ಜಿಲೆಯಲ್ಲಿ ಶಾಲೆಗಳಿಗೆ ರಜೆ ಇಲ್ಲ : ಶೇ.5ಕ್ಕಿಂತ ಹೆಚ್ಚು ಮಕ್ಕಳಿಗೆ ಸೋಂಕಿದ್ದರೆ ಮಾತ್ರ ರಜೆ
Team Udayavani, Jan 13, 2022, 7:24 PM IST
ಹಾಸನ: ಜಿಲ್ಲೆಯಲ್ಲಿ ಕಳೆದೊಂದು ವಾರದಿಂದ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚುತ್ತಿದ್ದು, ಪರಿಸ್ಥಿತಿ ಆಧರಿಸಿ ಹೆಚ್ಚು ಸೋಂಕಿನ ಪ್ರಕರಣಗಳು ಕಂಡು ಬಂದ ಶಾಲೆ ಕಾಲೇಜುಗಳಿಗೆ ಮಾತ್ರ ರಜೆ ಘೋಷಣೆ ಮಾಡಲಾಗುವುದು. ಯಾವುದೇ ತಾಲೂಕು ಅಥವಾ ಜಿಲ್ಲೆಯ ಎಲ್ಲ ಶಾಲೆ ಕಾಲೇಜುಗಳಿಗೆ ರಜೆ ಘೋಷಣೆ ಮಾಡುವುದಿಲ್ಲ ಎಂದು ಜಿಲ್ಲಾಧಿಕಾರಿ ಆರ್.ಗಿರೀಶ್ ಸ್ಪಷ್ಟಪಡಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಯಾವುದಾದರೂ ಶಾಲೆಯಲ್ಲಿ ಅಥವಾ ಪಿಯು ಕಾಲೇಜಿನಲ್ಲಿ ಒಟ್ಟು ಸಂಖ್ಯೆಯ ಶೇ. 5ಕ್ಕಿಂತ ಹೆಚ್ಚು ಮಕ್ಕಳಿಗೆ ಸೋಂಕು ಕಾಣಿಸಿಕೊಂಡರೆ ಆ ಶಾಲೆ ಅಥವಾ ಕಾಲೇಜಿಗೆ 3 ದಿನ ರಜೆ ಘೋಷಣೆ ಮಾಡಲಾಗುವುದು ಎಂದರು. ಕೊರೊನಾ ಕಾರಣದಿಂದಾಗಿಯೇ ಕಳೆದೆರಡು ವರ್ಷಗಳಿಂದ ಶಾಲೆಗಳಲ್ಲಿ ತರಗತಿಗಳು ಪೂರ್ಣ ಪ್ರಮಾಣದಲ್ಲಿ ನಡೆದಿಲ್ಲ. ಆ ಪರಿಣಾಮ ಮಕ್ಕಳ ಕಲಿಕೆಯಲ್ಲಿ ಕುಂಠಿತವಾಗಿದೆ. ಹಾಗಾಗಿ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡುವುದಿಲ್ಲ. ಪರಿಸ್ಥಿತಿ ಆಧರಿಸಿ ರಜೆ ಘೋಷಣೆ ನಿರ್ಧಾರ ಮಾಡಲಾಗುವುದು. ಹಾಗಾಗಿ ಶಾಲೆಗಳು ನಡೆಯುತ್ತವೆ ಎಂದರು.
ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವಿಟಿ ದರ ಶೇ. 5.45ರಷ್ಟಿದೆ. ಸೋಂಕು ಕಡಿಮೆ ಇರುವ ಜಿಲ್ಲೆಗಳಲ್ಲಿ ಹಾಸನ ಜಿಲ್ಲೆ 8ನೇ ಸ್ಥಾನದಲ್ಲಿದೆ. ಕೊರೊನಾ ನಿಯಂತ್ರಣ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚನೆ ನೀಡಿದ್ದು, ಮಾಸ್ಕ್ ಧರಿಸದವರಿಗೆ ದಂಡ ವಿಧಿಸುವಂತೆ ಸ್ಥಳೀಯ ಸಂಸ್ಥೆಗಳಿಗೆ ಹಾಗೂ ಪೊಲೀಸರಿಗೆ ಸೂಚನೆ ನೀಡಲಾಗುವುದು ಎಂದರು.
ಶೇ.62 ಮಕ್ಕಳಿಗೆ ಲಸಿಕೆ: ಜಿಲ್ಲೆಯಲ್ಲಿ ಇದುವರೆಗೆ ವಯಸ್ಕರಿಗೆ ಶೇ. 100 ಮೊದಲ ಡೋಸ್ ಲಸಿಕೆ ಹಾಕಲಾಗಿದೆ. 2ನೇ ಡೋಸ್ನ್ನು ಶೇ. 87.5 ಜನರು ಹಾಕಿಸಿಕೊಂಡಿದ್ದಾರೆ. ಇನ್ನು ಮೂರ್ನಾಲ್ಕು ದಿನಗಳಲ್ಲಿ ಇನ್ನುಳಿದ ಶೇ. 12.5 ಜನರಿಗೂ 2ನೇ ಡೋಸ್ ನೀಡಲಾಗುವುದು. ಶಾಲಾ ಮಕ್ಕಳ ಪೈಕಿ ಇದುವರೆಗೂ ಶೇ. 62 ಮಂದಿಗೆ ಲಸಿಕೆ ಹಾಕಲಾಗಿದೆ. ಇನ್ನುಳಿದ ಶಾಲಾ ಮಕ್ಕಳಿಗೆ 4- 5 ದಿನಗಳಲ್ಲಿ ಲಸಿಕೆ ಹಾಕಲಾಗುವುದು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Award: ಪ್ರೊ.ತಾಳ್ತಜೆ ವಸಂತ ಕುಮಾರ್ಗೆ ಕನಕ ಗೌರವ ಪ್ರಶಸ್ತಿ
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
Covid Scam: ತನಿಖೆಗೆ ಎಸ್ಐಟಿ?: ಬಿಜೆಪಿಯ ಇಕ್ಕಟ್ಟಿಗೆ ಸಿಲುಕಿಸಲು ಸಿದ್ಧತೆ
Police FIR: ಎಫ್ಐಆರ್ ದಾಖಲಿಸಿ ನನ್ನ ವಿರುದ್ಧ ಸರ್ಕಾರದಿಂದ ದ್ವೇಷ ಸಾಧನೆ: ಎಚ್ಡಿಕೆ
Waqf: ಕಾಂಗ್ರೆಸ್ ನಾಯಕರಿಂದಲೇ 2.70 ಲಕ್ಷ ಕೋಟಿ ಮೌಲ್ಯದ ವಕ್ಫ್ ಆಸ್ತಿ ಕಬಳಿಕೆ: ಯತ್ನಾಳ್
MUST WATCH
ಹೊಸ ಸೇರ್ಪಡೆ
US Polls; ಟ್ರಂಪ್ಗೆ ಗೆಲುವು: ಭವಿಷ್ಯ ನುಡಿದ ಪ್ರಸಿದ್ಧ ನೀರಾನೆ ಮೂಡೆಂಗ್
Award: ಪ್ರೊ.ತಾಳ್ತಜೆ ವಸಂತ ಕುಮಾರ್ಗೆ ಕನಕ ಗೌರವ ಪ್ರಶಸ್ತಿ
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
Covid Scam: ತನಿಖೆಗೆ ಎಸ್ಐಟಿ?: ಬಿಜೆಪಿಯ ಇಕ್ಕಟ್ಟಿಗೆ ಸಿಲುಕಿಸಲು ಸಿದ್ಧತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.