ಕಾನನಕಟ್ಟೆ ಟೋಲ್ ಬಳಿ ಭೀಕರ ಅಪಘಾತ: ಏಳು ಮಂದಿ ಸಾವು!
Team Udayavani, Jan 14, 2022, 9:51 AM IST
ದಾವಣಗೆರೆ: ಜಗಳೂರು ತಾಲೂಕಿನ ಕಾನನಕಟ್ಟೆ ಟೋಲ್ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಏಳು ಜನರು ಮೃತಪಟ್ಟಿರುವ ಘಟನೆ ಶುಕ್ರವಾರ ಬೆಳಗ್ಗೆ ಸಂಭವಿಸಿದೆ.
ಟಾಟಾ ಇಂಡಿಕಾ ಕಾರಿನಲ್ಲಿ ಬೆಂಗಳೂರುನಿಂದ ಹೊಸಪೇಟೆ ಗೆ ತೆರಳುತ್ತಿದ್ದಾಗ ಈ ಘೋರ ದುರಂತ ನಡೆದಿದೆ. ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದ ರಭಸಕ್ಕೆ ಕಾರಿನಲ್ಲಿದ್ದ ಆರು ಜನರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನೊಬ್ಬ ಗಾಯಾಳು ಆಸ್ಪತ್ರೆಗೆ ಸಾಗಿಸುವಾಗ ಮೃತಪಟ್ಟಿದ್ದಾರೆ.
ಇದನ್ನೂ ಓದಿ:ಲಂಚ ಪ್ರಕರಣ: ಪೊಲೀಸ್, ಕಾನ್‌ಸ್ಟೆಬಲ್ ವಿರುದ್ಧ ಪ್ರಕರಣ ದಾಖಲು
ಯಾದಗಿರಿ ಜಿಲ್ಲೆಯ ಶೋರಾಪುರ ತಾಲೂಕಿನ ಕರಡಕಲ್ ಗ್ರಾಮದ ಮಲ್ಲನಗೌಡ (22 ವ), ಮಾಲಗಟ್ಟಿ ಗ್ರಾಮದ ಸಂತೋಷ (21 ವ), ಮಾವಿನಮಟ್ಟಿ ಗ್ರಾಮದ ಸಂಜೀವ್ (20 ವ), ಹೂವಿನಹಳ್ಳಿಯ ಜೈಭೀಮ್ (18 ವ), ವಿಜಯಪುರ ಜಿಲ್ಲೆ ತಾಳಿಕೋಟೆಯ ರಘು (23 ವ), ವಿಜಯನಗರ ಜಿಲ್ಲೆ ಕೂಡ್ಲಿಗಿಯ ಸಿದ್ದೇಶ್ (20 ವ), ಈಚಲಬೊಮ್ಮನಹಳ್ಳಿಯ ವೇದಮೂರ್ತಿ (19 ವ) ಮೃತಪಟ್ಟವರು ಎಂದು ಗುರುತಿಸಲಾಗಿದೆ.
ಕಾರಿನ ಚಾಲಕ ನಿದ್ದೆಯ ಮಂಪರಿನಲ್ಲಿದ್ದು ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ. ಜಿಲ್ಲಾ ರಕ್ಷಣಾಧಿಕಾರಿ ಸಿ.ಬಿ. ರಿಷ್ಯಂತ್ ಹಿರಿಯ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮೃತದೇಹಗಳನ್ನು ಜಗಳೂರು ಆಸ್ಪತ್ರೆಗೆ ರವಾನಿಸಲಾಗಿದೆ. ಜಗಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ
ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Govt Hospital: ಡಿ ಗ್ರೂಪ್ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್ ಗುಂಡೂರಾವ್
ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.