀರಾಮಲಿಂಗೇಶ್ವರ ದೇವಸ್ಥಾನದಿಂದ ಮೆರವಣಿಗೆಯ ಮೂಲಕ ಕೆಬಿಜೆನ್ನೆಲ್‌ ಮುಖ್ಯ ಅಭಿಯಂತರರ ಕಚೇರಿಗೆ ತೆರಳಿ ಕಚೇರಿಯ ಮುಂದೆ ಕೆಲಕಾಲ ಧರಣಿ ನಡೆಸಿ ಅವರು ಮಾತನಾಡಿದರು.

ಕಳೆದ ತಿಂಗಳು ಬೆಂಗಳೂರಿನಲ್ಲಿ ನಡೆದ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತಗೆದುಕೊಂಡ ನಿರ್ಣಯದಂತೆ ಮಾ.17ರಂದು ಕಾಲುವೆಗಳಿಗೆ ನೀರು ಹರಿಸುವುದನ್ನು ಸ್ಥಗಿತಗೊಳಿಸಲಾಗುತ್ತದೆ. ಇದರಿಂದ ಮುಂಗಾರು ಹಂಗಾಮಿನಲ್ಲಿ ವರುಣನ ಅವಾಂತರದಿಂದ ಎಲ್ಲ ಬೆಳೆಗಳು ಹಾನಿಯಾಗುವಂತಾಗಿದೆ. ಹಿಂಗಾರು ಬೆಳೆಗಳನ್ನಾದರೂ ಪಡೆಯಬೇಕು ಎಂದು ರೈತರು ಇತ್ತೀಚೆಗೆ ಬಿತ್ತನೆ ಮಾಡಿದ್ದಾರೆ. ಬಿತ್ತನೆ ಮಾಡಿದ ಬೆಳೆಗಳ ಫಸಲು ಕೈಗೂಡಬೇಕಾದರೆ ಏಪ್ರಿಲ್‌ ಕೊನೆಯ ವಾರದವರೆಗೂ ಶಾಸ್ತ್ರಿ ಜಲಾಶಯ ವ್ಯಾಪ್ತಿಯ ಎಲ್ಲ ಕಾಲುವೆಗಳಿಗೆ ನೀರು ಹರಿಸಬೇಕು ಎಂದರು.

ಐಸಿಸಿ ಸಭೆಯಲ್ಲಿ ಕೈಗೊಂಡ ನಿರ್ಣಯದಂತೆ ಮುಳವಾಡ ಏತ ನೀರಾವರಿ ಯೋಜನೆ ಹಂತ-3ರಲ್ಲಿ ಬರುವ ಕೆಲ ಕಾಲುವೆಗಳ ಮೂಲಕ ಕುಡಿಯುವ ನೀರು ಹಾಗೂ ಕೆರೆ ತುಂಬಲು ನೀರನ್ನು ಹರಿಸಲಾಗಿದ್ದು, ಇನ್ನುಳಿದ ಮು.ಏ.ನೀ. ಯೋಜನೆಯ ಹಂತ-3ರಲ್ಲಿ ಬರುವ ಕೆಲ ಕಾಲುವೆಗಳಿಗೆ ನೀರು ಹರಿಸದೇ ಇರುವದರಿಂದ ಈ ಹಿಂದೆ ಭರ್ತಿಮಾಡಿದ ಕೆರೆಗಳು ಒಣಗಲಾರಂಭಿಸಿವೆ. ಇನ್ನು ಮುಂದೆ ಬೇಸಿಗೆ ಪ್ರಾರಂಭವಾಗುತ್ತಿದ್ದು, ಜನ ಜಾನುವಾರುಗಳಿಗೆ ಕುಡಿಯಲು ನೀರಿನ ಅಗತ್ಯವಿದೆ. ಕೂಡಲೇ ಕಾಲುವೆಗಳಿಗೆ ನೀರು ಹರಿಸಿ ನೀರು ಖಾಲಿಯಾದ ಕೆರೆಗಳಿಗೆ ನೀರು ತುಂಬಿಸಬೇಕು ಎಂದು ಹೇಳಿದರು.

ಬೆಂಗಳೂರಿನಲ್ಲಿ ನಡೆದ ಐಸಿಸಿ ಸಭೆ ಸಂದರ್ಭದಲ್ಲಿ ಆಲಮಟ್ಟಿ ಆಣೆಕಟ್ಟಿನ ಒಳಹರಿವು ಇಲ್ಲದ ಕಾರಣ ಮಾರ್ಚ್‌ 17ರವರೆಗೆ ಮಾತ್ರ ಕಾಲುವೆಗಳಿಗೆ ನೀರು ಹರಿಸಲು ತೀರ್ಮಾನಿಸಲಾಗಿತ್ತು. ನಂತರ ಆಲಮಟ್ಟಿ ಆಣೆಕಟ್ಟಿನಲ್ಲಿ ಸಾಕಷ್ಟು ನೀರು ಸಂಗ್ರಹವಾಗಿದೆ. ಏಪ್ರಿಲ್‌ ಕೊನೆ ವಾರದವರೆಗೂ ಎಲ್ಲ ಕಾಲುವೆಗಳಿಗೆ ನೀರು ಹರಿಸಬೇಕು ಎಂದರು.

ಜಲಸಂಪನ್ಮೂಲ ಸಚಿವರಿಗೆ ತಮ್ಮ ಬೇಡಿಕೆ ಮನವಿ ತಿಳಿಸಲಾಗುವುದು. ಈ ಹಿಂದೆ ನಡೆದ ಐಸಿಸಿ ಸಭೆಯ ವೇಳೆ ಅವಳಿ ಜಲಾಶಯದಲ್ಲಿ ನೀರಿನ ಲಭ್ಯತೆ ಕಡಿಮೆ ಇರುವುದರಿಂದ ಮಾ.17ರವರೆಗೆ ನೀರು ಹರಿಸಲು ತೀರ್ಮಾನಿಸಲಾಗಿತ್ತು. ನಂತರ ಜಲಾಶಯಕ್ಕೆ ಒಳ ಹರಿವು ಬಂದಿದ್ದರಿಂದ ಕಳೆದ ವರ್ಷಕ್ಕಿಂತಲೂ ಈ ಬಾರಿ ಅಪಾರ ಪ್ರಮಾಣದಲ್ಲಿ ನೀರು ಸಂಗ್ರಹವಾಗಿದೆ. ಮತ್ತೂಮ್ಮೆ ನಡೆಯುವ ಐಸಿಸಿ ಸಭೆಯಲ್ಲಿ ತೀರ್ಮಾನಿಸಿದಂತೆ ಕ್ರಮಕೈಗೊಳ್ಳಲಾಗುವುದು ಎಂದು ಕೆಬಿಜೆಎನ್‌ಎಲ್‌ ಮುಖ್ಯ ಅಭಿಯಂತರ ಎಚ್‌. ಸುರೇಶ, ಭರವಸೆ ನೀಡಿದರು.

ಈರಣ್ಣ ದೇವರಗುಡಿ, ಹೊನಕೇರಪ್ಪ ತೆಲಗಿ, ಚಂದ್ರಶೇಖರ ಕಚನೂರ, ಮಲ್ಲಣ್ಣ ಬ್ಯಾಳಿ, ಲಾಲಸಾಬ ಹಳ್ಳೂರ, ರಾಮಣ್ಣ ಮನ್ಯಾಳ, ಸಾಯಬಣ್ಣ ಹಡಪದ, ಅಮರಯ್ಯ ಚಿಕ್ಕಮಠ, ಸಿದ್ದಲಿಂಗ ಬಿರಾದಾರ, ಬೆಳ್ಳೆಪ್ಪ ಜಕ್ಕೆನಾಳ, ಸಾಯಬಣ್ಣ ಪೂಜಾರಿ, ಮುದಕಪ್ಪ ದೊಡಮನಿ ಮೊದಲಾದವರಿದ್ದರು.

ಟಾಪ್ ನ್ಯೂಸ್

1-IFFI

IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ

1-ree

IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!

isrel netanyahu

Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ

Madikeri-1

Madikeri: ರೈಲ್ವೆ ಕಂಬಿಯ ಬೇಲಿಗೆ ಸಿಲುಕಿದ ಕಾಡಾನೆಯ ರಕ್ಷಣೆ

Kharge

JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ

ಅಗ್ಗಕ್ಕೆ ಸೇಲಾದ ಪಾಂಡೆ, ಬೆಂಗಳೂರಿಗೆ ಬಂದ ಆಸೀಸ್‌ ಆಟಗಾರ

IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್‌ ಗೆ ಬಂಪರ್‌, ಬೆಂಗಳೂರಿಗೆ ಬಂದ ಡೇವಿಡ್

1-Chamundeshwari

Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು

ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Vijayapura: One-year-old child kidnapped from district hospital: Crime detected on CCTV

Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ

kolahara-TV

By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

1-IFFI

IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ

1-ree

IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!

Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ

Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ

isrel netanyahu

Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ

Untitled-1

Mangaluru: ಸೆಕ್ಯುರಿಟಿ ಕೆಲಸ ಮಾಡುತ್ತಿದ್ದ ವ್ಯಕ್ತಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.