ನನ್ ಅತ್ಯಾಚಾರದ ಪ್ರಕರಣ : ರೋಮನ್ ಕ್ಯಾಥೋಲಿಕ್ ಬಿಷಪ್ ಖುಲಾಸೆ
Team Udayavani, Jan 14, 2022, 4:53 PM IST
ತಿರುವನಂತಪುರಂ : ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿದ್ದ ಕೇರಳದ ಧರ್ಮಪ್ರಚಾರಕಿ (ನನ್ ) ಅತ್ಯಾಚಾರದ ಪ್ರಕರಣದ ಅಂತಿಮ ತೀರ್ಪು ಶುಕ್ರವಾರ (ಜನವರಿ 14) ಪ್ರಕಟಗೊಂಡಿದ್ದು ನ್ಯಾಯಾಲಯವು ರೋಮನ್ ಕ್ಯಾಥೋಲಿಕ್ ಬಿಷಪ್ ಫ್ರಾಂಕೋ ಮುಳಾಕಲ್ ಅವರನ್ನು ಅತ್ಯಾಚಾರ ಆರೋಪದಿಂದ ಖುಲಾಸೆಗೊಳಿಸಿದೆ.
ಆರೋಪಿಗಳ ವಿರುದ್ಧ ಸಾಕ್ಷ್ಯವನ್ನು ಸಲ್ಲಿಸಲು ಪ್ರಾಸಿಕ್ಯೂಷನ್ ವಿಫಲವಾದ ಕಾರಣ, ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ II ಬಿಷಪ್ ಅವರನ್ನು ಖುಲಾಸೆಗೊಳಿಸಿದೆ.
೨೦೧೪ರಿಂದ ೨೦೧೬ರ ಅವಧಿಯಲ್ಲಿ ಕೊಟ್ಟಾಯಂನಲ್ಲಿ ಬಿಷಪ್ ಫ್ರಾಂಕೋ ಮುಳಾಕಲ್ ಎಂಬುವರು ತಮ್ಮ ಮೇಲೆ ನಿರಂತರ ಅತ್ಯಾಚಾರ ನಡೆಸಿದ್ದಾರೆ ಎಂದು ನನ್ ಒಬ್ಬರು ಆರೋಪಿಸಿದ್ದರು. ಈ ಪ್ರಕರಣ ತೀವ್ರ ವಿವಾದಕ್ಕೆ ಕಾರಣವಾಗಿತ್ತು. ಈ ಬಗ್ಗೆ ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಾಲಯ ಇಂದು ತೀರ್ಪು ಪ್ರಕಟಿಸಿದೆ. ನ್ಯಾಯಾಲಯಕ್ಕೆ ಬಿಗಿ ಪೊಲೀಸ್ ವ್ಯವಸ್ಥೆ ಮಾಡಲಾಗಿತ್ತು. , 100 ಕ್ಕೂ ಹೆಚ್ಚು ಪೊಲೀಸರು ಹಾಗೂ ಬಾಂಬ್ ನಿಷ್ಕ್ರೀಯ ದಳವನ್ನು ನಿಯೋಜಿಸಲಾಗಿತ್ತು.
57 ವರ್ಷದ ಮುಳಾಕಲ್ ಅವರು ರೋಮನ್ ಕ್ಯಾಥೋಲಿಕ್ ಚರ್ಚ್ನ ಜಲಂಧರ್ ಡಯಾಸಿಸ್ನ ಬಿಷಪ್ ಆಗಿದ್ದಾಗ ಈ ಜಿಲ್ಲೆಯ ಕಾನ್ವೆಂಟ್ಗೆ ಭೇಟಿ ನೀಡಿದ ಸಂದರ್ಭದಲ್ಲಿ ಸನ್ಯಾಸಿನಿಯ ಮೇಲೆ ಅನೇಕ ಬಾರಿ ಅತ್ಯಾಚಾರವೆಸಗಿದ್ದಾರೆ ಎಂದು ಆರೋಪಿಸಲಾಗಿತ್ತು.
2018 ರಲ್ಲಿ ತಾವು ಕೆಲಸ ಮಾಡುತ್ತಿದ್ದ ಕಾನ್ವೆಂಟ್ಗೆ ರಾತ್ರಿ ಆಗಮಿಸಿದ ಬಿಷಪ್ ತಮ್ಮನ್ನು ಕೊಠಡಿಗೆ ಕರೆದು ಅಸ್ವಾಭಾವಿಕ ಲೈಂಗಿಕ ಕ್ರಿಯೆಗೆ ಒತ್ತಾಯಿಸಿzದ್ದರು. ನಿರಾಕರಿಸಿದ್ದಕ್ಕೆ ಬಲವಂತವಾಗಿ ಅತ್ಯಾಚಾರ ನಡೆಸಿದ್ದರು. ಒಟ್ಟು 12 ಭಾರಿ ಅತ್ಯಾಚಾರ ನಡೆಸಿದ್ದರು ಎಂದು ನನ್ ಆರೋಪಿಸಿದ್ದರು.
ಈ ಘಟನೆ ಹಿನ್ನೆಲೆಯಲ್ಲಿ ಕೇರಳದಲ್ಲಿ ಭಾರಿ ಪ್ರತಿಭಟನೆ ನಡೆದಿತ್ತುಕ್ರೈಸ್ತ ಸನ್ಯಾಸಿಗಳು ಹಾಗೂ ಧರ್ಮಾನುಯಾಯಿಗಳು ಕ್ರಮಕ್ಕೆ ಆಗ್ರಹಿಸಿ ಭಾರಿ ಪ್ರತಿಭಟನೆ ನಡೆಸಿದ್ದರು. 2018ರಲ್ಲಿ ಬಿಷಪ್ ಫ್ರಾಂಕೋ ಅವರನ್ನು ಬಂಧಿಸಲಾಗಿತ್ತು. ಅತ್ಯಾಚಾರ ಪ್ರಕರಣ ಸಂಬಂಧ ಬಂಧನಕ್ಕೆ ಒಳಗಾದ ಮೊದಲ ಕ್ಯಾಥಲಿಕ್ ಬಿಷಪ್ ಅವರಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Panaji: ಗೋವಾಕ್ಕೆ ಬರುತ್ತಿದ್ದ ವಿಮಾನದಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ; ಆರೋಪಿ ಬಂಧನ
UP bypolls; ನಿಯಮ ಉಲ್ಲಂಘನೆ: 7 ಪೊಲೀಸರನ್ನು ಅಮಾನತುಗೊಳಿಸಿದ ಚುನಾವಣ ಆಯೋಗ
Kallakurichi ಕಳ್ಳಭಟ್ಟಿ ದುರಂತ: ಪ್ರಕರಣ ಸಿಬಿಐಗೆ ನೀಡಿದ ಮದ್ರಾಸ್ ಹೈಕೋರ್ಟ್
Tragedy: ಶಾಲಾ ಆವರಣದಲ್ಲೇ ಶಿಕ್ಷಕಿಯ ಬರ್ಬರ ಹತ್ಯೆ… ಮದುವೆ ನಿರಾಕರಿಸಿದ್ದೆ ಮುಳುವಾಯಿತು
Panaji: 55ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಉದ್ಘಾಟನಾ ಸಮಾರಂಭಕ್ಕೆ ಕ್ಷಣಗಣನೆ ಆರಂಭ
MUST WATCH
ಹೊಸ ಸೇರ್ಪಡೆ
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Kollywood: ಯೂಟ್ಯೂಬ್ ವಿಮರ್ಶೆ ಬ್ಯಾನ್ ಮಾಡಲು ತಮಿಳು ನಿರ್ಮಾಪಕರ ಸಂಘ ಆಗ್ರಹ
ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್
Tulsi Health Benefits: ತುಳಸಿ ಗಿಡದ ಔಷಧೀಯ ಗುಣಗಳ ಮಾಹಿತಿ ಇಲ್ಲಿವೆ…
Panaji: ಗೋವಾಕ್ಕೆ ಬರುತ್ತಿದ್ದ ವಿಮಾನದಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ; ಆರೋಪಿ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.