ಮುನ್ನೆಚ್ಚರಿಕೆ ಡೋಸ್ ಲಸಿಕಾಕರಣಕ್ಕೆ ಚಾಲನೆ
ಕೋವಿಡ್ 3ನೇ ಅಲೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ.
Team Udayavani, Jan 13, 2022, 6:10 PM IST
ರಾಮದುರ್ಗ: ತಾಲೂಕು ಆಡಳಿತ ಸದೃಢವಾಗಿದ್ದರೆ ತಾಲೂಕು ಸದೃಢವಾಗುತ್ತದೆ. ಈ ನಿಟ್ಟಿನಲ್ಲಿ ಫ್ರಂಟ್ ಲೈನ್ ವಾರಿಯರ್ ಮುನ್ನೆಚ್ಚರಿಕೆ ಡೋಸ್ ಪಡೆದು ಕೊರೊನಾ ವಿರುದ್ಧದ ಅಭಿಯಾನ ಮುಂದುವರಿಸಬೇಕೆಂದು ಶಾಸಕ ಮಹಾದೇವಪ್ಪ ಯಾದವಾಡ ಹೇಳಿದರು.
ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಬುಧವಾರ ಕೋವಿಡ್ ಮುನ್ನೆಚ್ಚರಿಕೆ ಕ್ರಮವಾಗಿ 60 ವರ್ಷ ಮೇಲ್ಪಟ್ಟವರಿಗೆ ನೀಡುವ ಮುನ್ನೆಚ್ಚರಿಕೆ ಡೋಸ್ ಲಸಿಕಾಕರಣಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕೋವಿಡ್ 3ನೇ ಅಲೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ.
ಮುಖ್ಯಮಂತ್ರಿ ಬೊಮ್ಮಾಯಿ ಅವರನ್ನು ಸೇರಿದಂತೆ ಹಲವು ಸಚಿವರಿಗೆ ಸೋಂಕು ಅಂಟಿಕೊಳ್ಳುತ್ತಿದೆ. ಎರಡನೇ ಲಸಿಕೆ ಪಡೆದು 9 ತಿಂಗಳು ನಂತರದ 60 ವರ್ಷ ಮೇಲ್ಪಟ್ಟ ವಯಸ್ಕರು ಮುನ್ನೆಚ್ಚರಿಕೆ ಡೋಸ್ ಲಸಿಕೆ ಪಡೆಯಬೇಕು ಎಂದರು. ತಹಶೀಲ್ದಾರ್ ಮಲ್ಲಿಕಾರ್ಜುನ ಹೆಗ್ಗನ್ನವರ ಮಾತನಾಡಿ, ಸರ್ಕಾರದ ಆದೇಶದನ್ವಯ 60 ವರ್ಷದ ವೃದ್ಧರು ಲಸಿಕೆ ಪಡೆದು ಹೆಚ್ಚು ಸುರಕ್ಷಿತವಾಗಿ ಇರಬೇಕೆಂದು ಹೇಳಿದರು.
ತಾಪಂ ಇಒ ಪ್ರವೀಣಕುಮಾರ ಸಾಲಿ ಸ್ವತಃ ಮುನ್ನೆಚ್ಚರಿಕೆ ಡೋಸ್ ಲಸಿಕೆ ಪಡೆದುಕೊಂಡು ಅಭಿಯಾನಕ್ಕೆ ಚಾಲನೆ ನೀಡಿಡರು. ಈ ವೇಳೆ ತಾಲೂಕು ಆರೋಗ್ಯಾಧಿಕಾರಿ ಡಾ| ಸತೀಶ ಪೋತದಾರ, ಮುಖ್ಯ ವೈದ್ಯಾಧಿಕಾರಿ ಡಾ| ನಿರ್ಮಲಾ ಹಂಜಿ, ಡಿವೈಎಸ್ಪಿ ರಾಮನಗೌಡ ಹಟ್ಟಿ, ಸಿಪಿಐ ಪಟ್ಟಣಶೆಟ್ಟಿ ಇತರರಿದ್ದರು. ಎಸ್.ಡಿ. ಐನಾಪೂರ ಸ್ವಾಗತಿಸಿ, ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
Bailhongal: ಯುವಕನಿಗೆ ಚಾಕು ಇರಿದು ಬರ್ಬರವಾಗಿ ಕೊ*ಲೆ
Belgavi; ಕರಾಳ ದಿನಾಚರಣೆ ನಡೆಸಿದ ಎಂಇಎಸ್ ನವರ ವಿರುದ್ಧ ಪ್ರಕರಣ ದಾಖಲು
Belagavi: ರಾಜ್ಯೋತ್ಸವ ಮೆರವಣಿಗೆ ವೇಳೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ
MUST WATCH
ಹೊಸ ಸೇರ್ಪಡೆ
MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್
Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ
MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ
Mangaluru: ಪರಿಶಿಷ್ಟ ಜಾತಿ ಪಟ್ಟಿಗೆ ಮರುಸೇರ್ಪಡೆ ಆಗ್ರಹಿಸಿ ಕುಡುಬಿ ಸಮಾಜದವರಿಂದ ಜಾಥಾ
Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.