ಶಿಕ್ಷಣ ಹೋರಾಟದ ಅಸ್ತ್ರವಾಗಲಿ


Team Udayavani, Jan 14, 2022, 11:18 AM IST

6education

ವಾಡಿ: ನಮ್ಮ ಜೀವನದುದ್ದಕ್ಕೂ ಶಿಕ್ಷಣದ ಮೂಲಕ ಸಂಪಾದಿಸಿದ ಜ್ಞಾನವನ್ನು ಕೇವಲ ವೈಯಕ್ತಿಕ ಬದುಕಿಗೆ ಸೀಮಿತವಾಗಿಸಿಕೊಳ್ಳದೇ ಶೋಷಣೆಗೊಳಗಾದ ಜನರ ಹೋರಾಟದ ಅಸ್ತ್ರವಾಗಿಸಿ ಎಂದು ಎಂದು ಅಖೀಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ (ಎಐಎಂಎಸ್‌ ಎಸ್‌) ಜಿಲ್ಲಾಧ್ಯಕ್ಷೆ ಗುಂಡಮ್ಮ ಮಡಿವಾಳ ಹೇಳಿದರು.

ಎಐಎಂಎಸ್‌ಎಸ್‌ ಮಹಿಳಾ ಸಂಘಟನೆ ವತಿಯಿಂದ ಪಟ್ಟಣದ ಎಸ್‌ಯುಸಿಐ ಕಾರ್ಯಾಲಯದಲ್ಲಿ ಏರ್ಪಡಿಸಲಾಗಿದ್ದ ಸಾವಿತ್ರಿಬಾಯಿ ಫುಲೆ ಜನ್ಮದಿನಾಚರಣೆ ಕಾರ್ಯಕ್ರಮ ಉದ್ದೇಶಿಸಿ ಅವರು ಮಾತನಾಡಿದರು.

ಮೌಡ್ಯ, ಅಜ್ಞಾನ, ಅಂಧಕಾರದಲ್ಲಿ ಮುಳುಗಿ ಪುರುಷ ಪ್ರಧಾನ ವ್ಯವಸ್ಥೆಯಿಂದ ಶೋಷಣೆಗೊಳಗಾಗಿದ್ದ ಹೆಣ್ಣುಮಕ್ಕಳಿಗೆ ಅಕ್ಷರ ಜ್ಞಾನ ನೀಡುವಲ್ಲಿ ಇಡೀ ಬದುಕು ಮೀಸಲಿಟ್ಟ ಸಾವಿತ್ರಿಬಾಯಿ ಫುಲೆ ಮತ್ತು ಅವರ ಪತಿ ಜ್ಯೋತಿಬಾ ಫುಲೆ ಮಹಾನ್‌ ವ್ಯಕ್ತಿಗಳಾಗಿದ್ದಾರೆ ಎಂದರು.

ಈ ದಂಪತಿಯೊಂದಿಗೆ ಶೈಕ್ಷಣಿಕ ಕ್ರಾಂತಿಗೆ ದನಿಯಾಗಿ ನಿಂತ ಮುಸ್ಲಿಂ ಸಮುದಾಯದ ಮೊದಲ ಶಿಕ್ಷಿತ ಮಹಿಳೆ ಫಾತಿಮಾ ಶೇಖ್‌ ಸಮಾಜದಲ್ಲಿ ಹೊಸ ಸಂಚಲನ ಮೂಡಿಸಿದ್ದರು. ಹೆಣ್ಣುಮಕ್ಕಳ ಶಿಕ್ಷಣಕ್ಕಾಗಿ ಇವರು ತೆರೆದ ಶಾಲೆಗಳನ್ನು ಮುಚ್ಚಲು ಅಂದಿನ ಮಹಿಳಾ ಶಿಕ್ಷಣ ವಿರೋಧಿಗಳು ಶತಾಯಗತಾಯ ಪ್ರಯತ್ನಿಸಿದ್ದರು. ಆದರೆ ಇವುಗಳಿಗೆ ಎದೆಗುಂದದ ಫುಲೆ ದಂಪತಿ ಹೆಣ್ಣಿನ ನಾಲಿಗೆ ಮೇಲೆ ಅಕ್ಷರಗಳನ್ನು ಬರೆದು ಅವರ ಹಣೆಬರಹವನ್ನೇ ಬದಲಿಸಿದರು ಎಂದರು.

ದೇಶದ ವಿವಿಧ ಕ್ಷೇತ್ರಗಳಲ್ಲದೇ ವಿದೇಶಗಳಲ್ಲಿಯೂ ಮಹಿಳೆಯರು ಉನ್ನತ ಹುದ್ದೆ ಅಲಂಕರಿಸಿದ್ದಾರೆ ಎಂದರೆ ಅದಕ್ಕೆ ಸಾವಿತ್ರಿಬಾಯಿ ಫುಲೆ, ಜ್ಯೋತಿಬಾ ಫುಲೆ, ಫಾತಿಮಾ ಶೇಖ್‌, ರಾಜಾರಾಮ ಮೋಹನರಾಯ, ಈಶ್ವರಚಂದ್ರ ವಿದ್ಯಾಸಾಗರ ಕಾರಣರಾಗಿದ್ದಾರೆ ಎಂದರು.

ಶಿಕ್ಷಕಿ ಪದ್ಮರೇಖಾ ವಿ.ಕಾಳೆ ಬೆಳಗುಂದಿ ಮಾತನಾಡಿ, ಎಲ್ಲ ಸಮುದಾಯದ ಮಹಿಳೆಯರಿಗೆ ಶಿಕ್ಷಣ ಕೊಡಲು ಪಣ ತೊಟ್ಟ ಕಾಲದಲ್ಲಿ ಸಾವಿತ್ರಿಬಾಯಿ ಫುಲೆ ಸಮಾಜದಲ್ಲಿನ ಎಲ್ಲ ಅಡೆತಡೆಗಳನ್ನು ದಿಟ್ಟತನದಿಂದ ಎದುರಿಸಿ ಜ್ಞಾನದ ಜ್ಯೋತಿಯಾದರು. ಅವರು ಹಚ್ಚಿದ ಶಿಕ್ಷಣದ ಜ್ಯೋತಿಯನ್ನು ಎತ್ತಿ ಹಿಡಿಯಲು ಸಂಘಟಿತರಾಗೋಣ ಎಂದು ಹೇಳಿದರು.

ಎಐಎಂಎಸ್‌ಎಸ್‌ ಮಹಿಳಾ ಸಂಘಟನೆ ನಗರ ಸಮಿತಿ ಸದಸ್ಯರಾದ ಜಯಶ್ರೀ ಜಿ.ಕುಂಬಾರ, ಕೋಕಿಲಾ ಶರಣು ಹೇರೂರ, ಶಿವಲೀಲಾ ರಮೇಶ ಹಡಪದ, ಶರಣಮ್ಮ ಕುಂಬಾರ, ಸೀತಾಬಾಯಿ ಎಂ.ಹೇರೂರ, ಶರಣಮ್ಮ ಹಡಪದ, ಜ್ಯೋತಿ ರಾಜು ಒಡೆಯರಾಜ, ಶಾಂತಮ್ಮ ನಾಯ್ದೊಡಿ, ಲಕ್ಷ್ಮೀ ಎಸ್‌.ಹೇರೂರ, ರೇಣುಕಾ ಮತ್ತಿತರರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-kharge

Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ

13-

Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

Yathanaa

BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.